Publish Date: Mon, 02 Apr 2018 (09:34 IST)
Updated Date: Mon, 02 Apr 2018 (09:36 IST)
ಬೆಂಗಳೂರು: ರಾಜ್ಯ ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯಗೆ ಮಣ್ಣು ಮುಕ್ಕಿಸಲು ರಣತಂತ್ರ ಹೆಣೆಯುತ್ತಿರುವ ಬಿಜೆಪಿ ನಾಯಕರು ಸಿಎಂ ಪುತ್ರ ಡಾ. ಯತೀಂದ್ರ ಸ್ಪರ್ಧಿಸಲಿರುವ ವರುಣಾ ಕ್ಷೇತ್ರಕ್ಕೆ ತಕ್ಕ ಅಭ್ಯರ್ಥಿಯನ್ನೇ ಆಯ್ಕೆ ಮಾಡಿದೆ.
ಯತೀಂದ್ರಗೆ ಎದುರಾಳಿಯಾಗಿ ಬಿಜೆಪಿಯಿಂದ ಬಿಎಸ್ ವೈ ಪುತ್ರ ವಿಜಯೇಂದ್ರರನ್ನು ಕಣಕ್ಕಿಳಿಸಲು ಬಿಜೆಪಿ ಚಿಂತನೆ ನಡೆಸಿದೆ. ಇದಕ್ಕಾಗಿ ಪಕ್ಷದ ಕಾರ್ಯಕರ್ತರೂ ಒತ್ತಾಯ ಮಾಡುತ್ತಿದ್ದಾರೆ. ಒಂದು ವೇಳೆ ಹೈಕಮಾಂಡ್ ಒಪ್ಪಿದರೆ ವರುಣಾ ಕ್ಷೇತ್ರ ಹಾಲಿ ಸಿಎಂ ಪುತ್ರ ವರ್ಸರ್ ಮಾಜಿ ಸಿಎಂ ಪುತ್ರನಿಗೆ ಸಾಕ್ಷಿಯಾಗಲಿದೆ.
ಇದು ನಿಜವಾದರೆ ವರುಣಾ ಕ್ಷೇತ್ರ ರಾಜ್ಯದ ಪ್ರತಿಷ್ಠೆಯ ಕಣಗಳಲ್ಲೊಂದಾಗಲಿದೆ. ಈಗಾಗಲೇ ಬಿಎಸ್ ವೈ ಕೂಡಾ ತಮ್ಮ ಪುತ್ರನನ್ನು ಯತೀಂದ್ರ ವಿರುದ್ಧ ಕಣಕ್ಕಿಳಿಸಲು ಉತ್ಸುಕರಾಗಿದ್ದಾರೆ. ಸದ್ಯದಲ್ಲೇ ಬಿಡುಗಡೆಯಾಗಲಿರುವ ಬಿಜೆಪಿ ಟಿಕೆಟ್ ಪಟ್ಟಿಯಲ್ಲಿ ಇದಕ್ಕೆ ಉತ್ತರ ಸಿಗಲಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ