Daily Horoscope

Select Your Language

Notifications

webdunia
webdunia
webdunia
webdunia

ಕಾವೇರಿ ವಿಚಾರದಲ್ಲಿ ರಾಜಕೀಯ ಮಾಡಲ್ಲ ಎನ್ನುತ್ತಲೇ ಸರ್ಕಾರಕ್ಕೆ ಷರತ್ತು ಹಾಕಿದ ಬಿವೈ ವಿಜಯೇಂದ್ರ

BYVijayendra
ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ರಾಜಕೀಯ ಮಾಡದೇ ಸರ್ಕಾರದ ಪರವಾಗಿ ನಿಲ್ಲುವುದಾಗಿ ಹೇಳಿರುವ ಬಿಜೆಪಿ ನಾಯಕ ಬಿವೈ ವಿಜಯೇಂದ್ರ ಜೊತೆಗೊಂದು ಷರತ್ತೂ ವಿಧಿಸಿದ್ದಾರೆ.

ತಮಿಳುನಾಡಿಗೆ ಪ್ರತಿನಿತ್ಯ 1 ಟಿಎಂಸಿ ನೀರು ಹರಿಯಬಿಡಲು ನೀಡಿರುವ ತೀರ್ಪಿನ ವಿರುದ್ಧ ಈಗ ರಾಜ್ಯ ಸಿಡಿದೆದ್ದಿದೆ. ಇದಕ್ಕಾಗಿ ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸರ್ವ ಪಕ್ಷಗಳ ಸಭೆ ಕರೆಯಲಾಗಿತ್ತು. ಈ ಸಭೆಯಲ್ಲಿ ಬಿಜೆಪಿ, ಜೆಡಿಎಸ್ ನಾಯಕರೂ ಪಾಲ್ಗೊಂಡಿದ್ದರು.

ಈ ವೇಳೆ ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಸರ್ಕಾರಕ್ಕೆ ಬೆಂಬಲ ನೀಡುವುದಾಗಿ ಎಲ್ಲಾ ರಾಜಕೀಯ ಪಕ್ಷಗಳು ಒಗ್ಗಟ್ಟು ಪ್ರದರ್ಶಿಸಿದ್ದವು. ಈ ಬಗ್ಗೆ ಟ್ವೀಟ್ ಕೂಡಾ ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕಾವೇರಿ ವಿಚಾರದಲ್ಲಿ ರಾಜಕಾರಣ ಮಾಡುವುದಿಲ್ಲ. ಸರ್ಕಾರದ ಪರವಾಗಿ ನಿಲ್ಲುತ್ತೇವೆ ಎಂದಿದ್ದಾರೆ.

ಆದರೆ ಕಳೆದ ಬಾರಿಯಂತೆ ಇಂಡಿ ಒಕ್ಕೂಟದ ಓಲೈಕೆಗಾಗಿ ಭಾಗಿದಾರ ಡಿಎಂಕೆ ತೃಪ್ತಿಪಡಿಸಲು ತಮಿಳುನಾಡಿಗೆ ಅವೈಜ್ಞಾನಿಕವಾಗಿ ನೀರು ಬಿಟ್ಟು ನಮ್ಮ ರೈತರ ಹಿತಾಸಕ್ತಿ ಬಲಿಕೊಟ್ಟರೆ ನಾವು ಕೈ ಕಟ್ಟಿ ಕೂರಲು ಸಾಧ್ಯವಿಲ್ಲ ಎಂಬ ಎಚ್ಚರಿಕೆಯೊಂದಿಗೆ ಕರ್ನಾಟಕ ಸರ್ಕಾರ ಕಾವೇರಿ ನದಿ ವಿಚಾರದಲ್ಲಿ ಕೈಗೊಳ್ಳುವ ರಾಜ್ಯದ ಪರವಾದ ಪ್ರಾಮಾಣಿಕ ನಿಲುವನ್ನು ಬಿಜೆಪಿ ಬೆಂಬಲಿಸುತ್ತದೆ’ ಎಂದಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕರ್ನಾಟಕ ಲೇಟೆಸ್ಟ್ ಹವಾಮಾನ ವರದಿ: ಈ ಜಿಲ್ಲೆಗಳಿಗೆ ರೆಡ್ ಅಲರ್ಟ್