Publish Date: Sat, 29 Dec 2018 (11:20 IST)
Updated Date: Sat, 29 Dec 2018 (11:22 IST)
ಮಡಿಕೇರಿ : ಪ್ರವಾಸಕ್ಕೆ ಬಂದಿದ್ದ ಖಾಸಗಿ ಬಸ್ ಅಪಘಾತಕ್ಕೀಡಾಗಿದ್ದು ಓರ್ವ ವಿದ್ಯಾರ್ಥಿ ಸಾವನಪ್ಪಿದ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸುಂಟಿಕೊಪ್ಪ ಸಮೀಪದ ಶಾಂತಿಗೇರಿ ತಿರುವಿನಲ್ಲಿ ನಡೆದಿದೆ.
ಹತ್ತನೇ ತರಗತಿ ಬಸವರಾಜು ಮೃತಪಟ್ಟ ವಿದ್ಯಾರ್ಥಿಯಾಗಿದ್ದು, ಬಳ್ಳಾರಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳನ್ನು ಹೊತ್ತ ಖಾಸಗಿ ಬಸ್ ಮಡಿಕೇರಿ ಪ್ರವಾಸಕ್ಕೆ ಬಂದಿದ್ದ ವೇಳೆ ಇಂದು ನಸುಕಿನ ಜಾವ 2.30ರ ವೇಳೆ ಅಪಘಾತಕ್ಕೀಡಾಗಿದೆ.
ಘಟನೆಯಲ್ಲಿ ಕೆಲ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಕೂಡಲೇ ಗಾಯಳುಗಳನ್ನು ಮಡಿಕೇರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ಕೊಡಗು ಎಸ್ ಪಿ ಸುಮಾನ್ ಪನ್ನೇಕರ್ ಡಿವೈಎಸ್‍ಪಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸುಂಟಿಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.