ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿವೈ ವಿಜಯೇಂದ್ರ ನೇಮಕ!

Webdunia
ಶನಿವಾರ, 11 ನವೆಂಬರ್ 2023 (17:00 IST)
ಬಿಎಸ್ ಯಡಿಯೂರಪ್ಪ ಪುತ್ರ, ಶಾಸಕ ಬಿವೈ ವಿಜಯೇಂದ್ರಗೆ ರಾಜ್ಯಾಧ್ಯಕ್ಷ ಪಟ್ಟ ನೀಡಿದೆ. ನೂತನ ಜವಾಬ್ದಾರಿ ವಹಿಸಿಕೊಂಡ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಬಿವೈ ವಿಜಯೇಂದ್ರ, ಮುಂದಿನ ಶುಕ್ರವಾರ ವಿಪಕ್ಷ ನಾಯಕನ ಆಯ್ಕೆ ನಡೆಯಲಿದೆ ಎಂದು ಘೋಷಣೆ ಮಾಡಿದ್ದಾರೆ.

ರಾಜ್ಯ ರಾಜಕೀಯದ ನಿರೀಕ್ಷಿತ ಬೆಳವಣಿಗೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರ ಪುತ್ರ ಹಾಗೂ ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಶಾಸಕ ಬಿವೈ ವಿಜಯೇಂದ್ರ ಅವರಿಗೆ ದೀಪಾವಳಿ ಗಿಫ್ಟ್‌ ಸಿಕ್ಕಿದೆ. ಶುಕ್ರವಾರ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ, ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಿಸಿ ಆದೇಶ ಹೊರಡಿಸಿದ್ದಾರೆ.ಇನ್ನು ಬಿಜೆಪಿಯ ಎದುರಿಗಿದ್ದ ಎರಡು ಪ್ರಶ್ನೆಗಳ ಪೈಕಿ ಒಂದು ಪ್ರಶ್ನೆಗೆ ಉತ್ತರ ಸಿಕ್ಕಂತಾಗಿದೆ. ಇನ್ನು ವಿಪಕ್ಷ ನಾಯಕ ಯಾರಾಗಲಿದ್ದಾರೆ ಎನ್ನುವ ಕುತೂಹಲ ಉಳಿದುಕೊಂಡಿದೆ.

ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಬಿವೈ ವಿಜಯೇಂದ್ರ ನೇಮಕವಾದ ವಿಚಾರ ಸಂಬಂದ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ರೇಣುಕಾಚಾರ್ಯ, ವಿಜಯೇಂದ್ರರ ಪಕ್ಷ ಸಂಘಟನೆ ಸಾಮರ್ಥ್ಯ ನೋಡಿ ಈ ಹುದ್ದೆ ಸಿಕ್ಕಿದೆ. ದೀಪಾವಳಿ ಹಬ್ಬದ ಸಂದರ್ಭದಲ್ಲಿ ವಿಜಯೇಂದ್ರರ ಆಯ್ಕೆ ಪಕ್ಷಕ್ಕೆ ಶಕ್ತಿ ತುಂಬಿದೆ. ಇದು ಮಾಸ್ಟರ್‌ ಸ್ಟ್ರೋಕ್  ಅಂತಾ ಅಭಿಪ್ರಾಯವನ್ನ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Big Breaking: ಆಲ್ ಫಲಾಹ್ ಗ್ರೂಪ್‌ನ ಅಧ್ಯಕ್ಷ 13ದಿನ ಇಡಿ ಕಸ್ಟಡಿಗೆ

ಸ್ಫೋಟಕ್ಕೂ ಮುನ್ನಾ ಮನೆಗೆ ಭೇಟಿ ಕೊಟ್ಟ ಬಾಂಬರ್‌ ಉಮರ್ ಮಾಡಿದ್ದೇನು ಗೊತ್ತಾ

Karnataka Weather, ಚಳಿಯ ಜತೆಗೆ ರಾಜ್ಯದ ಈ ಭಾಗದಲ್ಲಿ ಇಂದು, ನಾಳೆ ಮಳೆ

ಇದೇ ಗುರುವಾರ, ಶುಕ್ರವಾರ ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಸಿಗಲ್ಲ

ಬೆಳಗಾವಿ ಕೃಷ್ಣಮೃಗ ಸಾವು ಪ್ರಕರಣ, ಬಂತು ಪ್ರಯೋಗಾಲಯದ ವರದಿ

ಮುಂದಿನ ಸುದ್ದಿ
Show comments