ಸರಕಾರಿ ಸಾರಿಗೆ ನೌಕರರ ಮುಷ್ಕರಕ್ಕೆ ಪರಿಹಾರ ಕೊಡಿ: ಬಿ.ವೈ.ವಿಜಯೇಂದ್ರ

Krishnaveni K
ಮಂಗಳವಾರ, 5 ಆಗಸ್ಟ್ 2025 (14:01 IST)
ಬೆಂಗಳೂರು: ಸರಕಾರಿ ಸಾರಿಗೆ ನೌಕರರ ಮುಷ್ಕರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೂಡಲೇ ಪರಿಹಾರ ನೀಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ.
 
ನಗರದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮುಷ್ಕರದಿಂದ ಬಸ್ ಸಿಗದೇ ಗ್ರಾಮೀಣ ಭಾಗದಲ್ಲಿ ಶಾಲಾ ಮಕ್ಕಳಿಗೆ ತೀವ್ರ ಸಮಸ್ಯೆ ಆಗಿದೆ. ಸರಕಾರಿ ಬಸ್ಸಿಲ್ಲದೆ ಕಾಲೇಜು, ಶಾಲಾ ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ ಎಂದು ಗಮನ ಸೆಳೆದರು. ಗ್ಯಾರಂಟಿ ಕಾರಣಕ್ಕಾಗಿ ಗ್ರಾಮೀಣ ಭಾಗದ ಬಸ್ ಓಡಾಟವನ್ನು ಕಡಿತಗೊಳಿಸಿದ್ದಾರೆ ಎಂದು ಅವರು ಆಕ್ಷೇಪಿಸಿದರು.
 
ಕೆಎಸ್‍ಆರ್‍ಟಿಸಿ ಮತ್ತಿತರ ಸಾರಿಗೆ ಸಂಸ್ಥೆಗಳ ನೌಕರರಿಗೆ ವೇತನ ಕೊಡಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಬಹಳ ತಿಂಗಳುಗಳಿಂದ ಆರ್ಥಿಕ ಮುಗ್ಗಟ್ಟು ಇದ್ದು, ಸಮಸ್ಯೆ ಉಲ್ಬಣವಾಗಿದೆ. ಹಾಗಾಗಿ ಅವರ ಬೇಡಿಕೆ ಈಡೇರಿಸಲು ಮುಖ್ಯಮಂತ್ರಿಗಳಿಗೆ ಸಾಧ್ಯವಾಗುತ್ತಿಲ್ಲ ಎಂದು ತಿಳಿಸಿದರು.
 
ಮುಖ್ಯಮಂತ್ರಿಗಳು ತಡ ಮಾಡದೇ, ತಕ್ಷಣವೇ ಕಾರ್ಮಿಕರ ಮತ್ತು ಅಧಿಕಾರಿಗಳ ಸಭೆ ಕರೆಯಬೇಕು. ಅವರ ಸಮಸ್ಯೆಗೆ ಪರಿಹಾರ ನೀಡಬೇಕು. ಜನಸಾಮಾನ್ಯರಿಗೆ ತೊಂದರೆ ಆಗುವುದನ್ನು ತಪ್ಪಿಸಬೇಕು ಎಂದು ಒತ್ತಾಯಿಸಿದರು. ಇದು ಮುಖ್ಯಮಂತ್ರಿಗಳ ಕರ್ತವ್ಯ. ಸಾರಿಗೆ ಸಚಿವರೂ ಕುಳಿತು ಸಮಸ್ಯೆಗೆ ಪರಿಹಾರ ನೀಡಬೇಕೆಂದು ಆಗ್ರಹವನ್ನು ಮುಂದಿಟ್ಟರು. ರಾಹುಲ್ ಗಾಂಧಿಯವರ ಬೆಂಗಳೂರು ಭೇಟಿ ಕಾರಣಕ್ಕಾಗಿ ಮುಖ್ಯಮಂತ್ರಿಗಳು ನಿನ್ನೆ ಸಾರಿಗೆ ನೌಕರರ ಸಭೆ ಕರೆದಿದ್ದರು ಎಂದೂ ಅವರು ಆರೋಪಿಸಿದರು.
 
ಏನು ಪರ್ಯಾಯ ವ್ಯವಸ್ಥೆ ಮಾಡಿದ್ದಾರೆ? ನಿನ್ನೆ ಸುತ್ತೋಲೆಯನ್ನೂ ಹೊರಡಿಸಿದ್ದಾರೆ. ಖಾಸಗಿ ಶಿಕ್ಷಣ ಸಂಸ್ಥೆಗಳ ಬಸ್‍ಗಳೂ ಬೇಕೆಂದು ನಿನ್ನೆ ಪತ್ರ ಬರೆದಿದ್ದಾರೆ. ಮೊದಲೇ ವ್ಯವಸ್ಥೆ ಹಾಳು ಮಾಡಲು ಹೊರಟಿದ್ದಾರೆ. ಈಗ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲೂ ಸಮಸ್ಯೆ ಹುಟ್ಟಿಸಲು ಹೊರಟಿದ್ದೀರಿ ಎಂದು ಅವರು ಈ ಕುರಿತ ಪ್ರಶ್ನೆಗೆ ಉತ್ತರ ನೀಡಿದರು.
 
ಗಡ್ಡಕ್ಕೆ ಬೆಂಕಿ ಹತ್ತಿಕೊಂಡಾಗ ಸಮಸ್ಯೆ ಪರಿಹರಿಸಲು ಹೊರಟಿದ್ದಾರೆ. ಈಗಲೂ ಕಾಲ ಮಿಂಚಿಲ್ಲ; ಮುಷ್ಕರ ಈಗಾಗಲೇ ಪ್ರಾರಂಭವಾಗಿದೆ. ಸಂಬಂಧಿತರನ್ನು ಕರೆದು ಸಮಸ್ಯೆ ಪರಿಹರಿಸಬೇಕು ಎಂದು ಅವರು ತಿಳಿಸಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮಪ್ಪನ ನಂತ್ರ ಸತೀಶ್ ಜಾರಕಿಹೊಳಿ ಕಾಂಗ್ರೆಸ್ ನಾಯಕ: ಡಿಕೆಶಿ ಕನಸಿಗೆ ಕೊಳ್ಳಿಯಿಟ್ಟ ಯತೀಂದ್ರ ಸಿದ್ದರಾಮಯ್ಯ

ಗಣೇಶ ಹಬ್ಬದಲ್ಲಿ ಎಣ್ಣೆ ಹಾಕ್ಕೊಂಡು ಮಸೀದಿ ಮುಂದೆ ಡ್ಯಾನ್ಸ್ ಮಾಡೋದು ಯಾಕೆ: ಬಿಕೆ ಹರಿಪ್ರಸಾದ್ ವಿವಾದ

ರಾಯರಿದ್ದಾರೆ ಎಂದು ಮಂತ್ರಾಲಯದಲ್ಲಿ ಕೈ ಮುಗಿದ ಡಿಕೆ ಶಿವಕುಮಾರ್: ನೀವು ಸಿಎಂ ಆಗೇ ಆಗ್ತೀರಾ ಎಂದ ನೆಟ್ಟಿಗರು

ದಲಿತ ಸಂಘಟನೆಗಳಿಗೆ ನಂದೇ ಪ್ರಾಯೋಜಕತ್ವ ಏನಿವಾಗ ಎಂದ ಪ್ರಿಯಾಂಕ್ ಖರ್ಗೆ: ಇಲ್ಲಿದ್ರೆ ಸಸ್ಪೆಂಡ್ ಇಲ್ವಾ ಎಂದ ನೆಟ್ಟಿಗರು

Video: ದೀಪಾವಳಿ ಬೋನಸ್ ಬದಲು ಸೋನ್ ಪಾಪ್ಡಿ ಕೊಟ್ಟ ಬಾಸ್: ನೌಕರರು ಮಾಡಿದ್ದೇನು

ಮುಂದಿನ ಸುದ್ದಿ
Show comments