Select Your Language

Notifications

webdunia
webdunia
webdunia
webdunia

ಶಿಕ್ಷಕರಿಂದ ಮಕ್ಕಳ ಉಜ್ವಲ ಭವಿಷ್ಯ ರೂಪಿಸುವ ಮಹತ್ತರ ಕಾರ್ಯ: ಬಿ.ವೈ.ವಿಜಯೇಂದ್ರ

BY Vijayendra
ಕಾರಟಗಿ (ಕೊಪ್ಪಳ ಜಿಲ್ಲೆ): ಶಿಕ್ಷಣ ತಜ್ಞ, ರಾಷ್ಟ್ರಪತಿಗಳಾದರೂ ದೇಶಸೇವೆ ಮಾಡಿದ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನದ ಅಂಗವಾಗಿ ಶಿಕ್ಷಕರ ದಿನವನ್ನು ಅರ್ಥಪೂರ್ಣವಾಗಿ, ಅದ್ದೂರಿಯಾಗಿ ಆಚರಿಸಲಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು.
 
5ನೇ ದಿನದ ಬಳ್ಳಾರಿ ಚಲೋ ಪಾದಯಾತ್ರೆಯು ಬೆಳಿಗ್ಗೆ ಕಾರಟಗಿಯಲ್ಲಿ ಆರಂಭಗೊಂಡಿತು. ಇದೇವೇಳೆ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಿ ಮಾತನಾಡಿದ ಅವರು, ಶಿಕ್ಷಕರೆಂದರೆ ಕೇವಲ ಪಾಠ ಹೇಳಿ ಕೊಡುವವರಲ್ಲ; ಮಕ್ಕಳ ಉಜ್ವಲ ಭವಿಷ್ಯ ರೂಪಿಸುವ ಮಹತ್ತರ ಕಾರ್ಯವನ್ನು ಅವರು ನಿರ್ವಹಿಸುತ್ತಾರೆ ಎಂದು ವಿಶ್ಲೇಷಿಸಿದರು.
 
ಮಕ್ಕಳ ವ್ಯಕ್ತಿತ್ವ ನಿರ್ಮಿಸುವಲ್ಲಿ ಅವರ ಪಾತ್ರ ಗಮನಾರ್ಹವಾದುದು. ಒಬ್ಬ ಒಳ್ಳೆಯ ಶಿಕ್ಷಕ ಒಂದು ಪೀಳಿಗೆಯನ್ನೇ ಬದಲಾಯಿಸಬಲ್ಲ ಎಂದು ತಿಳಿಸಿದರು. ಪ್ರಧಾನಮಂತ್ರಿ ನರೇಂದ್ರ ಮೋದಿಜೀ ಅವರು 2047ರಲ್ಲಿ ವಿಕಸಿತ ಭಾರತ ನಿರ್ಮಾಣಕ್ಕೆ ಯುವಶಕ್ತಿಯನ್ನು ಸರಿದಾರಿಯಲ್ಲಿ ಒಯ್ಯಬಲ್ಲ ಮಹತ್ವದ ಕಾರ್ಯವನ್ನು ಶಿಕ್ಷಕರು ಮಾಡುತ್ತಾರೆ ಎಂದು ಹೇಳಿದ್ದಾಗಿ ತಿಳಿಸಿದರು.
 
ಶಿಕ್ಷಕರು ರಾಷ್ಟ್ರ ನಿರ್ಮಾಣ ಕಾರ್ಯವನ್ನು ಮೌನವಾಗಿ ನೆರವೇರಿಸುತ್ತಾರೆ. ಆದ್ದರಿಂದ ಅವರನ್ನು ಗೌರವಿಸುವ ಕಾರ್ಯ ಸಮಾಜದಿಂದ- ನಮ್ಮಿಂದ ಆಗಬೇಕು ಎಂದು ಹೇಳಿದರು. ಮಾಜಿ ಸಚಿವ ಬಿ.ಶ್ರೀರಾಮುಲು, ಪ್ರಮುಖರು ಇದ್ದರು.
 

Share this Story:

Follow Webdunia kannada

ಮುಂದಿನ ಸುದ್ದಿ

Video: ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲು ನೆಪ ಹೇಳುತ್ತಿದ್ದ ವ್ಯಕ್ತಿ: ಸಿಸಿಟಿವಿ ಪರಿಶೀಲಿಸಿದಾಗ ಬಯಲಾಯ್ತು ಶಾಕಿಂಗ್ ವಿಚಾರ