ಬಿಸಿಲೂರಿನಲ್ಲಿ ಬೆಳ್ಳಂಬೆಳಗ್ಗೆ ಹರಿದ ನೆತ್ತರು!

ಗುರುವಾರ, 10 ಜನವರಿ 2019 (12:35 IST)
ಬಿಸಿಲೂರಿನಲ್ಲಿ ಬೆಳ್ಳಂಬೆಳಗ್ಗೆ ನೆತ್ತರು ಹರಿದಿದ್ದು ವ್ಯಕ್ತಿಯೊಬ್ಬನನ್ನು ಭೀಕರವಾಗಿ ಕೊಲೆ ಮಾಡಲಾಗಿದೆ.

ಕಲಬುರಗಿ ಕೇಂದ್ರ ಬಸ್ ನಿಲ್ದಾಣ ಮುಂಭಾಗದಲ್ಲಿ ಬೆಳ್ಳಂಬೆಳಗ್ಗೆ ವ್ಯಕ್ತಿಯೊಬ್ಬನನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಬಸ್ ನಿಲ್ದಾಣ ಹತ್ತಿರದಲ್ಲಿರುವ ಕಾವೇರಿ ಲಾಡ್ಜ್ ನ ಮ್ಯಾನೇಜರ್ ಆಗಿದ್ದ ಮಲ್ಲಿಕಾರ್ಜುನ (30) ಕೊಲೆಯಾದವರಾಗಿದ್ದಾರೆ.

ಮಲ್ಲಿಕಾರ್ಜುನನ ಜತೆ ಮಾತನಾಡುತ್ತಿರುವಂತೆ ನಟಿಸಿದ ಮೂವರು ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಕುತ್ತಿಗೆಗೆ ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಿ ಅಟ್ಟಹಾಸ ಮೆರೆದಿದ್ದಾರೆ. ಈ ಚಿತ್ರಣ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಬೆಳ್ಳಂಬೆಳಗ್ಗೆ ಅದು ಜನರು ಓಡಾಡುವ ಪ್ರದೇಶದಲ್ಲಿಯೇ ಕೊಲೆ ನಡೆದಿರುವುದು ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ. ಅಶೋಕ್ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.


ವೆಬ್ದುನಿಯಾವನ್ನು ಓದಿ

ಮುಂದಿನ ಸುದ್ದಿ ಮೇಲ್ಜಾತಿಗೆ ಶೇ.10 ಮೀಸಲಾತಿ ವಿಚಾರ; ಪ್ರಧಾನಿ ಮೋದಿಗೆ ಅಭಿನಂದನೆ ಸಲ್ಲಿಸಿದ ಬಿಎಸ್ ವೈ