Select Your Language

Notifications

webdunia
webdunia
webdunia
webdunia

18 ಶಾಸಕರ ಅಮಾನತು ರದ್ದು ಮಾಡಲು ವಿಜಯೇಂದ್ರ ಆಗ್ರಹ

BY Vijayendra

Krishnaveni K

ಬೆಂಗಳೂರು , ಸೋಮವಾರ, 28 ಏಪ್ರಿಲ್ 2025 (13:41 IST)
ಬೆಂಗಳೂರು: ಸ್ಪೀಕರ್ ಅವರು ಆಡಳಿತ ಪಕ್ಷದ ಕೈಗೊಂಬೆಯಾಗಿ ವರ್ತಿಸಬಾರದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಮನವಿ ಮಾಡಿದ್ದಾರೆ.

ಬಿ.ವೈ. ವಿಜಯೇಂದ್ರ ಮತ್ತು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರ ನೇತೃತ್ವದಲ್ಲಿ ಬಿಜೆಪಿ ಶಾಸಕರ ನಿಯೋಗವು ಇಂದು ಗೌರವಾನ್ವಿತ ರಾಜ್ಯಪಾಲರನ್ನು ಭೇಟಿ ಮಾಡಿತು. ಈ ಸಂದರ್ಭದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬಿಜೆಪಿಯ 18 ಶಾಸಕರನ್ನು 6 ತಿಂಗಳ ಕಾಲ ಅಮಾನತು ವಿಷಯದಲ್ಲಿ ಸಂವಿಧಾನ ವಿರೋಧಿ ನಡೆಯನ್ನು ಅನುಸರಿಸಲಾಗಿದ್ದು, ಸ್ಪೀಕರ್ ಅವರು ಇದಕ್ಕೆ ಬೆಂಬಲ ಕೊಡಬಾರದು ಎಂದು ಒತ್ತಾಯಿಸಿದರು.

ಆಡಳಿತ ಪಕ್ಷಕ್ಕೆ ಮನವರಿಕೆ ಮಾಡಿ ಸ್ಪೀಕರ್ ಅವರು ತಮ್ಮ ನಿರ್ಧಾರದಿಂದ ಹಿಂದೆ ಸರಿಯಬೇಕೆಂದು ಆಗ್ರಹಿಸಿದರು. ಗೌರವಾನ್ವಿತ ರಾಜ್ಯಪಾಲರನ್ನು ಭೇಟಿ ಮಾಡಿದ್ದೇವೆ. ರಾಜ್ಯಪಾಲರು ಇದರಲ್ಲಿ ಮಧ್ಯಸ್ಥಿಕೆ ವಹಿಸಬೇಕು. ಸರಕಾರಕ್ಕೆ ಬುದ್ಧಿ ಹೇಳಬೇಕೆಂದು ಕೋರಿದ್ದಾಗಿ ವಿವರಿಸಿದರು.

ಈಚೆಗೆ ನಡೆದ ಸದನದ ಕಲಾಪದಲ್ಲಿ ಬಿಜೆಪಿಯ 18 ಶಾಸಕರ ಅಮಾನತು ಕೂಡ ಆಗಿದೆ. ಹಲವಾರು ಬಾರಿ ವಿಪಕ್ಷದ ನಾಯಕರು ಮತ್ತು ಶಾಸಕರು ಸಭಾಧ್ಯಕ್ಷರನ್ನು ಭೇಟಿ ಮಾಡಿ ಮನವಿ ಮಾಡಿದರೂ ಶಾಸಕರ ಅಮಾನತನ್ನು ಹಿಂಪಡೆದಿಲ್ಲ ಎಂದರು. ಸ್ಪೀಕರ್ ಅವರು ಮಂಗಳೂರಿನಲ್ಲಿ ಹೇಳಿಕೆ ನೀಡಿದ್ದು, 18 ಶಾಸಕರ ಅಮಾನತು ತಮ್ಮೊಬ್ಬರ ತೀರ್ಮಾನ ಅಲ್ಲ ಎಂದಿದ್ದಾರೆ ಎಂದು ಗಮನ ಸೆಳೆದರು.
 

Share this Story:

Follow Webdunia kannada

ಮುಂದಿನ ಸುದ್ದಿ

Pehalgam ದಾಳಿಯಾದ್ರೂ ಪ್ರವಾಸಿಗರಿಗೆ ಚಿಂತೆಯಿಲ್ಲ: ದಾಳಿ ನಡೆದ ಕಾಶ್ಮೀರಕ್ಕೆ ಪ್ರವಾಸಿಗರ ದಂಡು