Publish Date: Fri, 23 Jul 2021 (14:34 IST)
Updated Date: Fri, 23 Jul 2021 (14:42 IST)
ಎರಡು ಬಸ್ ಗಳು ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಮೂವರು ಕಾಂಗ್ರೆಸ್ ಕಾರ್ಯಕರ್ತರು ಮೃತಪಟ್ಟಿರುವ ದಾರುಣ ಘಟನೆ ಪಂಜಾಬ್ ನ ಮೋಘಾ ಜಿಲ್ಲೆಯಲ್ಲಿ ಸಂಭವಿಸಿದೆ.
ಪಂಜಾಬ್ ಕಾಂಗ್ರೆಸ್ ರಾಜ್ಯಾಧ್ಯಕ್ಷರಾಗಿ ನವಜ್ಯೋತ್ ಸಿಂಗ್ ಸಿದ್ದು ಇಂದು ಪ್ರಮಾಣವಚನ ಸ್ವೀಕರಿಸಲಿದ್ದು, ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬಸ್ ಗಳಲ್ಲಿ ಕಾರ್ಯಕರ್ತರು ಆಗಮಿಸುವಾಗ ಈ ದುರಂತ ಸಂಭವಿಸಿದೆ.
ಶುಕ್ರವಾರ ಮುಂಜಾನೆ ಸರಕಾರಿ ಹಾಗೂ ಖಾಸಗಿ ಮಿನಿ ಬಸ್ ಗಳ ನಡುವೆ ಡಿಕ್ಕಿ ಸಂಭವಿಸಿದ್ದು, ಮೂವರು ಮೃತಪಟ್ಟಿದ್ದು, ಹಲವಾರು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆ ಇದೆ.
ಎರಡು ಬಸ್ ಗಳ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ದುರ್ಘಟನೆಯಲ್ಲಿ ಹಲವಾರು ಕಾಂಗ್ರೆಸ್ ಕಾರ್ಯಕರ್ತರು ಮೃತಪಟ್ಟಿರುವ ಸಾಧ್ಯತೆ ಇದ್ದು, ಪರಿಹಾರ ಕಾರ್ಯ ಭರದಿಂದ ನಡೆದಿದೆ.