Publish Date: Mon, 09 Jul 2018 (11:05 IST)
Updated Date: Mon, 09 Jul 2018 (11:07 IST)
ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರದ ಬಜೆಟ್ ಮಂಡನೆ ಅಧಿವೇಶನದ ಪ್ರಶ್ನೋತ್ತರ ಕಲಾಪಗಳು ಇಂದಿನಿಂದ ಆರಂಭವಾಗಲಿದ್ದು, ವಿಪಕ್ಷ ಬಿಜೆಪಿ ದಾಳಿಗೆ ಪ್ರತಿದಾಳಿ ನಡೆಸಲು ಆಡಳಿತ ಪಕ್ಷ ಸಜ್ಜಾಗಿದೆ.
ಬಜೆಟ್ ಮೇಲೆ ಹಲವು ರೀತಿಯ ಅಸಮಾಧಾನ ಹಿನ್ನಲೆಯಲ್ಲಿ ಇಂದು ಸದನದಲ್ಲಿ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ವಾಕ್ಸಮರ ಗ್ಯಾರಂಟಿ. ಕೆಲವು ಜಿಲ್ಲೆಗಳಿಗೆ ತಾರತಮ್ಯ ಮಾಡಲಾಗಿದೆ ಎಂದು ಆರೋಪಿಸಿರುವ ಬಿಜೆಪಿ ಈ ಬಗ್ಗೆ ಸದನದಲ್ಲಿ ಪ್ರಶ್ನಿಸುವುದಾಗಿ ಈಗಾಗಲೇ ಬಿಜೆಪಿ ಹೇಳಿತ್ತು.
ಅದಕ್ಕೆ ಸರಿಯಾಗಿ ಸಿಎಂ ಕುಮಾರಸ್ವಾಮಿ ಕೂಡಾ ಪ್ರತಿಪಕ್ಷಗಳ ಪ್ರಶ್ನೆಗಳಿಗೆ ಉತ್ತರ ಕೊಡಲು ಸಿದ್ಧತೆ ನಡೆಸಿದ್ದಾರೆ. ಇದರ ನಡುವೆ ಕರಾವಳಿ, ಮಲೆನಾಡಿನಲ್ಲಿ ವಿಪರೀತ ಮಳೆಯಾಗುತ್ತಿದ್ದು, ಮಳೆಯಿಂದಾದ ನಷ್ಟ ಪರಿಹಾರದ ಬಗ್ಗೆಯೂ ಚರ್ಚೆಯಾಗುವ ಸಾಧ್ಯತೆಯಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.