6 ರಾಜ್ಯಗಳ 7 ಸ್ಥಾನಗಳಿಗೆ ಇಂದು ವಿಧಾನಸಭಾ ಉಪಚುನಾವಣೆ ನಡೆಯುತ್ತಿದೆ. ಗುಜರಾತ್ ಮತ್ತು ಹಿಮಾಚಲ ಪ್ರದೇಶಕ್ಕೂ ಮುನ್ನ ಮಹಾರಾಷ್ಟ್ರ, ಬಿಹಾರ, ಉತ್ತರ ಪ್ರದೇಶ, ಒಡಿಶಾ, ತೆಲಂಗಾಣ ಮತ್ತು ಹರಿಯಾಣ ರಾಜ್ಯಗಳ ವಿಧಾನಸಭಾ ಉಪಚುನಾವಣೆಗಳು ನಡೆಯುತ್ತಿವೆ. ಸರ್ಕಾರ ಬದಲಾದ ನಂತರ ಮಹಾರಾಷ್ಟ್ರ ಮತ್ತು ಬಿಹಾರ ರಾಜ್ಯಗಳಲ್ಲಿ ಮೊದಲ ಬಾರಿಗೆ ಚುನಾವಣೆ ನಡೆಯುತ್ತಿದೆ. ಏಕನಾಥ್ ಶಿಂಧೆ ನೇತೃತ್ವದ ಸರ್ಕಾರವು ಮಹಾರಾಷ್ಟ್ರದಲ್ಲಿ ಮಹಾ ವಿಕಾಸ್ ಅಘಾಡಿ ಪತನಗೊಳಿಸಿ ಸರ್ಕಾರ ರಚಿಸಿದ್ದರೆ, ಮುಖ್ಯಮಂತ್ರಿ ನಿತೀಶ್ ಕುಮಾರ್ ಬಿಹಾರದಲ್ಲಿ ಕಾಂಗ್ರೆಸ್ ಮತ್ತು RJDಯೊಂದಿಗೆ ಮೈತ್ರಿ ಮಾಡಿಕೊಂಡು ಮತ್ತೊಮ್ಮೆ ಸರ್ಕಾರ ರಚಿಸಿದ್ದಾರೆ. ನವೆಂಬರ್ 6ರಂದು ಮತಗಳ ಎಣಿಕೆ ನಡೆಯಲಿದೆ.