Publish Date: Wed, 30 Jan 2019 (18:40 IST)
Updated Date: Wed, 30 Jan 2019 (18:42 IST)
ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಮರಕ್ಕೆ ಡಿಕ್ಕಿ ಹೊಡೆದ ಘಟನೆ ನಡೆದಿದೆ.
ಘಟನೆಯಲ್ಲಿ ಚಾಲಕ ಸ್ಥಳದಲ್ಲಿಯೇ ಸಾವು ಕಂಡಿದ್ದಾನೆ.
ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಬಾಣೂರು ಬಳಿ ಘಟನೆ ನಡೆದಿದೆ. ಗೊಬ್ಬರ ತುಂಬಿಕೊಂಡು ಚಿಕ್ಕಮಗಳೂರಿನಿಂದ ಅರಸೀಕೆರೆ ಗೆ ಹೋಗುತ್ತಿದ್ದ ಲಾರಿ ನಿಯಂತ್ರಣ ತಪ್ಪಿ ಈ ಅಪಘಾತ ಸಂಭವಿಸಿದೆ.
ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಖರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.