Publish Date: Tue, 14 Apr 2026 (16:49 IST)
Updated Date: Tue, 14 Apr 2026 (16:52 IST)
ಬೆಂಗಳೂರು: ಕಾಂಗ್ರೆಸ್ಸಿನವರು, ಸಿದ್ದರಾಮಯ್ಯನವರು ಎಷ್ಟೇ ಪುಂಗಿ ಬಾರಿಸಿದರೂ ಉಪ ಚುನಾವಣೆ ನಡೆದ ರಾಜ್ಯದ ಎರಡೂ ಕ್ಷೇತ್ರಗಳಲ್ಲಿ ಅವರು ಗೆಲುವು ಸಾಧಿಸಲು ಸಾಧ್ಯವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ.
ಮಾಧ್ಯಮಗಳ ಜೊತೆ ಇಂದು ಮಾತನಾಡಿದ ಅವರು ಪ್ರಶ್ನೆಗೆ ಉತ್ತರಿಸಿದರು. ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಕ್ಷೇತ್ರಗಳಲ್ಲಿ ಬಿಜೆಪಿ ಗೆದ್ದೇ ಗೆಲ್ಲಲಿದೆ ಎಂದರು. ಕಾಂಗ್ರೆಸ್ ಸರಕಾರದ ಬಗ್ಗೆ ಜನರು ಇವತ್ತು ಬೇಸತ್ತಿದ್ದಾರೆ. ಆಡಳಿತ ಯಂತ್ರ ಕುಸಿದಿದೆ. ಮುಖ್ಯಮಂತ್ರಿ ಕುರ್ಚಿಗೆ ಬೀದಿಕಾಳಗ ನಡೆಯುತ್ತಿದೆ. ಅಭಿವೃದ್ಧಿ ಇಲ್ಲವಾಗಿದೆ ಎಂದು ಟೀಕಿಸಿದರು.
ಇದಲ್ಲದೇ, ಕಾಂಗ್ರೆಸ್ ಸರಕಾರ ಎಂದರೆ ಅಲ್ಪಸಂಖ್ಯಾತರ ಓಲೈಕೆ ಮಾಡುವ ಮತ್ತು ಹಿಂದೂಗಳ ಅಪಮಾನ ಮಾಡುವ ಕೆಲಸ ಮಾಡುತ್ತಿದೆ. ಇವೆಲ್ಲದರ ಪರಿಣಾಮವಾಗಿ ಜನರು ಬಿಜೆಪಿಗೆ ಆಶೀರ್ವಾದ ಮಾಡಲಿದ್ದಾರೆ ಎಂದರು. ರಾಜ್ಯದಲ್ಲಿ ಬಿಜೆಪಿ ಸರಕಾರ ಇದ್ದಾಗ ಮತ್ತು ಯಡಿಯೂರಪ್ಪನವರು ಮುಖ್ಯಮಂತ್ರಿ ಆಗಿದ್ದಾಗ ಶಿವಮೊಗ್ಗ ಜಿಲ್ಲೆಯಲ್ಲಿ ಆದ ಅಭಿವೃದ್ಧಿ ಕೆಲಸ ಕಾರ್ಯ- ಸಿದ್ದರಾಮಯ್ಯನವರು ಮೈಸೂರು ಜಿಲ್ಲೆಗೆ ಏನೇನು ಅಭಿವೃದ್ಧಿ ಕೆಲಸ ಮಾಡಿದ್ದಾರೆ ಎಂಬ ಕುರಿತು ಬಹಿರಂಗ ಚರ್ಚೆ ಮಾಡಲಿ ಎಂದು ಸವಾಲು ಹಾಕಿದರು.
ಮೈಸೂರಿನಲ್ಲಿ ಮೈಸೂರು ಸಿಲ್ಕ್ ಸ್ಯಾರಿ ಎಂಎಸ್‍ಐಎಲ್ ಅನ್ನು ಉಳಿಸಿಕೊಳ್ಳುವ ಯೋಗ್ಯತೆಯೂ ಕಾಂಗ್ರೆಸ್ ಸರಕಾರಕ್ಕೆ ಇಲ್ಲ ಎಂದು ಟೀಕಿಸಿದರು. ಎಂಎಸ್‍ಐಎಲ್ ಅನ್ನು ಮುಚ್ಚಿ ಹಾಕಿ ಅದನ್ನು ಸ್ಟೇಡಿಯಂ ಮಾಡಲು ಹುನ್ನಾರ ಮಾಡುತ್ತಿದ್ದಾರೆ ಎಂದು ಆಕ್ಷೇಪಿಸಿದರು. ಇವರೇನೇ ಭಾಷಣ ಬಿಗಿದರೂ ಮೇ 4ರಂದು ಮತ ಎಣಿಕೆ ಆಗಲಿದೆ. ಜನರು ಏನು ಉತ್ತರ ನೀಡಿದ್ದಾರೆಂಬುದು ಗೊತ್ತಾಗಲಿದೆ ಎಂದು ತಿಳಿಸಿದರು.
About Writer
ಕೃಷ್ಣವೇಣಿ ಕೆ
Completed bachelor degree in Journalism and communication in SDMC Ujire. 15 years of experience as journalist. Worked as sub editor and reporter. Specialties in sports, politics and entertainment.....
ಮತ್ತಷ್ಟು ಓದಿ