Select Your Language

Notifications

webdunia
webdunia
webdunia
webdunia

ವರುಣಾದಲ್ಲಿ ಬಿಎಸ್ ವೈ ಪುತ್ರ ವಿಜಯೇಂದ್ರ ಸ್ಪರ್ಧಿಸಲ್ಲ!

ವರುಣಾದಲ್ಲಿ ಬಿಎಸ್ ವೈ ಪುತ್ರ ವಿಜಯೇಂದ್ರ ಸ್ಪರ್ಧಿಸಲ್ಲ!
ಮೈಸೂರು , ಮಂಗಳವಾರ, 24 ಏಪ್ರಿಲ್ 2018 (10:34 IST)
ಮೈಸೂರು: ವರುಣಾ ಕ್ಷೇತ್ರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಪುತ್ರ ಬಿ ವೈ ವಿಜಯೇಂದ್ರ ಸ್ಪರ್ಧೆ ಇಲ್ಲ ಎನ್ನುವ ಸ್ಪಷ್ಟ ಪ್ರಕಟಣೆ ಇದೀಗ ಹೊರಬಿದ್ದಿದೆ.

ಮೈಸೂರಿನಲ್ಲಿ ಈ ಬಗ್ಗೆ ಸ್ಪಷ್ಟನೆ ನೀಡಿರುವ ಬಿಎಸ್ ವೈ ಮತ್ತು ಬಿಜೆಪಿ ಚುನಾವಣಾ ಉಸ್ತುವಾರಿ ಪ್ರಕಾಶ್ ಜಾವೇಡ್ಕರ್ ವಿಜಯೇಂದ್ರ ಬದಲು ಬೇರೆ ಅಭ್ಯರ್ಥಿ ಸ್ಪರ್ಧಿಸುವುದಾಗಿ ಹೇಳಿಕೆ ನೀಡಿದ್ದಾರೆ.

ಇಂದು ನಾಮಪತ್ರ ಸಲ್ಲಿಸಲು ಅಂತಿಮ ದಿನವಾಗಿದ್ದು, ವಿಜಯೇಂದ್ರಗೆ ಟಿಕೆಟ್ ನೀಡಬೇಕೆಂದು ಕಾರ್ಯಕರ್ತರಿಂದ ವ್ಯಾಪಕ ಒತ್ತಾಯ ಕೇಳಿಬಂದಿತ್ತು. ನಿನ್ನೆ ಸಂಜೆ ಮೈಸೂರಿನಲ್ಲಿ ಪ್ರತಿಭಟನೆಯ ಕಾವು ಜೋರಾಗಿತ್ತು. ಹಾಗಿದ್ದರೂ ವಿಜಯೇಂದ್ರಗೆ ಟಿಕೆಟ್ ನೀಡದೇ ಇರಲು ಬಿಜೆಪಿ ಹೈಕಮಾಂಡ್ ನಿರ್ಧರಿಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಅಂಬರೀಷ್ ಸ್ಪರ್ಧೆ ಗೊಂದಲಕ್ಕೆ ಕೆಲವೇ ಕ್ಷಣಗಳಲ್ಲಿ ತೆರೆ