Select Your Language

Notifications

webdunia
webdunia
webdunia
Tuesday, 15 April 2025
webdunia

ಗಾಲಿ ಜನಾರ್ಧನ ರೆಡ್ಡಿ ಬಿಜೆಪಿಯಲ್ಲಿ ಇಲ್ಲ ಎಂದ ಬಿ ಎಸ್ ವೈ

ಜನಾರ್ಧನ ರೆಡ್ಡಿ
ಮಂಗಳೂರು , ಗುರುವಾರ, 8 ನವೆಂಬರ್ 2018 (18:41 IST)
ಮಾಜಿ ಸಚಿವ ಗಾಲಿ ಜನಾರ್ಧನರೆಡ್ಡಿ ಈಗ ಬಿಜೆಪಿಯಲ್ಲಿ ಇಲ್ಲ. ಅವರ ವಿರುದ್ಧ ಕೇಳಿಬಂದಿರುವ ಆರೋಪಗಳ ಬಗ್ಗೆ ಸರಿಯಾದ ಮಾಹಿತಿ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹೇಳಿದ್ದಾರೆ.

ಮಾಜಿ ಸಚಿವ ಗಾಲಿ ಜನಾರ್ಧನರೆಡ್ಡಿ ಈಗ ಬಿಜೆಪಿಯಲ್ಲಿ ಇಲ್ಲ. ಅವರ ಮೇಲಿನ ಆರೋಪದ ಬಗ್ಗೆ ತಮಗೆ ಯಾವುದೇ ಮಾಹಿತಿ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಪ್ಪು ಮಾಡಿದವರ ವಿರುದ್ಧ ಕಾನೂನು ಕ್ರಮ ಆಗಬೇಕು ಎಂದಷ್ಟೇ ಹೇಳಿದರು. ಉಪಚುನಾವಣೆ ಫಲಿತಾಂಶದ ಬಗ್ಗೆ ಮಾತನಾಡುವುದಿಲ್ಲ ಎಂದೂ ಹೇಳಿದರು.  ಕೇರಳದಲ್ಲಿ ಬಿಜೆಪಿ ಆರಂಭಿಸಲಿರುವ ರಥಯಾತ್ರೆ ಚಾಲನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಯಡಿಯೂರಪ್ಪನವರು ಮಂಗಳೂರಿನಿಂದ ಕೇರಳಕ್ಕೆ ತೆರಳಿದರು.



Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿ ಗೆಲುವಿನ ಕಡಿವಾಣಕ್ಕೆ ರಾಹುಲ್-ಸಿಎಂ ಭೇಟಿ