Webdunia - Bharat's app for daily news and videos

Install App

ಕಾರ್ಮಿಕ ನೀತಿ ವಿರೋಧಿಸಿ ಬಂದ್: 9 ಸರ್ಕಾರಿ ವೋಲ್ವೋ ಬಸ್ ಮೇಲೆ ಕಲ್ಲು ತೂರಾಟ

Webdunia
ಬುಧವಾರ, 2 ಸೆಪ್ಟಂಬರ್ 2015 (11:31 IST)
ಕೇಂದ್ರ ಸರ್ಕಾರದ ಕಾರ್ಮಿಕ ನೀತಿಯನ್ನು ವಿರೋಧಿಸಿ ಇಂದು ರಾಷ್ಟ್ರವ್ಯಾಪಿ ನಡೆಸಲಾಗುತ್ತಿರುವ ಬಂದ್‌ಗೆ ಕೆಎಸ್ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್‌ಗಳ ಸರ್ಕಾರಿ ಸಾರಿಗೆಯನ್ನೂ ಸ್ಥಗಿತಗೊಳಿಸಿ ಸಾಥ್ ನೀಡಲಾಗಿದ್ದು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ ಹಾಗೂ ಕಲಬುರ್ಗಿ ಜಿಲ್ಲೆಗಳು ಸೇರಿದಂತೆ ರಾಜ್ಯಾದ್ಯಂತ ಉತ್ತಮ ಬೆಂಬಲ ವ್ಯಕ್ತವಾಗಿದೆ. 
 
ಬಂದ್ ಹಿನ್ನೆಲೆಯಲ್ಲಿ ನಗರದ ಸಾರ್ವಜನಿಕರ ತುರ್ತು ಸೇವೆಗಾಗಿ ಕೆಲ ಸರ್ಕಾರಿ ಬಸ್‌ಗಳನ್ನು ನಿಯೋಜಿಸಲಾಗಿತ್ತು. ಆದರೆ ಅವುಗಳನ್ನೂ ಕೂಡ ಸ್ಥಗಿತಗೊಳಿಸಬೇಕೆಂದು ಒತ್ತಾಯಿಸಿದ ಕೆಲ ದುಷ್ಕರ್ಮಿಗಳು, 9 ವೋಲ್ವೋ ಬಸ್‌ಗಳ ಮೇಲೆ ಇಂದು ಬೆಳಗ್ಗೆ 5.30 ರಿಂದ 6 ಗಂಟೆ ವೇಳೆಯಲ್ಲಿ ಕಲ್ಲು ತೂರಾಟ ನಡೆಸಿದ್ದಾರೆ. ಈ ಸಂಬಂಧ ಬಸ್ ಚಾಲಕರು ಪೊಲೀಸರಿಗೆ ಮಾಹಿತಿ ನೀಡಿದ್ದು, ಹಾನಿಗೊಳಗಾದ ಬಸ್‌ಗಳನ್ನು ನಗರದ ಹೆಚ್ಎಸ್ಆರ್‌ ಲೋಔಟ್‌ನಲ್ಲಿರುವ ಡಿಪೊದಲ್ಲಿ ನಿಲ್ಲಿಸಲಾಗಿದೆ. ಈ ಸಂಬಂಧ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. 
 
ಇನ್ನು ಈ ಸಂಬಂಧ ನಗರದ ಪೂರ್ವ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಪಿ.ಹರಿಶೇಖರನ್ ಪ್ರತಿಕ್ರಿಯಿಸಿದ್ದು, ಬಂದ್ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ 5.30ರಿಂದಲೇ ಭದ್ರತೆ ಕೈಗೊಂಡಿದ್ದೇವೆ. ನಮ್ಮ ವಿಭಾಗದ ವ್ಯಾಪ್ತಿಯಲ್ಲಿ ಸುಮಾರು 16 ಸರ್ಕಾರಿ ಬಸ್‌ಗಳ ಡಿಪೊಗಳಿದ್ದು, ಯಾವುದೇ ರೀತಿಯ ಹಾನಿ ಸಂಭವಿಸಿಲ್ಲ. ಸರ್ಕಾರಿ ಬಸ್‌‍ಗಳು ನಿಲ್ಲುವ ಎಲ್ಲಾ ಸ್ಥಳಗಳಲ್ಲಿ ಸೂಕ್ತ ಭದ್ರತೆ ಒದಗಿಸಲಾಗಿದೆ ಎಂದರು. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments