Publish Date: Thu, 22 Apr 2021 (09:17 IST)
Updated Date: Thu, 22 Apr 2021 (09:19 IST)
ಬೆಂಗಳೂರು: ಹೈಕೋರ್ಟ್ ಆದೇಶದ ಹಿನ್ನಲೆಯಲ್ಲಿ ಕಳೆದ 15 ದಿನಗಳಿಂದ ನಡೆಯುತ್ತಿದ್ದ ಸಾರಿಗೆ ನೌಕರರ ಮುಷ್ಕರ ಕೊನೆಗೂ ಅಂತ್ಯಗೊಂಡಿದೆ. ನಿನ್ನೆ ಸಂಜೆಯಿಂದಲೇ ಬಸ್ ಸಂಚಾರ ಆರಂಭವಾಗಿದೆ.
ಕೋರ್ಟ್ ಆದೇಶಕ್ಕೆ ಗೌರವ ಕೊಟ್ಟು ಮುಷ್ಕರ ಹಿಂಪಡೆಯುತ್ತಿರುವುದಾಗಿ ಹೋರಾಟಗಾರ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ. ಆದರೆ ಅಮಾನಾತಾದ ಸಿಬ್ಬಂದಿಗಳನ್ನು ವಾಪಸ್ ಕರೆಸಿಕೊಳ್ಳಿ ಎಂದು ಆಗ್ರಹಿಸಿದ್ದಾರೆ.
ಕೊರೋನಾ ಹಾವಳಿ ಅತಿಯಾಗಿರುವಾಗ ಮುಷ್ಕರ ಹೂಡಿದ್ದು ಸಾರ್ವಜನಿಕರಿಂದ ಟೀಕೆಗೊಳಗಾಗಿತ್ತು. ಆದರೆ ನೌಕರರ ಬೇಡಿಕೆ ಇನ್ನೂ ಈಡೇರಿಲ್ಲ ಎನ್ನುವುದು ಉಲ್ಲೇಖನೀಯ.