Select Your Language

Notifications

webdunia
webdunia
webdunia
webdunia

ಜನಸಾಮಾನ್ಯರ ಬದುಕು ಸುಗಮಗೊಳಿಸುವ ಬಜೆಟ್: ಸುಧಾಕರ್

ಜನಸಾಮಾನ್ಯರ ಬದುಕು ಸುಗಮಗೊಳಿಸುವ ಬಜೆಟ್: ಸುಧಾಕರ್
ಬೆಂಗಳೂರು , ಶನಿವಾರ, 5 ಮಾರ್ಚ್ 2022 (06:56 IST)
ಬೆಂಗಳೂರು : ರಾಜ್ಯ ಬಿಜೆಪಿ ಸರ್ಕಾರ ಮಂಡಿಸಿದ 2022-2023ರ ಬಜೆಟ್ ದೂರದೃಷ್ಟಿಯ ಬಜೆಟ್ ಆಗಿದೆ. ಬಜೆಟ್ ಕೇವಲ ಘೋಷಣೆಯಾಗದೆ ಜನಸಾಮಾನ್ಯರ ಬಜೆಟ್ ಆಗಿದೆ.
 
ತಮ್ಮ ಚೊಚ್ಚಲ ಬಜೆಟ್ ಮಂಡನೆಯಲ್ಲಿ ಸಿಎಂ ರಿಂದ ಕಾಮನ್ ಮ್ಯಾನ್ ಬಜೆಟ್ ಸಿಕ್ಕಿದೆ, ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು. ಬೆಂಗಳೂರಿನಲ್ಲಿ ಬಜೆಟ್ ಕುರಿತು ಮಾತನಾಡಿದ ಸಚಿವರು, ಸಿಎಂ ಬಸವರಾಜ ಬೊಮ್ಮಾಯಿ ಅವರು ನವ ಭಾರತಕ್ಕಾಗಿ ನವ ಕರ್ನಾಟಕ ಎನ್ನುವ ಕಲ್ಪನೆಯೊಂದಿಗೆ ಈ ಸಾಲಿನ ಬಜೆಟ್ ಮಂಡಿಸಿದ್ದಾರೆ.

ಸಮಾಜದ ಎಲ್ಲ ವರ್ಗಗಳನ್ನು, ಎಲ್ಲ ಕ್ಷೇತ್ರಗಳನ್ನು, ರಾಜ್ಯದ ಎಲ್ಲ ಪ್ರಾದೇಶಿಕ ಭಾಗಗಳ ಜನರ ಆಶೋತ್ತರಗಳನ್ನು ಮುಟ್ಟುವಂತಹ ಸರ್ವ ಸ್ಪರ್ಶಿ, ಸರ್ವ ವ್ಯಾಪಿ ಬಜೆಟ್ ಇದಾಗಿದೆ. ಆರೋಗ್ಯ, ಶಿಕ್ಷಣ, ಕೃಷಿ ಸೇರಿದಂತೆ ಮೂಲಕ ಸೌಕರ್ಯಗಳಿಗೆ ಒತ್ತುಕೊಟ್ಟು ಬಜೆಟ್ ರೂಪಿಸಲಾಗಿದೆ ಎಂದು ಹೇಳಿದರು. 

2,53,165 ಲಕ್ಷ ಕೋಟಿ ಗಾತ್ರದ ಬಜೆಟ್ ಇದಾಗಿದ್ದು, ಸರ್ವಸ್ಪರ್ಶಿ ಬಜೆಟ್ ಇದಾಗಿದೆ. ರಾಜ್ಯದ ಅಭಿವೃದ್ಧಿಗೆ ಶಿಕ್ಷಣ, ಉದ್ಯೋಗ ಮತ್ತು ಸಬಲೀಕರಣವೊಂದೇ ದಾರಿ ಅನ್ನುವುದನ್ನ ಬಜೆಟ್ ಹೇಳಿದೆ. ರಾಜ್ಯದ ನೀರಾವರಿ ಯೋಜನೆಗಳಿಗೆ ಬಜೆಟ್ನಲ್ಲಿ ಬರಪೂರ ಅನುದಾನ ಸಿಕ್ಕಿದೆ.

ಮೇಕೆದಾಟು ಯೋಜನೆಗೆ 1000 ಸಾವಿರ ಕೋಟಿ, ಕೃಷ್ಣಾ ಮೇಲ್ದಂಡೆ ಯೋಜನೆಗೆ 5,000 ಕೋಟಿ ಹಾಗೂ ಎತ್ತಿನ ಹೊಳೆ ಯೋಜನೆಗೆ 3,000 ಕೋಟಿ ನೀಡುವ ಮೂಲಕ ನೀರಾವರಿ ಮೂಲಸೌಕರ್ಯಕ್ಕೆ ಒತ್ತು ನೀಡಲಾಗಿದೆ ಎಂದು ಹೇಳಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಕೊರೊನಾ ವ್ಯಾಕ್ಸಿನ್ ಹೇಗೆ ಕೆಲಸ ಮಾಡುತ್ತೆ