Publish Date: Sat, 19 Sep 2026 (16:14 IST)
Updated Date: Sat, 19 Sep 2026 (16:16 IST)
ಹುಬ್ಬಳ್ಳಿ: ಕಾರ್ಯಕ್ರಮ ನಿಮಿತ್ತ ಹುಬ್ಬಳ್ಳಿಗೆ ಆಗಮಿಸಿದ್ದ ಕೇಂದ್ರ ಗೃಹಸಚಿವ ಅಮಿತ್ ಶಾ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಇಂದು ಭೇಟಿ ಮಾಡಿ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಿದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಮತ್ತು ಜನವಿರೋಧಿ ನೀತಿಗಳ ವಿರುದ್ಧ ಅಭೂತಪೂರ್ವ ಯಶಸ್ಸು ಕಂಡ ಬಳ್ಳಾರಿ ಚಲೋ ಪಾದಯಾತ್ರೆಯ ಸಂಪೂರ್ಣ ವಿವರಗಳನ್ನು ಇದೇ ಸಂದರ್ಭದಲ್ಲಿ ಅಮಿತ್ ಶಾ ಜೀ ರವರಿಗೆ ವಿಜಯೇಂದ್ರ ಅವರು ಸಲ್ಲಿಸಿದರು.
ಬಳ್ಳಾರಿ ಚಲೋ ಯಾತ್ರೆಯುದ್ದಕ್ಕೂ ಅಸಂಖ್ಯಾತ ಕಾರ್ಯಕರ್ತರು ಹಾಗೂ ಸಾರ್ವಜನಿಕರು ತೋರಿದ ಅಭೂತಪೂರ್ವ ಬೆಂಬಲದ ಚಿತ್ರಣವನ್ನು ವಿವರಿಸಲಾಯಿತು. ಬರುವ ದಿನಗಳಲ್ಲಿ ಈ ಭ್ರಷ್ಟ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳನ್ನು ಜನರ ಮುಂದಿಡಲು, ನಮ್ಮ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸಲು ಅಮಿತ್ ಶಾ ಅವರು ಮಾರ್ಗದರ್ಶನ ನೀಡಿದರು.
ಬಳ್ಳಾರಿ ಚಲೋ ಸೇರಿದಂತೆ ರಾಜ್ಯದಲ್ಲಿ ಪಕ್ಷ ಸಂಘಟನೆಯ ಚಟುವಟಿಗಳ ಕುರಿತು ಅಮಿತ್ ಶಾ ಜೀ ಮೆಚ್ಚುಗೆ ವ್ಯಕ್ತಪಡಿಸಿದರು. 2028ರಲ್ಲಿ ರಾಜ್ಯದಲ್ಲಿ ಮತ್ತೆ ಬಿಜೆಪಿಯ ಜನಪರ ಸರ್ಕಾರವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಸಂಘಟಿತ ಹೋರಾಟ ಹಾಗೂ ಜನಜಾಗೃತಿ ಮೂಡಿಸಲು ತಿಳಿಸಿದರು.
About Writer
ಕೃಷ್ಣವೇಣಿ ಕೆ
Completed bachelor degree in Journalism and communication in SDMC Ujire. 15 years of experience as journalist. Worked as sub editor and reporter. Specialties in sports, politics and entertainment.....
ಮತ್ತಷ್ಟು ಓದಿ