ಬೆಂಗಳೂರು: ಮದ್ದೂರಿನಲ್ಲಿ ಗಣೇಶ ಮೆರವಣಿಗೆ ವೇಳೆ ನಡೆದ ಹಿಂಸಾಚಾರದ ಬಗ್ಗೆ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ ಕಾಂಗ್ರೆಸ್ ಗೆ ಹಿಂದೂಗಳನ್ನು ಕಂಡ್ರೆ ಆಗಲ್ಲ ಎಂದು ಕಿಡಿ ಕಾರಿದ್ದಾರೆ.
ಮದ್ದೂರಿನಲ್ಲಿ ಗಣೇಶ ಮೆರವಣಿಗೆ ವೇಳೆ ಮುಸ್ಲಿಂ ಸಮುದಾಯಕ್ಕೆ ಸೇರಿದ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದರು. ಇದರ ವಿರುದ್ಧ ಹಿಂದೂಗಳು ಪ್ರತಿಭಟನೆ ನಡೆಸಿದ್ದರು. ಈ ವೇಳೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಹೀಗಾಗಿ ಮದ್ದೂರು ಉದ್ವಿಗ್ನ ಸ್ಥಿತಿಯಲ್ಲಿದೆ.
ಆದರೆ ಮದ್ದೂರು ಘಟನೆ ಬಗ್ಗೆ ಹಿಂದೂ ಸಂಘಟನೆಗಳು ಮತ್ತು ಬಿಜೆಪಿಯನ್ನೇ ದೂರುತ್ತಿರುವ ಸಿಎಂ ಆದಿಯಾಗಿ ಕಾಂಗ್ರೆಸ್ ನಾಯಕರ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕಿಡಿ ಕಾರಿದ್ದಾರೆ.
ಮದ್ದೂರಿನಲ್ಲಿ ಗಣೇಶೋತ್ಸವದ ಸಂದರ್ಭದಲ್ಲಿ ಸಾವಿರಾರು ಜನ ಹಿಂದೂಗಳು ಆ ಮೆರವಣಿಗೆಯಲ್ಲಿ ಸಾಗುತ್ತಾರೆಂದು ಸರ್ಕಾರಕ್ಕೆ ಮಾಹಿತಿ ಇರಲಿಲ್ಲವೇ? ಆ ಮಸೀದಿಗಳ ಒಳಗೆ ಕೆಲವರು ಹೊಕ್ಕಲು ಪೊಲೀಸ್ ಇಲಾಖೆಯವರು ಏಕೆ ಬಿಟ್ಟರು? ಇದಕ್ಕೆ ಸರ್ಕಾರವೇಕೆ ಅವಕಾಶ ಮಾಡಿಕೊಟ್ಟಿದೆ? ಮಾಡಿರುವುದು ಮಣ್ಣು ತಿನ್ನುವ ಕೆಲಸವಾದರೂ ಬಿಜೆಪಿ ಮೇಲೆ ದೂರುವುದು ಎಷ್ಟು ಸರಿ? ಚಾಮುಂಡಿ ಬೆಟ್ಟಕ್ಕೆ ಸಾಗುವ ಹಿಂದೂ ಕಾರ್ಯಕರ್ತರನ್ನೂ ತಡೆಯುವ ಕೆಲಸವನ್ನು ಮಾಡಲಾಗಿದೆ. ಈ ಕಾಂಗ್ರೆಸ್ ಸರ್ಕಾರಕ್ಕೆ ಹಿಂದೂಗಳನ್ನು ಕಂಡರೇ ಆಗುತ್ತಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.