ಟಿಪ್ಪು ಜಯಂತಿ ಪರ ವಿರೋಧದಿಂದ ಏನು ಪ್ರಯೋಜನವಲ್ಲ. ಮುಸ್ಲಿಮರಿಗೆ ಏನು ಚಿನ್ನದ ತಗಡು ಹಾಕಿಸ್ತಿರಾ? ರಾಜ್ಯದಲ್ಲಿ ಬರದ ಪರಿಸ್ಥಿತಿ ಇದೆ ಅದರತ್ತ ಗಮನಹರಿಸಿ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಸಲಹೆ ನೀಡಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಯಾರ ಹತ್ಯೆಯಾದರೂ ತಮ್ಮ ಕಾರ್ಯಕರ್ತನ ಹತ್ಯೆ ಎನ್ನುವ ಹೊಸ ಸಂಪ್ರದಾಯ ಬಿಜೆಪಿ ಆರಂಭಿಸಿದೆ.
ವಿಧಾನಸೌಧದಲ್ಲಿ ದೊರೆತಿರುವ ಹಣದ ಮೂಲ ಯಾವುದು ಎನ್ನುವುದನ್ನು ಪತ್ತೆ ಹಚ್ಚಲು ಇಲ್ಲಿವರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಜಿ.ಪರಮೇಶ್ವರ್ ಅವರಿಗೆ ಸಾಧ್ಯವಾಗಲಿಲ್ಲವೇ? ಇದರಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಒಂದಾಗಿ ಹಣದ ರಹಸ್ಯವನ್ನು ಮುಚ್ಚಲು ಪ್ರಯತ್ನಿಸುತ್ತಿವೆ ಎಂದು ಆರೋಪಿಸಿದರು.
ಜೆಡಿಸ್ನೊಂದಿಗೆ ಮೈತ್ರಿಮಾಡಿಕೊಂಡರೆ ಕಾಂಗ್ರೆಸ್ ಸರ್ವನಾಶವಾಗುತ್ತದೆ. ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷ ಮಾತ್ರವಿರಬೇಕು ಎನ್ನುವ ಯಡಿಯೂರಪ್ಪ ಬಾಲಿಶವಾಗಿದೆ ಎಂದು ವಾಗ್ದಾಳಿ ನಡೆಸಿದರು.
ರಾಜ್ಯದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರಗಳಿಗೆ ಕಾಂಗ್ರೆಸ್ ಮತ್ತು ಬಿಜೆಪಿ ಹೊಣೆಯಾಗಿರುವುದರಿಂದ ಮುಂಬರುವ ದಿನಗಳಲ್ಲಿ ಭ್ರಷ್ಟಾಚಾರದ ಬಗ್ಗೆ ಮಾತನಾಡುವುದಿಲ್ಲ ಎನ್ನುವ ತೀರ್ಮಾನ ತೆಗೆದುಕೊಂಡಿರುವುದಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ