Publish Date: Mon, 23 Apr 2018 (18:54 IST)
Updated Date: Mon, 23 Apr 2018 (18:56 IST)
ಮೈಸೂರು: ಬಿಎಸ್ ಯಡಿಯೂರಪ್ಪ ಪುತ್ರ ಬಿವೈ ವಿಜಯೇಂದ್ರಗೆ ವರುಣಾ ಕ್ಷೇತ್ರದಲ್ಲಿ ಟಿಕೆಟ್ ಕೈ ತಪ್ಪಿದ ಹಿನ್ನಲೆಯಲ್ಲಿ ಕಾರ್ಯಕರ್ತರ ಆಕ್ರೋಶ ಮುಗಿಲು ಮುಟ್ಟಿದೆ.
ಬಿಜೆಪಿ ನಾಯಕರಾದ ಕೇಂದ್ರ ಸಚಿವ ಅನಂತ ಕುಮಾರ್, ಸಂಸದ ಪ್ರತಾಪ್ ಸಿಂಹ, ಬಿಎಲ್ ಸಂತೋಷ್ ಆರ್ ಅಶೋಕ್ ಭಾವಚಿತ್ರಗಳಿಗೆ ಚಪ್ಪಲಿ ಎಸೆದು ಕಾರ್ಯಕರ್ತರು ತಮ್ಮ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಬಿಎಸ್ ವೈ ಪುತ್ರನಿಗೆ ಟಿಕೆಟ್ ಕೊಡುವವರೆಗೂ ಹೋರಾಟ ಮುಂದುವರಿಸುವುದಾಗಿ ಕಾರ್ಯಕರ್ತರು ಎಚ್ಚರಿಕೆ ನೀಡಿದ್ದಾರೆ. ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಮಾಡುತ್ತಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.