Publish Date: Wed, 24 Dec 2025 (11:56 IST)
Updated Date: Wed, 24 Dec 2025 (12:02 IST)
ಬೆಂಗಳೂರು: ರಾಜ್ಯದ ಒಟ್ಟು 4 ಪಟ್ಟಣ ಪಂಚಾಯಿತಿಗಳಲ್ಲಿ ಬಿಜೆಪಿ ಜಯಭೇರಿ ಬಾರಿಸಿದ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಸಂತಸ ವ್ಯಕ್ತಪಡಿಸಿದ್ದಾರೆ.
ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ಚುನಾವಣೆಯಲ್ಲಿ ಬಿಜೆಪಿ ಬಹುಮತ ಪಡೆದಿದೆ. ಇದಲ್ಲದೇ ದೊಡ್ಡಬಳ್ಳಾಪುರ ನಗರಸಭೆಯ ಒಂದು ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ ಎಂದು ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಬಜಪೆ, ಕಿನ್ನಿಗೋಳಿ, ಉತ್ತರ ಕನ್ನಡ ಜಿಲ್ಲೆಯ ಮಂಕಿ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲೂ ಬಿಜೆಪಿ ಬಹುಮತ ಸಾಧಿಸಿದೆ. ಇದಲ್ಲದೇ ರಾಯಚೂರು ಜಿಲ್ಲೆಯ ತುರ್ವಿಹಾಳದ ಪಟ್ಟಣ ಪಂಚಾಯಿತಿಯ 4ನೇ ವಾರ್ಡ್‍ಗೆ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆದ್ದಿದ್ದಾರೆ ಎಂದಿರುವ ಅವರು, ವಿಜೇತ ಅಭ್ಯರ್ಥಿಗಳನ್ನು ಅಭಿನಂದಿಸಿದ್ದಾರೆ.