Select Your Language

Notifications

webdunia
webdunia
webdunia
webdunia

ಬಿಜೆಪಿ ಶಾಸಕರಿಗೆ ಖಡಕ್ ಎಚ್ಚರಿಕೆ ನೀಡಿದ ಸಿಎಂ ಯಡಿಯೂರಪ್ಪ

ಡಿಕೆ ಶಿವಕುಮಾರ್
ಬೆಂಗಳೂರು , ಬುಧವಾರ, 4 ಸೆಪ್ಟಂಬರ್ 2019 (14:48 IST)
ಬೆಂಗಳೂರು : ಡಿಕೆ ಶಿವಕುಮಾರ್ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿರುವ ಹಿನ್ನಲೆಯಲ್ಲಿ ಸಿಎಂ ಯಡಿಯೂರಪ್ಪ ಬಿಜೆಪಿ ಶಾಸಕರಿಗೆ ಖಡಕ್ ಎಚ್ಚರಿಕೆಯೊಂದನ್ನು ನೀಡಿದ್ದಾರೆ.




ಡಿಕೆ ಶಿವಕುಮಾರ್ ಅವರ ಬಂಧನದ ಹಿನ್ನಲೆ ರಾಜ್ಯದ ಹಲವೆಡೆ ಪ್ರತಿಭಟನೆಗಳು ನಡೆಯುತ್ತಿದೆ. ಅಮಿತ್ ಶಾ, ಪ್ರಧಾನಿ ಮೋದಿ, ಸಿಎಂ ಯಡಿಯೂರಪ್ಪ ವಿರುದ್ಧ ಡಿಕೆಶಿ ಬೆಂಬಲಿಗರು ಘೋಷಣೆಗಳನ್ನು ಕೂಗುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಡಿ.ಕೆ.ಶಿವಕುಮಾರ್ ಬಂಧನವಾಗಿರುವ ಕುರಿತು ಮಾಧ್ಯಮಗಳಿಗೆ ಯಾವುದೇ ಹೇಳಿಕೆ ನೀಡಬಾರದು ಎಂದು ಬಿಜೆಪಿ ಶಾಸಕರಿಗೆ ಸಿಎಂ ಬಿ.ಎಸ್. ಯಡಿಯೂರಪ್ಪ ಖಡಕ್ ಸೂಚನೆ ಕೊಟ್ಟಿದ್ದಾರೆ ಎನ್ನಲಾಗಿದೆ.


ಡಿಸಿಎಂಗಳು ಮತ್ತು ಗೃಹ ಸಚಿವರನ್ನು ಹೊರತುಪಡಿಸಿ ಬೇರೆ ಯಾರೂ ಪ್ರಕರಣದ ಬಗ್ಗೆ ಮಾತನಾಡಬಾರದು. ಒಂದು ವೇಳೆ ಮಾತನಾಡಿದರೆ ಅಂಥವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ ಎನ್ನಲಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಹಿಂದೂ ಹಿಂದೂ ಎನ್ನುವವರು ಹಬ್ಬದಂದು ತಂದೆಗೆ ಎಡೆ ಇಡಲು ಬಿಡುತ್ತಿದ್ದರೆ ಏನಾಗುತ್ತಿತ್ತು- ಬಿಜೆಪಿಯನ್ನು ಪ್ರಶ್ನಿಸಿದ ಸಿಎಂ ಇಬ್ರಾಹಿಂ