Select Your Language

Notifications

webdunia
webdunia
webdunia
webdunia

ನಾಳೆ ಮಧ್ಯಾಹ್ನ 3 ಗಂಟೆಗೆ ಬಿಬಿಎಂಪಿ ಬಜೆಟ್ ಮಂಡನೆ

ನಾಳೆ ಮಧ್ಯಾಹ್ನ 3 ಗಂಟೆಗೆ ಬಿಬಿಎಂಪಿ ಬಜೆಟ್ ಮಂಡನೆ
bangalore , ಮಂಗಳವಾರ, 29 ಮಾರ್ಚ್ 2022 (20:23 IST)
ಬಿಬಿಎಂಪಿ ಬಜೆಟ್‍ಗೆ ಮುಹೂರ್ತ ನಿಗದಿಯಾಗಿದ್ದು, ನಾಳೆ ಮಧ್ಯಾಹ್ನ 3 ಗಂಟೆಗೆ ಬಜೆಟ್ ಮಂಡನೆಯಾಗಲಿದೆ. ಬೆಂಗಳೂರು ಮಹಾನಗರ ಉಸ್ತುವಾರಿ ಆಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಜೆಟ್‍ಗೆ ಒಪ್ಪಿಗೆ ಸೂಚಿಸಿದ್ದು, ನಾಳೆ 2022-23ನೇ ಸಾಲಿನ ಬಜೆಟ್ ಮಂಡಿಸಲು ಬಿಬಿಎಂಪಿ ಸಿದ್ಧತೆ ಮಾಡಿಕೊಂಡಿದೆ.
 
ನಾಳೆ ಮಧ್ಯಾಹ್ನ 3 ಗಂಟೆಗೆ ಬಜೆಟನ್ನು ಮಲ್ಲೇಶ್ವರಂನಲ್ಲಿರುವ ಐಪಿಪಿ ಸೆಂಟರ್‍ನಲ್ಲಿ ಮಂಡಿಸಲು ತಯಾರು ಮಾಡಿಕೊಳ್ಳಲಾಗಿದೆ.
 
ಜನಪ್ರತಿನಿಧಿಗಳಿಲ್ಲದೆ ಎರಡನೇ ಬಾರಿ ಪಾಲಿಕೆಯ ಆಡಳಿತಾಧಿಕಾರಿ ನೇತೃತ್ವದಲ್ಲಿ ಬಜೆಟ್ ಮಂಡನೆ ಯಾಗುತ್ತಿದೆ. ಕಳೆದ ವರ್ಷದಂತೆ ಈ ವರ್ಷವೂ ಪೇಪರ್ ರಹಿತ ಬಜೆಟ್ ಮಂಡನೆಯಾಗಲಿದೆ. ವಿಶೇಷ ಆಯುಕ್ತರಾದ ತುಳಸಿ ಮದ್ದಿನೇನಿ ಅವರು ಬಜೆಟ್ ಮಂಡಿಸಲಿದ್ದಾರೆ.
 
ಒಂಬತ್ತು ಸಾವಿರ ಕೋಟಿ ರೂ.ಗೆ ಮೀರದಂತೆ ವಾಸ್ತವಿಕ ಬಜೆಟ್ ಮಂಡಿಸುವ ಸಾಧ್ಯತೆ ಇದೆ. ಪ್ರಗತಿಯಲ್ಲಿರುವ ಹಾಗೂ ಬಾಕಿ ಇರುವ ಕಾಮಗಾರಿಗಳನ್ನು ಪೂರ್ಣಗೊಳಿಸಲು ಆದ್ಯತೆ ನೀಡುವುದು. ಆಸ್ತಿ ತೆರಿಗೆ ಸಂಗ್ರಹ ಗುರಿ ಐದು ಸಾವಿರ ಕೋಟಿ ರೂ.ಗೆ ಹೆಚ್ಚಳ ಮಾಡುವ ಚಿಂತನೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.
 
ಬಿ ಖಾತೆಯ ಆಸ್ತಿಗಳಿಗೆ ಎ ಖಾತೆ ಹಂಚಿಕೆಯ ಕ್ರಮ, ರಸ್ತೆ, ಕೆರೆ ಹಾಗೂ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ಅಂಗವಿಕಲರಿಗೆ ಈ ಬಾರಿಯ ಬಜೆಟ್‍ನಲ್ಲಿ ಬಂಪರ್ ಕೊಡುಗೆ ನಿರೀಕ್ಷಿಸಲಾಗಿದೆ. ಮೂಲಭೂತ ಸೌಕರ್ಯಗಳಿಗೆ ಹೆಚ್ಚು ಒತ್ತು ನೀಡಲಾಗಿದೆ

Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯದಲ್ಲಿ ನಡೆಯುವ ಚುನಾವಣೆ ಎದುರಿಸಲು ಸಿದ್ದ- ಡಿಕೆ ಶಿವಕುಮಾರ್