Webdunia - Bharat's app for daily news and videos

Install App

ಟಿಪ್ಪು ಜಯಂತಿ ಆಚರಿಸಿ, ಮುಸ್ಲಿಮರಿಗೆ ಏನು ಚಿನ್ನದ ತಗಡು ಹಾಕಿಸ್ತಿರಾ?: ಕುಮಾರಸ್ವಾಮಿ

Webdunia
ಸೋಮವಾರ, 7 ನವೆಂಬರ್ 2016 (15:12 IST)
ಟಿಪ್ಪು ಜಯಂತಿ ಪರ ವಿರೋಧದಿಂದ ಏನು ಪ್ರಯೋಜನವಲ್ಲ. ಮುಸ್ಲಿಮರಿಗೆ ಏನು ಚಿನ್ನದ ತಗಡು ಹಾಕಿಸ್ತಿರಾ? ರಾಜ್ಯದಲ್ಲಿ ಬರದ ಪರಿಸ್ಥಿತಿ ಇದೆ ಅದರತ್ತ ಗಮನಹರಿಸಿ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಸಲಹೆ ನೀಡಿದ್ದಾರೆ. 
 
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಯಾರ ಹತ್ಯೆಯಾದರೂ ತಮ್ಮ ಕಾರ್ಯಕರ್ತನ ಹತ್ಯೆ ಎನ್ನುವ ಹೊಸ ಸಂಪ್ರದಾಯ ಬಿಜೆಪಿ ಆರಂಭಿಸಿದೆ.
 
ವಿಧಾನಸೌಧದಲ್ಲಿ ದೊರೆತಿರುವ ಹಣದ ಮೂಲ ಯಾವುದು ಎನ್ನುವುದನ್ನು ಪತ್ತೆ ಹಚ್ಚಲು ಇಲ್ಲಿವರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಜಿ.ಪರಮೇಶ್ವರ್‌ ಅವರಿಗೆ ಸಾಧ್ಯವಾಗಲಿಲ್ಲವೇ? ಇದರಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಒಂದಾಗಿ ಹಣದ ರಹಸ್ಯವನ್ನು ಮುಚ್ಚಲು ಪ್ರಯತ್ನಿಸುತ್ತಿವೆ ಎಂದು ಆರೋಪಿಸಿದರು.
 
ಜೆಡಿಸ್‌ನೊಂದಿಗೆ ಮೈತ್ರಿಮಾಡಿಕೊಂಡರೆ ಕಾಂಗ್ರೆಸ್ ಸರ್ವನಾಶವಾಗುತ್ತದೆ. ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷ ಮಾತ್ರವಿರಬೇಕು ಎನ್ನುವ ಯಡಿಯೂರಪ್ಪ ಬಾಲಿಶವಾಗಿದೆ ಎಂದು ವಾಗ್ದಾಳಿ ನಡೆಸಿದರು. 
 
ರಾಜ್ಯದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರಗಳಿಗೆ ಕಾಂಗ್ರೆಸ್ ಮತ್ತು ಬಿಜೆಪಿ ಹೊಣೆಯಾಗಿರುವುದರಿಂದ ಮುಂಬರುವ ದಿನಗಳಲ್ಲಿ ಭ್ರಷ್ಟಾಚಾರದ ಬಗ್ಗೆ ಮಾತನಾಡುವುದಿಲ್ಲ ಎನ್ನುವ ತೀರ್ಮಾನ ತೆಗೆದುಕೊಂಡಿರುವುದಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಷಪ್ರಾಶನದಿಂದ ಐದು ಹುಲಿಗಳು ಸಾವು ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಎಂದ ಸಿದ್ದರಾಮಯ್ಯ

ಒಡಿಶಾದ ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ: ಮೂರು ಮಂದಿ ಸಾವು, ಹಲವರಿಗೆ ಗಾಯ

ಉತ್ತರಾಖಂಡದ ಬಾಲಿಗಢದಲ್ಲಿ ಭೀಕರ ಮೇಘಸ್ಫೋಟ: ಪ್ರವಾಹದಲ್ಲಿ ಸಿಲುಕಿ 9 ಕಾರ್ಮಿಕರ ಕಣ್ಮರೆ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಮುಂದಿನ ಸುದ್ದಿ
Show comments