Publish Date: Sat, 06 Oct 2018 (11:48 IST)
Updated Date: Sat, 06 Oct 2018 (11:51 IST)
ಶಿವಮೊಗ್ಗ : ರಾಜ್ಯದಲ್ಲಿ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಹಿನ್ನಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ತುಘಲಕ್ ಸರ್ಕಾರವಿದ್ದು, ಸಾಲಮನ್ನಾ ವಿಚಾರದಲ್ಲಿ ಜನರಿಗೆ ತೆರಿಗೆ ವಂಚನೆ ಮಾಡುವುದನ್ನು ಸಿಎಂ ಕುಮಾರಸ್ವಾಮಿ ಕೈಬಿಡಬೇಕು. ರಾಜ್ಯದಲ್ಲಿ ರೈತರ ಆತ್ಮಹತ್ಯೆಗಳು ಮುಂದುವರೆದಿವೆ. ರಾಷ್ಟ್ರೀಕೃತ ಬ್ಯಾಂಕ್ ಗಳಿಂದ ರೈತರಿಗೆ ನಿರಂತರ ನೋಟಿಸ್ ನೀಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.
ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ. ರಾಜ್ಯದ ಇತಿಹಾಸದಲ್ಲೇ ಇಂತಹ ಸರ್ಕಾರವನ್ನು ನೋಡಿಲ್ಲ’ ಎಂದು ಅವರು ರಾಜ್ಯಾ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.