ಕರ್ನಾಟಕ ಮೂರು ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆಗೆ ಮುಹೂರ್ತ ಫಿಕ್ಸ್‌

Sampriya
ಮಂಗಳವಾರ, 15 ಅಕ್ಟೋಬರ್ 2024 (18:31 IST)
Photo Courtesy X
ಬೆಂಗಳೂರು: ಮಹಾರಾಷ್ಟ್ರ ಹಾಗೂ ಜಾರ್ಖಂಡ್‌ ವಿಧಾನಸಭೆ ಚುನಾವಣೆ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಘೋಷಣೆ ಮಾಡುವುದರ ಜತೆಗೆ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ದಿನಾಂಕವನ್ನು ಘೋಷಿಸಿದೆ.

ಅದರಂತೆ ನವೆಂಬರ್ 13ರಂದು ಕರ್ನಾಟಕದ ಹಾವೇರಿ ಜಿಲ್ಲೆಯ ಶಿಗ್ಗಾಂವಿ, ರಾಮನಗರ ಜಿಲ್ಲೆಯ ಚನ್ನಪಟ್ಟಣ ಹಾಗೂ ಬಳ್ಳಾರಿ ಜಿಲ್ಲೆಯ ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ.  ಮತ ಎಣಿಕೆಯು ನವೆಂಬರ್‌ 23ರಂದು ನಡೆಯಲಿದೆ.

ಶಿಗ್ಗಾಂವಿ ಕ್ಷೇತ್ರದಲ್ಲಿ ಶಾಸಕರಾಗಿದ್ದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಚನ್ನಪಟ್ಟಣ ಕ್ಷೇತ್ರದ ಶಾಸಕರಾಗಿದ್ದ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಹಾಗೂ ಸಂಡೂರು ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದ ಇ.ತುಕಾರಾಂ ಸಂಸದರಾಗಿ ಆಯ್ಕೆಗೊಂಡ ಬಳಿಕ ತೆರವಾಗಿದ್ದ ಶಾಸಕ ಸ್ಥಾನಕ್ಕೆ ಉಪಚುನಾವಣೆ ನಡೆಯಲಿದೆ.

ಇನ್ನೂ ಹೈವೋಲ್ಟೆಜ್ ಕ್ಷೇತ್ರವಾದ ಚನ್ನಪಟ್ಟಣದಲ್ಲಿ ಮೈತ್ರಿ ಹಾಗೂ ಕಾಂಗ್ರೆಸ್ ನಡುವೆ ತೀರಾ ಪೈಪೋಟಿ ಏರ್ಪಟ್ಟಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಬಗ್ಗೆ ಕೇಳಿಬರ್ತಿದೆ ಹೀಗೊಂದು ಸುದ್ದಿ

ದೇವಸ್ಥಾನಗಳಿಗೆ ಸ್ಟ್ರಿಕ್ಟ್ ರೂಲ್ಸ್ ಜಾರಿ ಮಾಡಿದ ಸಿಎಂ ಡಿಕೆ ಶಿವಕುಮಾರ್

ರಸ್ತೆಯಲ್ಲಿ ಹೋಗುವಾಗ ಮೊಬೈಲ್ ನೋಡುತ್ತಾ ಸಾಗುವ ಅಭ್ಯಾಸವಿದ್ದರೆ ಈ ಭೀಕರ ವಿಡಿಯೋ ನೋಡಿ Video

Karnataka Weather: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ

ಮೊಮ್ಮಗ ಕೇಳೋದು ಹೆಚ್ಚೋ ತಾತ ಮಾಡಿಕೊಡೋದು ಹೆಚ್ಚಾ: ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಏನು ಮಾಡಿದ್ರು ನೋಡಿ Video

ಮುಂದಿನ ಸುದ್ದಿ
Show comments