ವಿಮಾನ ನಿಲ್ದಾಣಕ್ಕೆ ನನ್ನ ಹೆಸರು ಬೇಡವೆಂದ ಬಿಎಸ್‌ವೈ?

Webdunia
ಭಾನುವಾರ, 24 ಏಪ್ರಿಲ್ 2022 (13:31 IST)
ಶಿವಮೊಗ್ಗ : ಇಲ್ಲಿನ ವಿಮಾನ ನಿಲ್ದಾಣಕ್ಕೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೆಸರಿಡುವ ಘೋಷಣೆ ಕೇಳಿಬಂದ ಬೆನ್ನಲ್ಲೇ ತಮ್ಮ ಹೆಸರು ಇಡುವುದು ಬೇಡವೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ.

ಶಿವಮೊಗ್ಗ ಜಿಲ್ಲೆಯಲ್ಲಿ ಬಹುದಿನದ ಕನಸಾದ ವಿಮಾನ ನಿಲ್ದಾಣ ಸ್ಥಾಪನೆ ನನಸಾಗುತ್ತಿದೆ. ಇಲ್ಲಿನ ಸೋಗಾನೆಯಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣದ ಕಾಮಗಾರಿಯನ್ನು ಶೀಘ್ರವೇ ಪೂರ್ಣಗೊಳಿಸಲು ಅಗತ್ಯ ಅನುದಾನವನ್ನು ಬಿಡುಗಡೆ ಮಾಡುವುದಾಗಿ ತಿಳಿಸಿದ್ದೀರಿ ಇದಕ್ಕೆ ಧನ್ಯವಾದಗಳು ಎಂದು ಹೇಳಿದ್ದಾರೆ. 

ಈ ನಿಲ್ದಾಣಕ್ಕೆ ನನ್ನ ಹೆಸರನ್ನಿಡುವುದಾಗಿ ತಾವು ಘೋಷಿಸಿರುತ್ತೀರಿ. ತಮ್ಮ ಈ ವಿಶೇಷ ಪ್ರೀತಿ, ಅಭಿಮಾನಕ್ಕೆ ಧನ್ಯವಾದಗಳು. ಇದಕ್ಕಾಗಿ ಜಿಲ್ಲೆಯ ಎಲ್ಲ ಶಾಸಕರು, ವಿಧಾನ ಪರಿಷತ್ ಸದಸ್ಯರು, ಸಂಘಸಂಸ್ಥೆಗಳು ಹಾಗೂ ಎಲ್ಲ ಮುಖಂಡರಿಗೆ ನನ್ನ ಕೃತಜ್ಞತೆಗಳು.

ದೇಶದ ಅಭಿವೃದ್ಧಿಗೆ ಸೇವೆ ಸಲ್ಲಿಸಿದ ಅನೇಕ ಮಹನೀಯರು ಹಾಗೂ ದೇಶಭಕ್ತರಿದ್ದಾರೆ. ಅವರು ನೀಡಿರುವ ಕೊಡುಗೆಗೆ ಹೋಲಿಸಿದಾಗ ನನ್ನದೊಂದು ಅಳಿಲು ಸೇವೆ ಮಾತ್ರ. ನನ್ನನ್ನು ಸತತವಾಗಿ ಬೆಂಬಲಿಸಿ ಸಲುಹಿದ ಜಿಲ್ಲೆಯ ಜನತೆಗೆ ಸೇವೆ ಮಾಡಿದ್ದೇನೆಂಬ ಧನ್ಯತಾಭಾವ ನನ್ನದು. ಈ ಹಿನ್ನೆಲೆಯಲ್ಲಿ ನನ್ನ ಹೆಸರು ಸೂಕ್ತವಲ್ಲವೆಂದು ಭಾವಿಸುತ್ತೇನೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಷ್ಟ್ರ ರಾಜಧಾನಿಯಲ್ಲಿ ಇಂದು ಎಷ್ಟು ಇಂಡಿಗೋ ವಿಮಾನ ಹಾರಾಟ ರದ್ದು ಗೊತ್ತಾ

Big Shocking: ರಾಜ್ಯದಲ್ಲಿ ಕ್ಯಾನ್ಸರ್ ಪ್ರಕರಣದಲ್ಲಿ ಹೆಚ್ಚಳ

ಬಿಜೆಪಿ ಚುನಾವಣೆಗಾಗಿ, ನಾವು ದೇಶಕ್ಕಾಗಿ: ಪ್ರಿಯಾಂಕಾ ಗಾಂಧಿ ಕಿಡಿ

ಗುಜರಾತ್ ಸರ್ಕಾರ ರೈತರ ಮೇಲೆ ಲಾಠಿ ಚಾರ್ಜ್ ಮಾಡಿದೆ: ಅರವಿಂದ್ ಕೇಜ್ರಿವಾಲ್

ಶುಭ್ಮನ್ ಗಿಲ್, ಹಾರ್ದಿಕ್ ಪಾಂಡ್ಯ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸೂರ್ಯಕುಮಾರ್ ಯಾದವ್

ಮುಂದಿನ ಸುದ್ದಿ
Show comments