Select Your Language

Notifications

webdunia
webdunia
webdunia
webdunia

ಸಿಎಂ ಸಿದ್ರಾಮಯ್ಯನವರೇ ನಾಲಿಗೆ ಬಿಗಿಹಿಡಿದು ಮಾತನಾಡಿ: ಬಿಎಸ್‌ವೈ

ಸಿಎಂ ಸಿದ್ರಾಮಯ್ಯನವರೇ ನಾಲಿಗೆ ಬಿಗಿಹಿಡಿದು ಮಾತನಾಡಿ: ಬಿಎಸ್‌ವೈ
ಕುಣಿಗಲ್ , ಗುರುವಾರ, 2 ನವೆಂಬರ್ 2017 (20:12 IST)
ಸಿಎಂ ಸಿದ್ದರಾಮಯ್ಯನವರೇ ನಾಲಿಗೆ ಬಿಗಿ ಹಿಡಿದು ಮಾತನಾಡಿ. ನಿಮ್ಮ ಸೊಕ್ಕಿಗೂ ಇತಿ ಮಿತಿ ಇರಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಾಕೀತು ಮಾಡಿದ್ದಾರೆ.
ನವಕರ್ನಾಟಕ ಪರಿವರ್ತನಾ ಯಾತ್ರೆಯ ಅಂಗವಾಗಿ ಆಯೋಜಿಸಲಾದ ಬೃಹತ್ ಸಮಾವೇಶದಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅಧಿಕಾರದ ಮದದಿಂದ ಮೆರೆಯುತ್ತಿದ್ದಾರೆ. ಪ್ರಧಾನಿ ಮೋದಿ, ಅಮಿತ್ ಶಾ ವಿರುದ್ಧ ಮನಬಂದಂತೆ ವಾಗ್ದಾಳಿ ನಡೆಸುತ್ತಿದ್ದಾರೆ ಎಂದು ಕಿಡಿಕಾರಿದರು.
 
ಬಿಬಿಎಂಪಿ ಕಾರ್ನರ್‌ಸೈಟ್ ಅಡವಿಟ್ಟು 950 ಕೋಟಿ ರೂಪಾಯಿ ಸಾಲ ಮಾಡಿದೆ. ವಿಧಾನಸೌಧ ಕೂಡಾ ಅಡವಿಡುವ ದಿನಗಳು ದೂರವಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
 
ಬಿಜೆಪಿ ಸರಕಾರ ಬಂದಾಗ ನಿಮ್ಮನ್ನು ಬಟಾ ಬಯಲು ಮಾಡುತ್ತೇನೆ. ನಿವೃತ್ತ ನ್ಯಾಯಮೂರ್ತಿಯನ್ನು ನೇಮಿಸಿ ತನಿಖೆ ನಡೆಸುತ್ತೇನೆ. ನಿಮ್ಮ ಗೊಡ್ಡು ಬೆದರಿಕೆಗಳಿಗೆ ನಾವು ಹೆದರುವುದಿಲ್ಲ ಎಂದು ತಿರುಗೇಟು ನೀಡಿದ್ದಾರೆ.
 
ನಾನು ಕೊಟ್ಟ ಎಲ್ಲಾ ಭರವಸೆಗಳನ್ನು ಈಡೇರಿಸುತ್ತೇನೆ ಎಂದು ರಕ್ತದಲ್ಲಿ ಬರೆದುಕೊಡುತ್ತೇನೆ. ಕಾಂಗ್ರೆಸ್ ಮುಖಂಡರ ಬೆದರಿಕೆಗಳಿಗೆ ನಾವು ಹೆದರುವುದಿಲ್ಲ. ಮುಂಬರುವ ದಿನಗಳಲ್ಲಿ ತಕ್ಕ ಪಾಠ ಕಲಿಸುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಗುಡುಗಿದ್ದಾರೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಅತ್ಯಾಚಾರಕ್ಕೆ ಪ್ರತಿಭಟಿಸಿದ ಮಹಿಳೆಯ ಸಜೀವ ದಹನ