Select Your Language

Notifications

webdunia
webdunia
webdunia
webdunia

ಬೈ ಎಲೆಕ್ಷನ್ : ಗೆಲುವಿಗಾಗಿ ಕಾಂಗ್ರೆಸ್ – ಜೆಡಿಎಸ್ ಭಾರೀ ಪೈಪೋಟಿ

ಬೈ ಎಲೆಕ್ಷನ್ : ಗೆಲುವಿಗಾಗಿ ಕಾಂಗ್ರೆಸ್ – ಜೆಡಿಎಸ್ ಭಾರೀ ಪೈಪೋಟಿ
ಮಂಡ್ಯ , ಸೋಮವಾರ, 2 ಡಿಸೆಂಬರ್ 2019 (20:29 IST)
ರಾಜ್ಯದಲ್ಲಿ ಉಪ ಚುನಾವಣೆ ನಡೆಯುತ್ತಿರುವ ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ -ಜೆಡಿಎಸ್ ಪಕ್ಷದೊಂದಿಗೆ ಯಾವುದೇ ಒಳ ಒಪ್ಪಂದ ಮಾಡಿಕೊಂಡಿಲ್ಲ.

ಕಾಂಗ್ರೆಸ್ ಪಕ್ಷವು ತನ್ನ ಸ್ವಂತ ಬಲದಿಂದ ಎಲ್ಲಾ 15 ಕ್ಷೇತ್ರಗಳಲ್ಲಿಯೂ ಒಳ್ಳೆಯ ಸಾಮರ್ಥ್ಯವನ್ನು ಹೊಂದಿರುವ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಕೆ.ಆರ್.ಪೇಟೆ, ಹುಣಸೂರು ಸೇರಿದಂತೆ 12ಕ್ಕೂ ಹೆಚ್ಚಿನ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಭರ್ಜರಿ ಗೆಲುವು ಸಾಧಿಸಲಿದ್ದಾರೆ. ಹೀಗಂತ ರಾಜ್ಯದ ಮಾಜಿಮುಖ್ಯಮಂತ್ರಿ ಹಾಗೂ ಕೇಂದ್ರದ ಮಾಜಿ ಸಚಿವ ಎಂ.ವೀರಪ್ಪಮೊಯಿಲಿ ವಿಶ್ವಾಸ ವ್ಯಕ್ತಪಡಿಸಿದರು.

ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆಗೆ ಅಗತ್ಯ ಬಹುಮತವಿಲ್ಲದಿದ್ದರೂ ಬಿಜೆಪಿ ಅಧಿಕಾರದಾಸೆಗಾಗಿ ಮುಖ್ಯಮಂತ್ರಿ ಸ್ಥಾನ ಪಡೆದು ಮತ್ತೆ ಒಂದೇ ದಿನದಲ್ಲಿ ರಾಜೀನಾಮೆ ನೀಡಿ ನಗೆಪಾಟಲಿಗೆ ಗುರಿಯಾಗಿದೆ.

ರಾಜ್ಯದಲ್ಲೂ ಮಹಾರಾಷ್ಟ್ರದ ಪರಿಸ್ಥಿತಿಯೇ ನಿರ್ಮಾಣವಾಗಲಿದೆ. ಉಪಚುನಾವಣೆಯಲ್ಲಿ ಬಿಜೆಪಿ ಪಕ್ಷವು ಅಗತ್ಯ ಬಹುಮತಕ್ಕೆ ಬೇಕಾದ ಶಾಸಕರನ್ನು ಗೆಲ್ಲಿಸಿಕೊಳ್ಳಲಾಗದೇ ಸಿಎಂ ಯಡಿಯೂರಪ್ಪ ಅವರು ರಾಜೀನಾಮೆ ಕೊಡಬೇಕಾದ ಸಂದರ್ಭ ನಿರ್ಮಾಣವಾಗಲಿದೆ ಎಂದರು.



Share this Story:

Follow Webdunia kannada

ಮುಂದಿನ ಸುದ್ದಿ

ನಟಿ ರಾಗಿಣಿ, ಪಾರು ಭರ್ಜರಿ ಪ್ರಚಾರ - ಅನರ್ಹ ಶಾಸಕರಿಗೆ ಓಟ್ ಹಾಕಿ ಅಂದ್ರು