Webdunia - Bharat's app for daily news and videos

Install App

ರನ್ಯಾ ರಾವ್ ಕೇಸ್ ಬಗ್ಗೆ ಕೇಳಿದ್ರೆ ಬೆಂಕಿಯಿಲ್ಲದೇ ಹೊಗೆಯಾಡಲ್ಲ ಎಂದ ಬಿವೈ ವಿಜಯೇಂದ್ರ

Krishnaveni K
ಮಂಗಳವಾರ, 11 ಮಾರ್ಚ್ 2025 (16:18 IST)
ಚಿಕ್ಕಮಗಳೂರು: ರಾಜ್ಯವು ಅಭಿವೃದ್ಧಿಯೇ ಕಾಣದ ಕೆಟ್ಟ ಪರಿಸ್ಥಿತಿಗೆ ಬಂದು ನಿಂತಿದೆ; ಈ ಸರಕಾರದ ಆಡಳಿತವೈಖರಿಯನ್ನು ರಾಜ್ಯದ ಜನರು ಗಮನಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಟೀಕಿಸಿದರು.
 
ಬಾಳೆಹೊನ್ನೂರಿನಲ್ಲಿ ಇಂದು ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಂದರ್ಭದಲ್ಲಿ ಅವರು ಮಾಧ್ಯಮಗಳ ಜೊತೆ ಮಾತನಾಡಿದರು. ಕಾಂಗ್ರೆಸ್ ಸರಕಾರವು ಅಧಿಕಾರ ವಹಿಸಿಕೊಂಡು 20 ತಿಂಗಳಾಗಿದೆ. ರಸ್ತೆಗಳು, ಆಸ್ಪತ್ರೆಗಳು, ಶಾಲಾ ಕೊಠಡಿಗಳನ್ನೂ ಕೊಡದ ಕೆಟ್ಟ ಪರಿಸ್ಥಿತಿಗೆ ಬಂದು ನಿಂತಿದೆ ಎಂದು ಆಕ್ಷೇಪಿಸಿದರು.

ಸರಕಾರ ಅಧಿಕಾರಕ್ಕೆ ಬಂದಾಗಿನಿಂದ ಕ್ಷೇತ್ರಗಳಿಗೆ ಮುಖ್ಯಮಂತ್ರಿಗಳು ಅನುದಾನ ನೀಡದ ಕಾರಣ ಶಾಸಕರು ಒಂದುರೀತಿ ಅಸಹಾಯಕರಾಗಿದ್ದಾರೆ. ಕ್ಷೇತ್ರಗಳಲ್ಲಿ ಓಡಾಡಲಾಗದ ಸ್ಥಿತಿ ಇದೆ ಎಂಬ ಭಾವನೆಯನ್ನು ಆಡಳಿತ ಪಕ್ಷದ ಶಾಸಕರೂ ತೋಡಿಕೊಂಡಿದ್ದಾರೆ ಎಂದು ಪ್ರಶ್ನೆಗೆ ಉತ್ತರ ನೀಡಿದರು.
ರನ್ಯಾರಾವ್ ಚಿನ್ನ ಸ್ಮಗ್ಲಿಂಗ್ ಹಿಂದೆ ಕೆಲವು ಸಚಿವರು ಇರುವ ಮಾಹಿತಿ ಬಗೆಗಿನ ಪ್ರಶ್ನೆಗೆ ಉತ್ತರ ನೀಡಿದ ಅವರು, ಬಹಳ ಪ್ರಮುಖ ಪತ್ರಿಕೆಗಳಲ್ಲೂ ಈ ವಿಷಯ ಪ್ರಕಟಗೊಂಡಿದೆ. ಬೆಂಕಿ ಇಲ್ಲದೆ ಹೊಗೆ ಆಡುವುದಿಲ್ಲ ಎಂದು ಹಿರಿಯರು ಹೇಳುತ್ತಾರೆ. ಇಂಥ ಗಂಭೀರ ಪ್ರಕರಣವು ಯಾರದೋ ಬೆಂಬಲ ಇಲ್ಲದೆ ಆಗಲು ಸಾಧ್ಯ ಇಲ್ಲ ಎಂದು ತಿಳಿಸಿದರು.

ಒಬ್ಬ ಹಿರಿಯ ಐಪಿಎಸ್ ಅಧಿಕಾರಿಯ ಮಗಳು ಎಂಬುದು ಒಂದು ಕಡೆಯಾದರೆ, ಸಚಿವರ ಬೆಂಬಲದ ವಿಷಯವೂ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಸತ್ಯಾಂಶ ತನಿಖೆ ನಂತರ ಹೊರಕ್ಕೆ ಬರಲಿದೆ ಎಂದು ಹೇಳಿದರು.
 
ವಿಜಯೇಂದ್ರ ಬಗ್ಗೆ ಸಾಕಷ್ಟು ನಿರೀಕ್ಷೆ, ಅಪೇಕ್ಷೆ..
ಬಾಳೆಹೊನ್ನೂರಿನ ರಂಭಾಪುರಿ ಶ್ರೀಗಳು ಎಲ್ಲ ಸಂದರ್ಭದಲ್ಲೂ ಯಡಿಯೂರಪ್ಪ ಅವರ ಪರವಾಗಿ ಧ್ವನಿ ಎತ್ತಿದವರು. ಈ ಪುಣ್ಯಕ್ಷೇತ್ರದ ಕಾರ್ಯಕ್ರಮ ನಿಮಿತ್ತ ಬಂದಿದ್ದೇನೆ ಎಂದ ಅವರು, ಜಗದ್ಗುರುಗಳಿಗೆ ವಿಜಯೇಂದ್ರ ಬಗ್ಗೆ ಸಾಕಷ್ಟು ನಿರೀಕ್ಷೆ, ಅಪೇಕ್ಷೆ ಇದೆ. ವಿಜಯೇಂದ್ರ ಅವರು ಎಲ್ಲರನ್ನೂ ಒಗ್ಗೂಡಿಸಿಕೊಂಡು ಹೋಗಬೇಕೆಂಬ ಸಂದೇಶವನ್ನು ಜಗದ್ಗುರುಗಳು ನೀಡಿದ್ದಾರೆ ಎಂದು ಪ್ರಶ್ನೆಗೆ ಉತ್ತರ ನೀಡಿದರು. ಜಗದ್ಗುರುಗಳ ಆಶೀರ್ವಾದ ಪಡೆಯುವುದು ನಮ್ಮ ಸೌಭಾಗ್ಯ. ರಾಜಕಾರಣ ಮಾತನಾಡಿಲ್ಲ ಎಂದು ಇನ್ನೊಂದು ಪ್ರಶ್ನೆಗೆ ಉತ್ತರ ಕೊಟ್ಟರು.
 
ಕೇಂದ್ರದ ವರಿಷ್ಠರು ಎಲ್ಲವನ್ನೂ ಗಮನಿಸುತ್ತಿದ್ದಾರೆ. ಎಲ್ಲವೂ ತಾರ್ಕಿಕ ಅಂತ್ಯಕ್ಕೆ ಬರುವ ಸಂದರ್ಭದಲ್ಲಿ ಸಮಾಜದ ಸಭೆಗಳನ್ನು ಮಾಡುವುದು ಸರಿಯಲ್ಲ ಎಂದು ಮತ್ತೊಂದು ಪ್ರಶ್ನೆಗೆ ಉತ್ತರಿಸಿದರು. ಇದು ಬೂಟಾಟಿಕೆಯ ಮಾತಲ್ಲ; ನಾನು ರಾಜ್ಯಾಧ್ಯಕ್ಷನಾಗಿರುವ ಈ ಸಂದರ್ಭದಲ್ಲಿ ಈ ರೀತಿಯ ಜಾತಿ ಸಮಾವೇಶ ಮಾಡುವುದು ಯಾವುದೇ ಕಾರಣಕ್ಕೂ ಪಕ್ಷಕ್ಕೆ ಲಾಭ ತರುವುದಿಲ್ಲ ಎಂದು ಸ್ಪಷ್ಟಪಡಿಸಿದರು.
 
 
 
 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Operation Sindoor: ಊಹಿಸಲಾಗದ ರೀತಿ ಪಾಕಿಸ್ತಾನ ಮೇಲೆ ದಾಳಿ ಮಾಡಿದ ಭಾರತ

India Pakistan:ರಾತ್ರಿಯಾಗುತ್ತಿದ್ದಂತೇ ಪಾಕಿಸ್ತಾನದಿಂದ ಮತ್ತೆ ದಾಳಿ ಶುರು, 3 ರಾಜ್ಯ ಟಾರ್ಗೆಟ್

Operation Sindoor Effect:ಈ ವಿಷಯ ಗೊತ್ತಿಲ್ಲದೆ ಮಾಮೂಲಿ ಟೈಮ್‌ಗೆ ವಿಮಾನ ಹತ್ತಲು ಹೋದ್ರೆ ಮಿಸ್ ಆಗುವುದು ಗ್ಯಾರಂಟಿ

ಪಾಕ್‌, ಭಾರತ ನಡುವೆ ಹೆಚ್ಚಿದ ಉದ್ವಿಗ್ನತೆ: ಚೀನಾಗೂ ತಟ್ಟಿದ ಬಿಸಿ, ನಾಗರಿಕರಿಗೆ ಸಂದೇಶ ರವಾನೆ

ಸರ್ಕಾರದ ಈ ಕ್ರಮವು ದೇಶದ ಸ್ವಾಭಿಮಾನವನ್ನು ಹೆಚ್ಚಿಸಿದೆ: ಸಶಸ್ತ್ರ ಪಡೆಗಳನ್ನು ಅಭಿನಂದಿಸಿದ RSS

ಮುಂದಿನ ಸುದ್ದಿ
Show comments