Select Your Language

Notifications

webdunia
webdunia
webdunia
webdunia

ಬಸ್ ಪ್ರಯಾಣ ದರ ಏರಿಕೆ ಶೀಘ್ರ ಘೋಷಣೆ?

ಬಸ್ ಪ್ರಯಾಣ ದರ ಏರಿಕೆ ಶೀಘ್ರ ಘೋಷಣೆ?
ಬೆಂಗಳೂರು , ಸೋಮವಾರ, 8 ಅಕ್ಟೋಬರ್ 2018 (19:01 IST)
ಬಸ್ ಪ್ರಯಾಣ ದರ ಏರಿಕೆ ಕುರಿತಂತೆ ಅ.11ರಂದು ಘೋಷಣೆ ಹೊರಬೀಳುವ ಸಾಧ್ಯತೆ ದಟ್ಟವಾಗಿದೆ.

ಕಳೆದ ಕೆಲವು ದಿನಗಳಿಂದಲೂ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಏರಿಕೆ ಕಾಣುತ್ತಿರುವುದರಿಂದ ನಷ್ಟ ಸರಿದೂಗಿಸುವ ನಿಟ್ಟಿನಲ್ಲಿ ಸಾರಿಗೆ ಇಲಾಖೆ ಮುಂದಾಗಿದೆ.

ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಈಚೆಗಷ್ಟೇ ಬಸ್ ಪ್ರಯಾಣ ದರ ಏರಿಕೆ ಮಾಡದಂತೆ ಸೂಚನೆಯನ್ನು ನೀಡಿದ್ದರು. ಆದರೆ ಸಾರಿಗೆ ಇಲಾಖೆಗೆ ನಷ್ಟವಾಗುತ್ತಿದೆ. ಹೀಗಾಗಿ ನಷ್ಟ ಸರಿದೂಗಿಸಲು ಬಸ್ ಪ್ರಯಾಣ ದರ ಏರಿಕೆಗೆ ಸಂಸ್ಥೆ ಮುಂದಾಗಿದೆ.

ಸಿಎಂ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದ್ದು, ಸಾರಿಗೆ ಸಚಿವ ಹಾಗೂ ಅಧಿಕಾರಿಗಳು ಪಾಲ್ಗೊಂಡು ದರ ಏರಿಕೆ ಕುರಿತು ತೀರ್ಮಾನ ತೆಗೆದುಕೊಳ್ಳಲಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ಉಪಚುನಾವಣೆ: ಹೊಣೆ ಹೊರಲು ಕಾಂಗ್ರೆಸ್ ನಾಯಕರು ಹಿಂದೇಟು