Publish Date: Sat, 15 Sep 2018 (17:38 IST)
Updated Date: Sat, 15 Sep 2018 (17:40 IST)
ರಾಜ್ಯ ರಸ್ತೆ ಸಾರಿಗೆ ಇಲಾಖೆ ಐದಾರು ನೂರು ಕೋಟಿ ರೂ.ಗಳ ನಷ್ಟದಲ್ಲಿದೆ. ಹೀಗಾಗಿ ಬಸ್ ಪ್ರಯಾಣ ದರವನ್ನು ಶೀಘ್ರ ಏರಿಕೆ ಮಾಡಲಿರುವುದಾಗಿ ಸಾರಿಗೆ ಸಚಿವ ಹೇಳಿದ್ದಾರೆ.
ಜನಸಮಾನ್ಯರಿಗೆ ಹೊರೆ ಆಗದಂತೆ ಬಸ್ ಪ್ರಯಾಣ ದರದಲ್ಲಿ ಏರಿಕೆ ಮಾಡಲಿರುವುದಾಗಿ ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಹೇಳಿದ್ದಾರೆ.
ಶಿವಮೊಗ್ಗದಲ್ಲಿ 5 ನೂತನ ಬಸ್ ಮಾರ್ಗಗಳಿಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿ, ವಾಣಿಜ್ಯ ಮಳಿಗೆಗಳಲ್ಲಿ ಸಾರಿಗೆ ಸಂಸ್ಥೆಯ ಎಲ್ಲ ಬಸ್ ನಿಲ್ದಾಣಗಳಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ. ಆ ಮೂಲಕ ಸಾರಿಗೆ ಸಂಸ್ಥೆಯ ಆದಾಯ ಹೆಚ್ಚಿಸಲು ಯತ್ನಿಸಲಾಗುತ್ತಿದೆ. ಎಲ್ಲ ಬಸ್ ನಿಲ್ದಾಣಗಳಲ್ಲಿ ಮೂಲ ಸೌಲಭ್ಯ ಕಲ್ಪಿಸಲಾಗುತ್ತಿದೆ ಎಂದು ಹೇಳಿದರು.