Select Your Language

Notifications

webdunia
webdunia
webdunia
webdunia

ಒಂದೇ ಕಪ್ಪು ಚುಕ್ಕೆಯಿಲ್ಲದೇ ದೇಶ ಮುನ್ನಡೆಸುತ್ತಿದ್ದಾರೆ ಮೋದಿ ಜೀ: ವಿಜಯೇಂದ್ರ ಹೊಗಳಿಕೆ

BY Vijayendra
ಬೆಂಗಳೂರು: ನಮ್ಮ ದೇಶದ ಹೆಮ್ಮೆಯ ಪ್ರಧಾನಮಂತ್ರಿ ನರೇಂದ್ರ ಮೋದಿಜಿ ಅವರು 25 ವರ್ಷಗಳ ಕಾಲ ಸಾರ್ವಜನಿಕ ಬದುಕಿನಲ್ಲಿ ಯಾವುದೋ ಒಂದು ಕಪ್ಪು ಚುಕ್ಕೆ ಇಲ್ಲದೇ ದೇಶವನ್ನು ಮುನ್ನಡೆಸುವಂತಹ ಕೆಲಸ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ.
 
ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಬಿಜೆಪಿ ಕಲೆ ಮತ್ತು ಸಾಂಸ್ಕøತಿಕ ಪ್ರಕೋಷ್ಠದ ವತಿಯಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ಜೀ ಅವರ 25 ವರ್ಷಗಳ ಸೇವೆಯ ಅಂಗವಾಗಿ ಬಿಡಿಸಿದ ಚಿತ್ರಕಲಾಕೃತಿಗಳನ್ನು ವೀಕ್ಷಿಸಿ ಅವರು ಮಾತನಾಡಿದರು.
 
ನಮ್ಮ ರಾಷ್ಟ್ರೀಯ ಅಧ್ಯಕ್ಷರಾದ ನಿತಿನ್ ನವೀನ್ ಅವರ ಅಪೇಕ್ಷೆಯಂತೆ ಸೆಪ್ಟೆಂಬರ್ 17ರಿಂದ ಅಕ್ಟೋಬರ್ 17ರವರೆಗೆ ಸೇವಾ ಸಂಕಲ್ಪ ಅಭಿಯಾನವನ್ನು ಹಮ್ಮಿಕೊಂಡಿದ್ದೇವೆ. ಅದರ ಅಂಗವಾಗಿ ಜಗನ್ನಾಥ ಭವನದಲ್ಲಿ ಇವತ್ತು ರಾಜ್ಯದ ಮೂಲೆ ಮೂಲೆಗಳಿಂದ ಮತ್ತು ಅಸ್ಸಾಂ, ಪಶ್ಚಿಮ ಬಂಗಾಳ, ರಾಜಸ್ಥಾನ, ಮಧ್ಯಪ್ರದೇಶ ಮತ್ತಿತರ ಹೊರರಾಜ್ಯಗಳಿಂದ ಕಲಾವಿದರು ಆಗಮಿಸಿ ಕಲಾಕೃತಿ ಬಿಡಿಸಿದ್ದಾರೆ ಎಂದು ಕಲಾವಿದರಿಗೆ ಕೃತಜ್ಞತೆ ಸಲ್ಲಿಸಿದರು. ಪ್ರಕೋಷ್ಠಗಳ ಸಂಚಾಲಕರು, ಬಿಜೆಪಿ ಕಲೆ ಮತ್ತು ಸಾಂಸ್ಕøತಿಕ ಪ್ರಕೋಷ್ಠದ ಪ್ರಮುಖರನ್ನು ಅಭಿನಂದಿಸಿದರು.
 

Share this Story:

Follow Webdunia kannada

ಮುಂದಿನ ಸುದ್ದಿ

ಗಣೇಶ ಪ್ರತಿಷ್ಠಾಪನೆ ಆಗುವ ಮುನ್ನ ಚಪ್ಪಲಿ ಹಾಕಿಕೊಂಡರೆ ತಪ್ಪಿಲ್ಲ: ಯದುವೀರ್ ಒಡೆಯರ್