Select Your Language

Notifications

webdunia
webdunia
webdunia
webdunia

ಇಂದಿರಾ ಗಾಂಧಿ ದಾಖಲೆ ಮುರಿದ ಮೋದಿ ಹಾಡಿ ಹೊಗಳಿದ ವಿಜಯೇಂದ್ರ

BY Vijayendra

Krishnaveni K

ಬೆಂಗಳೂರು , ಶುಕ್ರವಾರ, 25 ಜುಲೈ 2025 (12:43 IST)
ಬೆಂಗಳೂರು: ಅತೀ ಸುದೀರ್ಘ ಅವಧಿಗೆ ಪ್ರಧಾನಿಯಾಗಿ ಇಂದಿರಾ ಗಾಂಧಿಯವರ ದಾಖಲೆಯನ್ನು ಇಂದು ಪ್ರಧಾನಿ ಮೋದಿ ಮುರಿದಿದ್ದಾರೆ. ಈ ಹಿನ್ನಲೆಯಲ್ಲಿ ಮೋದಿ ಸಾಧನೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರನ್ನು ಹಾಡಿಹೊಗಳಿದ್ದಾರೆ.

ಮೋದಿಯವರನ್ನು ಅಭಿನಂದಿಸಿ ಟ್ವೀಟ್ ಮಾಡಿರುವ ವಿಜಯೇಂದ್ರ ‘ಹೆಮ್ಮೆಯ ಪ್ರಧಾನಿ ಶ್ರೀ ನರೇಂದ್ರ ಮೋದಿ ಜೀ ಅವರು ಪ್ರಧಾನಿಗಳಾಗಿ ಸತತವಾಗಿ 4,078 ದಿನಗಳನ್ನು ಪೂರೈಸುವ ಮೂಲಕ ಮಾಜಿ ಪ್ರಧಾನಿ ಶ್ರೀಮತಿ ಇಂದಿರಾ ಗಾಂಧಿ ಅವರ ದಾಖಲೆಯನ್ನು ಮುರಿದು ಸದೃಢ ಹಾಗೂ ಸಮರ್ಥ ಪ್ರಧಾನಿಗಳಾಗಿ ಹೊರಹೊಮ್ಮಿರುವುದು ಅತ್ಯಂತ ಹೆಮ್ಮೆಯ ಸಂಗತಿ. ಜಗತ್ತೇ ಮೆಚ್ಚಿದ ವಿಶ್ವನಾಯಕನಾಗಿ, ದಣಿವರಿಯದೆ ದೇಶದ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ, ದಕ್ಷ ಆಡಳಿತ, ಸಮರ್ಥ ನಾಯಕತ್ವ, ಸ್ಪಂದನಶೀಲ ಪ್ರಧಾನಿಯಾಗಿ ದೇಶ ಮುನ್ನಡೆಸುತ್ತಿದ್ದಾರೆ.

ವಿಕಸಿತ ಭಾರತ ನಿರ್ಮಾಣಕ್ಕಾಗಿ  ಮಹಾಸಂಕಲ್ಪ ತೊಟ್ಟು ತಪಸ್ವಿ ಸಾಧಕರಂತೆ ದೇಶ ಕಟ್ಟುವ ಕಾಯಕದಲ್ಲಿ ತಮ್ಮನ್ನು ಸಮರ್ಪಿಸಿಕೊಂಡಿರುವ  ಹೆಮ್ಮೆಯ ಪ್ರಧಾನಿ ಮೋದಿ ಜೀ ಯವರ ಕಾರ್ಯ ಶೈಲಿ ನಮ್ಮಂಥ ಕಾರ್ಯಕರ್ತರಿಗೆ ನಿತ್ಯ ಚೈತನ್ಯದ ಚಿಲುಮೆಯಾಗಿದೆ.

ಇಡೀ ವಿಶ್ವವೇ ಭಾರತದ ಕಡೆಗೆ ತಿರುಗಿ ನೋಡುವಂತೆ ಸಾಮಾಜಿಕ, ಆರ್ಥಿಕ, ಮೂಲಸೌಕರ್ಯ, ರಕ್ಷಣೆ, ಔದ್ಯೋಗಿಕ, ಶೈಕ್ಷಣಿಕ, ವಿದೇಶಾಂಗ ಕ್ಷೇತ್ರಗಳಲ್ಲಿ ಅನೇಕ ರೀತಿಯ ಬದಲಾವಣೆಗಳನ್ನು, ಯೋಜನೆಗಳನ್ನು ತರುವ ಮೂಲಕ ಭಾರತ ಅಭಿವೃದ್ಧಿ ಪಥದತ್ತ ಸಾಗಿದೆ. ತಮ್ಮ ದಕ್ಷ ಹಾಗೂ ಸಮರ್ಥ ನಾಯಕತ್ವದಲ್ಲಿ ಜಗತ್ತಿನ 4 ನೇ ಅತೀದೊಡ್ಡ ಆರ್ಥಿಕ ರಾಷ್ಟ್ರವಾಗಿ ಹೊರಹೊಮ್ಮಿದ್ದು ವಿಕಸಿತ ಭಾರತದ ಸಂಕಲ್ಪಿತ ಗುರಿ ಶೀಘ್ರ ತಲುಪುವ ಅಚಲ ವಿಶ್ವಾಸದೊಂದಿಗೆ ಮಾನ್ಯ ಪ್ರಧಾನಿಗಳನ್ನು ಅಭಿನಂದಿಸುವೆ’ ಎಂದಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

Arecanut Price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ