Webdunia - Bharat's app for daily news and videos

Install App

ಜನರಲ್ ತಿಮ್ಮಯ್ಯ ಪ್ರತಿಮೆಗೆ ಗುದ್ದಿದ ಬಸ್

Webdunia
ಮಂಗಳವಾರ, 22 ಆಗಸ್ಟ್ 2023 (16:20 IST)
ಬೆಳ್ಳಂಬೆಳಗ್ಗೆ KSRTC ಬಸ್ ಒಂದು ಮಡಿಕೇರಿಯ ಜನರಲ್ ತಿಮ್ಮಯ್ಯ ವೃತ್ತಕ್ಕೆ ಗುದ್ದಿದ್ದು, ಡಿಕ್ಕಿ ಹೊಡೆದ ರಭಸಕ್ಕೆ ವೀರ ಸೇನಾನಿ ತಿಮ್ಮಯ್ಯ ಅವರ ಪ್ರತಿಮೆ ನೆಲಕ್ಕುರುಳಿ ಬಿದ್ದಿದೆ. ಮಂಜಿನ ನಗರಿ ಮಡಿಕೇರಿಗೆ ಕಳಸದಂತೆ ಇದ್ದ ವೀರ ಸೇನಾನಿ ಜನರಲ್ ತಿಮ್ಮಯ್ಯ ಪ್ರತಿಮೆಗೆ ನಿಯಂತ್ರಣ ಕಳೆದುಕೊಂಡ KSRTC ಬಸ್ ಡಿಕ್ಕಿಯಾಗಿ ಮಹಾನ್ ಸೇನಾನಿ ಪ್ರತಿಮೆ ನೆಲಕ್ಕುರುಳಿದೆ. ಮಡಿಕೇರಿ ಡಿಪೋದಿಂದ ಬಸ್ ನಿಲ್ದಾಣದ ಕಡೆ ಹೊರಟಿದ್ದ ಬಸ್‌ಗೆ ಪಿಕಪ್ ವಾಹನವೊಂದು ಅಡ್ಡ ಬಂದಿದ್ದು, ಅಪಘಾತ ತಪ್ಪಿಸಲು ಹೋಗಿ ನಿಯಂತ್ರಣ ಕಳೆದುಕೊಂಡ ಬಸ್ ಚಾಲಕ ಜನರಲ್ ತಿಮ್ಮಯ್ಯ ಪ್ರತಿಮೆಗೆ ಡಿಕ್ಕಿ ಹೊಡೆದಿದ್ದಾನೆ. ಅದೃಷ್ಟವಶಾತ್ ಬಸ್‌ನಲ್ಲಿ ಪ್ರಯಾಣಿಕರಿಲ್ಲದ್ದರಿಂದ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಚಾಲಕ ಹಾಗೂ ಕಾರ್ಯನಿರ್ವಾಹಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸದ್ಯ ಸ್ಥಳಕ್ಕೆ ಮಡಿಕೇರಿ ನಗರ ಪೊಲೀಸರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದು, ಬಸ್ ಚಾಲಕ ಕೊಟ್ರೇಶ್‌ನನ್ನು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾವೇರಿ ನೀರನ್ನು ಕೂಡಲೇ ಬಿಡುಗಡೆ ಮಾಡಬೇಕೆಂದು ತಮಿಳುನಾಡು ರೈತರು ಯಾವಾ ರೀತಿ ಪ್ರತಭಟನೆ ನಡೆಸಿದ್ರು ಗೊತ್ತಾ

ಪಕ್ಷಕ್ಕೆ ಸವಾಲು ಹಾಕಿದವರಿಗೆ ಸಚಿವ ಸ್ಥಾನದ ಭಾಗ್ಯ: ಮಂತ್ರಿಗಿರಿ ಕೈತಪ್ಪಿದಕ್ಕೆ ಕೆರಳಿ ಕೆಂಡವಾದ ತನ್ವೀರ್ ಸೇಠ್

Video: ಮದುಮಗನ ದಿರಿಸಿನಲ್ಲಿ ಮೆಟ್ರೋ ಏರಿದ ಮದುಮಗ: ಕಾರಣ ನಿಜಕ್ಕೂ ಶಾಕಿಂಗ್

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಚಂದನ್ ಶೆಟ್ಟಿ ಜೊತೆ ಭರ್ಜರಿ ಸ್ಟೆಪ್ ಹಾಕಿದ ಸಚಿವ ಕೃಷ್ಣಭೈರೇಗೌಡ: Video

ಮುಂದಿನ ಸುದ್ದಿ
Show comments