ಮಲೈ ಮಹದೇಶ್ವರನ ವಾಹನ ಹುಲಿಯನ್ನೇ ಕೊಂದವರನ್ನು ಬಿಡಬಾರದು: ವಿಜಯೇಂದ್ರ

Krishnaveni K
ಶುಕ್ರವಾರ, 27 ಜೂನ್ 2025 (14:46 IST)
ಬೆಂಗಳೂರು: ಮಲೈ ಮಹದೇಶ್ವರರ ವಾಹನವೆಂದು ಹುಲಿಯನ್ನು ಪೂಜಿಸುವ ಬೆಟ್ಟದ ಸನ್ನಿಧಿಯಲ್ಲೇ ತಾಯಿ ಹುಲಿ ಸೇರಿದಂತೆ ಐದು ಹುಲಿಗಳು ಸಾವನ್ನಪ್ಪಿರುವ ಸುದ್ದಿ ಅತ್ಯಂತ ಆಘಾತಕಾರಿ, ಅಮಾನವೀಯ ಹಾಗೂ ಭಕ್ತರ ಮನಸ್ಸಿಗೆ ಘಾಸಿ ತರಿಸಿರುವ ಘಟನೆಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ.

ಈ ಬಗ್ಗೆ ಮಾತನಾಡಿರುವ ಅವರು ಹುಲಿಗಳ ಸಾವಿಗೆ ಖೇದ ವ್ಯಕ್ತಪಡಿಸಿದ್ದಾರೆ. ಹುಲಿಗಳ ಸಾವಿಗೆ ವಿಷ ಪ್ರಾಶನವಾಗಿದ್ದರೆ ಅದು ಅತ್ಯಂತ ಹೇಯ ಹಾಗೂ ಖಂಡನೀಯ. ಈ ನಿಟ್ಟಿನಲ್ಲಿ ಕಠಿಣ ಕ್ರಮ ಕೈಗೊಳ್ಳಲು ಸರ್ಕಾರ ರಚಿಸಿರುವ ತನಿಖಾ ತಂಡ ಶೀಘ್ರ ಸತ್ಯಾಂಶವನ್ನು ಬಯಲಿಗೆಳೆದು ದುಷ್ಕರ್ಮಿಗಳನ್ನು ಬಂಧಿಸಲಿ ಎಂದು ಆಗ್ರಹಿಸಿದ್ದಾರೆ.

'ಮನು ಕುಲದ ಅಸ್ತಿತ್ವ ವನ್ಯಜೀವಿ ಪ್ರಾಣಿಗಳ ಸಂರಕ್ಷಣೆಯಲ್ಲಿದೆ' ಎಂಬ ಅರಿವು ಇನ್ನಷ್ಟು ವ್ಯಾಪಿಸಬೇಕಿದೆ, ಕಾಡಂಚಿನಲ್ಲಿ ವಾಸಿಸುವ ಜನರಲ್ಲಿ ಅರಣ್ಯ ಹಾಗೂ ವನ್ಯ ಜೀವಿಗಳ ಸಂರಕ್ಷಣೆಯ ಕುರಿತು ಅರಿವಿನ ಜಾಗೃತಿಯ ಕಾರ್ಯಕ್ರಮ ಕೈಗೊಳ್ಳಬೇಕಿದೆ. ಪ್ರತಿಯೊಂದು ವನ್ಯಜೀವಿಯೂ ಮನುಷ್ಯ ಸಮಾಜದ ಸ್ನೇಹಜೀವಿ ಹಾಗೂ ದೇಶದ ಸಂಪತ್ತು ಎಂಬ ನಿಟ್ಟಿನಲ್ಲಿ ವ್ಯಾಪಕ ಪ್ರಚಾರಾಂದೋಲನವನ್ನು ಸರ್ಕಾರ ಆರಂಭಿಸಲಿ, ಅದರಲ್ಲೂ ಹುಲಿ ಸಂತತಿ ಕರ್ನಾಟಕ ರಾಜ್ಯದ ಅರಣ್ಯ ಪ್ರದೇಶದ ಹೆಮ್ಮೆಯ  ಹೆಗ್ಗುರುತಾಗಿದೆ. ಹುಲಿಗಳ ಸಂರಕ್ಷಣೆ ನಮ್ಮೆಲ್ಲರ ಹೊಣೆ,ಈ ನಿಟ್ಟಿನಲ್ಲಿ ಸರ್ಕಾರ ಹುಲಿ ಸಂರಕ್ಷಣೆಗಾಗಿ ಕೇಂದ್ರ ಸರ್ಕಾರದ ಯೋಜನೆಯನ್ನು ಬಳಸಿಕೊಂಡು ವಿಶೇಷ ಆದ್ಯತೆಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಅಲ್ಲದೇ ಹುಲಿಗಳ ಸಂರಕ್ಷಣೆ ಹಾಗೂ ಸುರಕ್ಷತೆಯತ್ತ ವಿಶೇಷ ಕಾಳಜಿ ವಹಿಸಬೇಕು ಎಂದು ಆಗ್ರಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಲು ಮರದ ತಿಮ್ಮಕ್ಕನ ಹೆಸರಿನಲ್ಲಿ ಹೊಸ ಘೋಷಣೆ ಮಾಡಿದ ಸಿಎಂ ಸಿದ್ದರಾಮಯ್ಯ

Viral video: ಗರ್ಭಿಣಿ ಮಹಿಳೆ ಮೇಲೆ ಮಾನವೀಯತೆ ಮರೆತು ಸ್ಕೂಟಿ ಹತ್ತಿಸಿದ ಪೊಲೀಸ್

ಶೂದ್ರರು ತಮ್ಮ ವಿರೋಧಿಯಾಗಿರುವ ಆರ್ ಎಸ್ಎಸ್ ಸೇರುತ್ತಾರಲ್ಲಾ ಏನು ಹೇಳೋದು: ಸಿದ್ದರಾಮಯ್ಯ

ಇಂದಿರಾ ಗಾಂಧಿ ದೇಶದ ಪ್ರೇಮದ, ಧೈರ್ಯದ ಪ್ರತೀಕ: ಡಿಕೆ ಶಿವಕುಮಾರ್

ಪಿಎಂ ಕಿಸಾನ್ ಸಮ್ಮಾನ್ ಯೋಜನೆ 21 ನೇ ಕಂತು ಬಿಡುಗಡೆ: ಇಂದೇ ಖಾತೆ ಚೆಕ್ ಮಾಡಿ

ಮುಂದಿನ ಸುದ್ದಿ
Show comments