ರಾಜ್ಯದಲ್ಲಿ ಇನ್ನೆಷ್ಟು ಸಾವಾಗಬೇಕು ಸಿದ್ದರಾಮಯ್ಯನವರೇ?: ಬಿಎಸ್‌ವೈ ಆಕ್ರೋಶ

Webdunia
ಶನಿವಾರ, 16 ಸೆಪ್ಟಂಬರ್ 2017 (14:00 IST)
ರಾಜ್ಯದಲ್ಲಿ ಎರಡು ಸಾವಿರ ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಹಿಂದು ಪರ ನಾಯಕರ ಹತ್ಯೆಯಾಗುತ್ತಿವೆ ಇನ್ನು ಎಷ್ಟು ಜನರ ಸಾವಾಗಬೇಕು ಮುಖ್ಯಮಂತ್ರಿ ಸಿದ್ದರಾಮಯ್ಯನವರೇ? ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಗುಡುಗಿದ್ದಾರೆ.
ನಗರದ ಮೌರ್ಯಸರ್ಕಲ್ ಬಳಿ ಆಯೋಜಿಸಲಾದ ಬಿಜೆಪಿ ಪ್ರತಿಭಟನಾ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರಾಜ್ಯದಲ್ಲಿ ಅನೇಕ ಪ್ರಾಮಾಣಿಕ ಅಧಿಕಾರಗಳು ಅನುಮಾನಾಸ್ಪದವಾಗಿ ಸಾವನ್ನಪ್ಪುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
 
ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆ.26 ರೊಳಗೆ ನಗರಾಭಿವೃದ್ಧಿ ಖಾತೆ ಸಚಿವ ಕೆ.ಜೆ.ಜಾರ್ಜ್ ರಾಜೀನಾಮೆ ಪಡೆಯಬೇಕು ಎಂದು ಗಡುವು ವಿಧಿಸಿದ ಅವರು, ಸೆ.26 ರ ನಂತರ ಆಹೋರಾತ್ರಿ ಹೋರಾಟ ನಡೆಸಲಾಗುವುದು ಎಂದು ಸರಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
 
ರಾಜ್ಯದಲ್ಲಿ ಆತ್ಮಹತ್ಯೆಗಳು, ಹತ್ಯೆಗಳು, ಅನುಮಾನಾಸ್ಪದ ಸಾವುಗಳು ಸಂಭವಿಸುತ್ತಿದ್ದರೂ ಸಿಎಂ ಸಿದ್ದರಾಮಯ್ಯ ಇನ್ನೂ ನಿದ್ರೆಯಲ್ಲಿದ್ದಾರೆ. ಎಚ್ಚೆತ್ತುಕೊಳ್ಳುವ ಜಾಯಮಾನ ಅವರದಲ್ಲ. ಪ್ರತಿಭಟನೆಗಳ ಮೂಲಕ ಅವರನ್ನು ಬಡಿದೆಬ್ಬಿಸುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಹ್ಲಾದ್ ಜೋಶಿ, ಸೋಮಣ್ಣ ರಾಜ್ಯದಲ್ಲಿ ಹೇಗೆ ಮುಖ ತೋರಿಸುತ್ತಾರೆ: ಎಂಬಿ ಪಾಟೀಲ್

ಕೇಂದ್ರ ಬಜೆಟ್‌ನಿಂದ ರಾಜ್ಯಕ್ಕೆ ನೀಡಿದ ಪಾಲಿನ ಬಗ್ಗೆ ಡಿಕೆ ಶಿವಕುಮಾರ್ ಪ್ರತಿಕ್ರಿಯೆ

ಇಷ್ಟು ಜನರ ಪ್ರೀತಿ ಗಳಿಸಿದ್ದೀಯಲ್ಲಾ ಅಣ್ಣಾ..: ಡಿಕೆಶಿಗೆ ವಿಜಯ್ ಪ್ರಕಾಶ್ ಹೊಗಳಿಕೆ

Union Budget 2026: ರಾಜ್ಯಕ್ಕೆ ನಿರೀಕ್ಷಿಸಿದಷ್ಟು ಅನುದಾನ ಸಿಕ್ಕಿದೆಯೇ

ವಿಕಸಿತ ಭಾರತದ ಸಂಕಲ್ಪಕ್ಕೆ ಪೂರಕ ಬಜೆಟ್: ವಿಜಯೇಂದ್ರ

ಮುಂದಿನ ಸುದ್ದಿ
Show comments