Daily Horoscope
✕

ಜಿಬಿಎ, ಸ್ಥಳೀಯ ಸಂಸ್ಥೆ ಚುನಾವಣೆ ಜೊತೆಗೆ ವಿಧಾನಸಭೆ ಚುನಾವಣೆ ಎದುರಿಸಿ: ವಿಜಯೇಂದ್ರ

ಕೃಷ್ಣವೇಣಿ ಕೆ
ಶುಕ್ರವಾರ, 5 ಜೂನ್ 2026 (16:20 IST)
ಬೆಂಗಳೂರು: ರಾಜ್ಯದಲ್ಲಿ ಭ್ರಷ್ಟಾಚಾರ ರಹಿತ ಆಡಳಿತ ನೀಡಲು ಸರ್ಕಾರಕ್ಕೆ ಸಾಧ್ಯವಿಲ್ಲ ಎಂದಾದರೆ ಜಿಬಿಎ ಹಾಗೂ ಸ್ಥಳೀಯ ಸಂಸ್ಥೆ ಚುನಾವಣೆ ಜೊತೆಗೆ ವಿಧಾನಸಭೆ ವಿಸರ್ಜನೆ ಮಾಡಿ ಚುನಾವಣೆ ಎದುರಿಸಿ ಎಂದು ಎಂದು ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಸವಾಲು ಎಸೆದಿದ್ದಾರೆ.

ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎರಡು ವರ್ಷದಿಂದ ಸಿಎಂ ಕುರ್ಚಿಗೆ ಹಗ್ಗ ಜಗ್ಗಾಟ ನಡಿತಾ ಇತ್ತು. ಸಿಎಂ ಆಗಿ ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ 48 ಗಂಟೆಗಳ ಒಳಗೆ ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ಅವರು ರಾಜೀನಾಮೆ ನೀಡಿದ್ದಾರೆ. ಇನ್ನೂ ಈ ಕಾಂಗ್ರೆಸ್ ಸರ್ಕಾರ ಕಚ್ಚಾಟದಿಂದ ಹೊರಗೆ ಬರುವ ಲಕ್ಷಣ ಇಲ್ಲ ಎಂದು ವಿಶ್ಲೇಷಿಸಿದರು.

ರಾಜ್ಯದಲ್ಲಿ ಏನೇನೂ ಅಭಿವೃದ್ಧಿ ಕಾರ್ಯ ಮಾಡದ ಕಾಂಗ್ರೆಸ್ ಸರ್ಕಾರ ಇನ್ನೂ ಕಚ್ಚಾಟದಿಂದ ಹೊರಗೆ ಬಂದಿಲ್ಲ. ಈ ಸರ್ಕಾರದ ಬಗ್ಗೆ ಜನ ಬೇಸತ್ತಿದ್ದಾರೆ ಎಂದು ಹೇಳಿದರು. ರೈತರು ಬೀದಿದಿಳಿದು ಹೋರಾಟ ಮಾಡುತ್ತಿದ್ದಾರೆ. ಎಲ್ಲರನ್ನೂ ಸರಿದೂಗಿಸಿಕೊಂಡು ಹೋಗುವಲ್ಲಿ ಸಿಎಂ ಶಿವಕುಮಾರ್ ಅವರು ವಿಫಲರಾಗಿದ್ದಾರೆ. ಡಿಕೆಶಿ, ಬಿ.ಕೆ ಹರಿಪ್ರಸಾದ್, ಮಲ್ಲಿಕಾರ್ಜುನ ಖರ್ಗೆ ಮತ್ತು ಸಿದ್ದರಾಮಯ್ಯ ಹೀಗೆ ನಾಲ್ಕು ಪವರ್ ಸೆಂಟರ್ ನಡುವೆ ಕಾಂಗ್ರೆಸ್ ಒದ್ದಾಡುತ್ತಿದೆ. ಈ ಪವರ್ ಸೆಂಟರ್‍ಗಳು ಶಿವಕುಮಾರ್ ಅವರ ನಿದ್ದೆಗೆಡಿಸುತ್ತವೆ ಎಂದರು.

ಜನರಿಗಾಗಿ, ಬಡವರಿಗಾಗಿ, ರೈತರಿಗಾಗಿ ಏನೂ ಒಳಿತು ಮಾಡಲು ಆಗದ ಕಾಂಗ್ರೆಸ್ ಸರ್ಕಾರ ರಾಜ್ಯವನ್ನು ಗಾಂಧಿ ಕುಟುಂಬಕ್ಕೆ ಮಾರುವ, ಅಡ ಇಡುವ ಹಾಗೂ ಬೊಕ್ಕಸದಿಂದ ಲೂಟಿ ಮಾಡುವ ಕೆಲಸವನ್ನು ಕಳೆದ ಮೂರು ವರ್ಷದಿಂದ ಮಾಡುತ್ತಾ ಇತ್ತು. ಅದು ಈಗ ಮುಂದುವರಿಯಲಿದೆ. ಅದಕ್ಕೆ ಬೇಕಾದ ಷಡ್ಯಂತ್ರ ನಡೆಯುತ್ತಿದೆ ಎಂದು ಹೇಳಿದರು.

ಇಂದು ರಾಮಲಿಂಗಾ ರೆಡ್ಡಿ ರಾಜೀನಾಮೆ ನೀಡಿದ್ದಾರೆ. ಕೆ ಎಚ್ ಮುನಿಯಪ್ಪ, ಕೆ ಜೆ ಜಾರ್ಜ್ ಸಹ ತಮ್ಮ ಖಾತೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಭಿವೃದ್ಧಿಗಿಂತ ಇವರಿಗೆ ಅಧಿಕಾರದ ಹಪಾಹಪಿ ಹೆಚ್ಚಾಗಿದೆ. ಇದರಿಂದ ಬೇಸತ್ತ ಜನ ವಿಧಾನಸಭಾ ಚುನಾವಣೆ ಆಗಿ ದರಿದ್ರ ಕಾಂಗ್ರೆಸ್ ಸರ್ಕಾರ ತೊಲಗಬೇಕು ಎಂದು ಬಯಸಿದ್ದಾರೆ. ಕಾಂಗ್ರೆಸ್‍ನವರಿಗೆ ಮಾನ ಮರ್ಯಾದೆ ಇಲ್ಲ ಎಂದು ರಾಜ್ಯದ ಜನ ಮಾತನಾಡುತ್ತಿದ್ದಾರೆ ಎಂದರು. ಮುಖ್ಯಮಂತ್ರಿ ಶಿವಕುಮಾರ್ ಅವರಿಗೆ ಸಾಕಷ್ಟು ಅನುಭವ ಇದೆ. ಅವರು ಕಸದಿಂದ ರಸ ತೆಗೆಯುವ ಕಲೆಯನ್ನು ಕರಗತ ಮಾಡಿಕೊಂಡಿದ್ದಾರೆ. ಹಿರಿಯ ಸಚಿವರನ್ನು ಕಡೆಗಣಿಸಿದ್ದಾರೆ ಎಂಬ ಚರ್ಚೆ ಆರಂಭವಾಗಿದೆ. ಇದು ಸರ್ಕಾರಕ್ಕೆ ಗೌರವ ತರುವುದಿಲ್ಲ ಎಂದರು.

ಸೀನಿಯಾರಿಟಿ ಮತ್ತು ಸಿನ್ಸಿಯಾರಿಟಿಗೆ ಕಾಂಗ್ರೆಸ್‍ನಲ್ಲಿ ಬೆಲೆ ಇಲ್ಲ ಎಂದು ಮನಿಯಪ್ಪ ಅವರೇ ಹೇಳಿದ್ದಾರೆ. ಹೀಗೇ ಆದರೆ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರ ಬರಲು ಸಾಧ್ಯವಿಲ್ಲ ಎಂದು ವಿವರಿಸಿದರು. ಕಾಂಗ್ರೆಸ್ ಆಂತರಿಕ ಕಚ್ಚಾಟದಿಂದ ಮಾತ್ರವೇ ಬಿಜೆಪಿ ಗೆಲುವು ಅಲ್ಲ. ಬಿಜೆಪಿಗೆ ತನ್ನದೇ ಆದ ವರ್ಚಸ್ಸು ಇದೆ. ನಮ್ಮಲ್ಲಿ ಕಾರ್ಯಕರ್ತರು ಕೆಲಸ ಮಾಡುತ್ತಾರೆ. ಮುಂದಿನ ಚುನಾವಣೆಯಲ್ಲಿ ನಮ್ಮದೇ ತಂತ್ರ ಇರಲಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೋಲ್ಕತ್ತಾ, ಸೈರಾಂಗ್ ಎಕ್ಸ್ಪ್ರೆಸ್ ದುರಂತದ ಕೊನೆಯ ಕ್ಷಣದ ಭೀಕರ ವೀಡಿಯೋ ವೈರಲ್

ಮಗಳಿಗೆ ಅಸಭ್ಯ ಸನ್ನೆ ಮಾಡಿದ ಯುವಕನ ಕೊರಳ ಪಟ್ಟಿ ಎಳೆದು ಬೀದಿಯಲ್ಲಿ ತಂದ ತಾಯಿ ಮಾಡಿದ ಕೆಲಸಕ್ಕೆ ನೆಟ್ಟಿಗರ ಶಹಬ್ಬಾಶ್ Video

ಆರ್ ಎಸ್ಎಸ್ ವಿರುದ್ಧ ಸುಳ್ಳು ಸುದ್ದಿ ಹರಡಿದ ಆರೋಪ: ಗೃಹಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ದೂರು

ತಾತ ಬನ್ನಿ ತಾತ.. ಕಣ್ಣಲ್ಲೇ ಆರ್ಡರ್ ಕೊಡುವ ಗೃಹಸಚಿವ ಅಮಿತ್ ಶಾ ಮನೆಯಲ್ಲಿ ಮೊಮ್ಮಕ್ಕಳ ಮುಂದೆ ಇಷ್ಟೇ ಕತೆ.. Video

ತಾತನ ಆಸ್ತಿಯಲ್ಲಿ ಸಿಗುತ್ತೆ ಎಂದುಕೊಂಡಿದ್ದ ಮೊಮ್ಮಕ್ಕಳಿಗೆ ಈ ಹೊಸ ನಿಯಮ ಶಾಕಿಂಗ್

ಮುಂದಿನ ಸುದ್ದಿ
Show comments