ನವದೆಹಲಿ: ಕಾಂಗ್ರೆಸ್ ನಲ್ಲಿ ನಾಯಕತ್ವ ಬದಲಾವಣೆ ಸದ್ದು ಮಾಡುತ್ತಿದ್ದರೆ ಇತ್ತ ರಾಜ್ಯ ಬಿಜೆಪಿಯಲ್ಲೂ ರಾಜ್ಯಾಧ್ಯಕ್ಷ ಬದಲಾವಣೆ ವಿಚಾರ ಕ್ಲೈಮ್ಯಾಕ್ಸ್ ಹಂತಕ್ಕೆ ಬಂದಿದೆ.
ಕರ್ನಾಟಕ ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಹೊಸಬರನ್ನು ಆಯ್ಕೆ ಮಾಡಲಾಗುತ್ತದೆಯೇ ಅಥವಾ ವಿಜಯೇಂದ್ರನೇ ಮುಂದುವರಿಯಲಿದ್ದಾರೆಯೇ ಎಂಬ ಕುತೂಹಲ ಎಲ್ಲರಲ್ಲಿದೆ. ತಮ್ಮನ್ನೇ ಮುಂದುವರಿಸಬಹುದು ಎಂಬ ವಿಶ್ವಾಸದಲ್ಲಿ ವಿಜಯೇಂದ್ರ ಇದ್ದಾರೆ.
ಆದರೆ ಅದು ಅಷ್ಟು ಸುಲಭವಲ್ಲ. ಯಾಕೆಂದರೆ ವಿಜಯೇಂದ್ರ ಮುಂದುವರಿಕೆಗೆ ಅವರ ವಿರೋಧೀ ಬಣ ತೀವ್ರ ಒತ್ತಡ ಹಾಕುತ್ತಿದೆ. ಹೀಗಾಗಿ ಹೈಕಮಾಂಡ್ ತೀರ್ಮಾನದ ಮೇಲೆ ಈಗ ಎಲ್ಲರ ದೃಷ್ಟಿ ನೆಟ್ಟಿದೆ. ಖಾಸಗಿ ಕಾರ್ಯಕ್ರಮ ನೆಪದಲ್ಲಿ ವಿಜಯೇಂದ್ರ ದೆಹಲಿಗೆ ತೆರಳಿದ್ದಾರೆ.
ಈ ವೇಳೆ ಅವರು ಹೈಕಮಾಂಡ್ ನಾಯಕರನ್ನು ಭೇಟಿ ಮಾಡಲ್ಲ ಎನ್ನಲಾಗುತ್ತಿದೆ. ಹಾಗಿದ್ದರೂ ರಾಜ್ಯಾಧ್ಯಕ್ಷರ ಆಯ್ಕೆ ಸಮಯದಲ್ಲೇ ವಿಜಯೇಂದ್ರ ದೆಹಲಿಗೆ ಭೇಟಿ ನೀಡಿರುವುದು ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ. ವಿದೇಶ ಪ್ರವಾಸಕ್ಕೆ ತೆರಳಿದ್ದ ಪ್ರಧಾನಿ ಮೋದಿ ಈಗ ಭಾರತಕ್ಕೆ ಮರಳಲಿದ್ದಾರೆ. ಹೀಗಾಗಿ ಸದ್ಯದಲ್ಲೇ ರಾಜ್ಯಾಧ್ಯಕ್ಷರ ಘೋಷಣೆಯಾವುದು ಖಚಿತವಾಗಿದೆ.