Publish Date: Sun, 21 May 2017 (15:23 IST)
Updated Date: Sun, 21 May 2017 (15:26 IST)
ಕೆಪಿಸಿಸಿಗೆ ಹೊಸ ಅಧ್ಯಕ್ಷರ ನೇಮಕ ಈ ತಿಂಗಳೊಳಗೆ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಮಾಜಿ ಪ್ರಧಾನಿ, ದಿವಂಗತ ರಾಜೀವ್ ಗಾಂಧಿ ಅವರ ಪುಣ್ಯಸ್ಮರಣೆ ಅಂಗವಾಗಿ ಕೆಪಿಸಿಸಿ ಕಚೇರಿಯಲ್ಲಿ ರಾಜೀವ್ ಗಾಂಧಿಯವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ನಂತರ ಮಾತನಾಡಿದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಈ ತಿಂಗಳೊಳಗೆ ಆಗಲಿದೆ. ಶೀಘ್ರವೇ ಈ ಬಗ್ಗೆ ಹೈಕಮಾಂಡ್ ತೀರ್ಮಾನ ಕೈಗೊಳ್ಳಲಿದೆ ಎಂದರು.
ಪಕ್ಷದ ಹೈಕಮಾಂಡ್ ಕೆಪಿಸಿಸಿ ಅಧ್ಯಕ್ಷರ ಬಗ್ಗೆ ಯಾವುದೇ ತೀರ್ಮಾನ ತೆಗೆದುಕೊಂಡರೂ ನಾವೆಲ್ಲರು ಬದ್ದರಾಗಿದ್ದೇವೆ. ಯಾರೇ ಕೆಪಿಸಿಸಿ ಅಧ್ಯಕ್ಷರಾದರೂ ಅವರಿಗೆ ಸಂಪೂರ್ಣ ಸಹಕಾರ ನೀಡಲಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.