ಬೆಂಗಳೂರು: ಸ್ವಾತಂತ್ರ್ಯೋತ್ಸವ ನಿಮಿತ್ತ ಇಂದಿನಿಂದ ಮೂರು ದಿನಗಳ ಕಾಲ ಹರ್ ಘರ್ ತಿರಂಗಾ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದು, ನೀವೂ ಈ ಅಭಿಯಾನದಲ್ಲಿ ಪಾಲ್ಗೊಳ್ಳಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕರೆ ನೀಡಿದ್ದಾರೆ.
ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಜೀ ಅವರ ಕರೆಯ ಮೇರೆಗೆ ದೇಶಾದ್ಯಂತ ಇಂದಿನಿಂದ ಆರಂಭವಾಗಿರುವ ಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ ಇಂದು ಬೆಂಗಳೂರಿನ ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ಪಕ್ಷದ ಕಾರ್ಯಕರ್ತರ ನಿವಾಸಕ್ಕೆ ಭೇಟಿ ನೀಡಿ ಸ್ವಾತಂತ್ರ್ಯ ದಿನಾಚರಣೆಯ ಶುಭಕೋರಿ ಅವರ ನಿವಾಸದಲ್ಲಿ ರಾಷ್ಟ್ರಧ್ವಜ ಹಾರಿಸುವ ಮೂಲಕ ರಾಷ್ಟ್ರಾಭಿಮಾನದ ಈ ಮಹತ್ವದ ಅಭಿಯಾನವನ್ನು ಯಶಸ್ವಿಗೊಳಿಸಲು ಕರೆ ನೀಡಲಾಯಿತು.
ಇನ್ನು ವಿಪಕ್ಷ ನಾಯಕ ಆರ್ ಅಶೋಕ್ ಕೂಡಾ ತಮ್ಮ ಮನೆಯಲ್ಲಿ ತ್ರಿವರ್ಣ ಧ್ವಜ ಹಾರಿಸುವ ಮೂಲಕ ಅಭಿಯಾನದಲ್ಲಿ ಪಾಲ್ಗೊಂಡಿದ್ದಾರೆ. ನೀವೂ ಈ ಅಭಿಯಾನದಲ್ಲಿ ಪಾಲ್ಗೊಳ್ಳಿ ಎಂದು ಜನರಿಗೆ ಕರೆ ನೀಡಿದ್ದಾರೆ.