Publish Date: Mon, 05 Oct 2026 (16:15 IST)
Updated Date: Mon, 05 Oct 2026 (16:20 IST)
ಬೆಂಗಳೂರು: ರಾಜ್ಯದ ವಿಧಾನಪರಿಷತ್ತಿನ ನಾಲ್ಕೂ ಕ್ಷೇತ್ರಗಳಲ್ಲಿ ಎನ್‍ಡಿಎ ಅಭ್ಯರ್ಥಿಗಳು ಗೆಲ್ಲುವ ವಿಶ್ವಾಸವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ.
ಆಗ್ನೇಯ ಪದವೀಧರರ ಕ್ಷೇತ್ರದ ಎನ್.ಡಿ.ಎ. ಅಭ್ಯರ್ಥಿ ಕೆ.ಎಂ. ಸುರೇಶ್, ಬೆಂಗಳೂರು ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಎ.ಪಿ.ರಂಗನಾಥ್ ಅವರು ಇಂದು ಲಾಲ್ ಬಾಗ್ ಬಳಿಯಿಂದ ಪಾದಯಾತ್ರೆಯ ಮೂಲಕ ಶಾಂತಿನಗರದಲ್ಲಿರುವ ಪ್ರಾದೇಶಿಕ ಆಯುಕ್ತರ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು. ಇದೇವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ವಿಜಯೇಂದ್ರ ಅವರು, ಎ.ಪಿ.ರಂಗನಾಥ್ ಮತ್ತು ಕೆ.ಎಂ. ಸುರೇಶ್ ಅವರು ನಾಮಪತ್ರ ಸಲ್ಲಿಸಿದ್ದಾರೆ. ವಾತಾವರಣ ತುಂಬಾ ಚೆನ್ನಾಗಿದೆ ಎಂದು ನುಡಿದರು.
ನಾವು ಮತ್ತು ಜೆಡಿಎಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಚುನಾವಣೆ ಗೆಲ್ಲಲೇಬೇಕೆಂಬ ಉತ್ಸಾಹದಿಂದ ಕೆಲಸ ಮಾಡುತ್ತಿದ್ದೇವೆ. ಮೇಲ್ಮನೆಯ ಪಾವಿತ್ರ್ಯತೆ ಕಾಪಾಡಬೇಕಾಗಿದೆ. ಇಂಥ ಉತ್ತಮ ವ್ಯಕ್ತಿಗಳು ಗೆದ್ದು ಬರಬೇಕಿದೆ ಎಂದು ತಿಳಿಸಿದರು. ಇವರೆಲ್ಲ ಗೆಲ್ಲಲೇಬೇಕೆಂಬ ಸಂಕಲ್ಪದೊಂದಿಗೆ ಕೆಲಸ ಮಾಡುತ್ತೇವೆ ಎಂದು ವಿವರಿಸಿದರು.
ನಮೋಶಿ ಮತ್ತು ಸಂಕನೂರು ಅವರೂ ನಾಳೆ ನಾಮಪತ್ರ ಸಲ್ಲಿಸುತ್ತಾರೆ. 4 ಕ್ಷೇತ್ರಗಳಲ್ಲೂ ನಮ್ಮ ಎನ್‍ಡಿಎ ಅಭ್ಯರ್ಥಿಗಳು ಗೆದ್ದೇಗೆಲ್ಲುತ್ತಾರೆ ಎಂಬ ಸಂಪೂರ್ಣ ವಿಶ್ವಾಸ ಇದೆ ಎಂದು ತಿಳಿಸಿದರು.
About Writer
ಕೃಷ್ಣವೇಣಿ ಕೆ
Completed bachelor degree in Journalism and communication in SDMC Ujire. 15 years of experience as journalist. Worked as sub editor and reporter. Specialties in sports, politics and entertainment.....
ಮತ್ತಷ್ಟು ಓದಿ