Select Your Language

Notifications

webdunia
webdunia
webdunia
webdunia

ಗೆಲ್ಲುವ ಭ್ರಮೆಯಲ್ಲಿದ್ದ ಕಾಂಗ್ರೆಸ್ ಗೆ ಮುಖಭಂಗವಾಗಿದೆ: ಬಿವೈ ವಿಜಯೇಂದ್ರ

BY Vijayendra

Krishnaveni K

ಬೆಂಗಳೂರು , ಮಂಗಳವಾರ, 4 ಜೂನ್ 2024 (16:55 IST)
ಬೆಂಗಳೂರು: ಬಿಜೆಪಿ ಮತ್ತು ಎನ್‍ಡಿಎ ಮಿತ್ರ ಕೂಟ 295ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಸ್ವಾತಂತ್ರ್ಯ ಬಂದ ಬಳಿಕ ಕಾಂಗ್ರೆಸ್ಸೇತರ ಪಕ್ಷ ಬಿಜೆಪಿ ಸತತವಾಗಿ ಮೂರನೇ ಬಾರಿಗೆ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿರುವುದು ಪ್ರತಿಯೊಬ್ಬರೂ ಸಂತೋಷ ಪಡುವ ವಿಚಾರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದರು.

ನಗರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಕರ್ನಾಟಕ ರಾಜ್ಯದಲ್ಲೂ ಬಿಜೆಪಿ- ಜೆಡಿಎಸ್ ಪಕ್ಷ ಒಟ್ಟಾಗಿ ಚುನಾವಣೆ ಎದುರಿಸಿದ್ದು, 17 ಕ್ಷೇತ್ರಗಳಲ್ಲಿ ಬಿಜೆಪಿ, 2 ಕ್ಷೇತ್ರಗಳಲ್ಲಿ ಜೆಡಿಎಸ್ ಪಕ್ಷ ಗೆದ್ದಿವೆ. ಕರ್ನಾಟಕದಲ್ಲಿ 20ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲ್ಲುವ ಭ್ರಮೆಯಲ್ಲಿದ್ದ ಕಾಂಗ್ರೆಸ್ ಪಕ್ಷಕ್ಕೆ ಮುಖಭಂಗವಾಗಿದೆ ಎಂದು ವಿಶ್ಲೇಷಿಸಿದರು.

ತಮ್ಮ ಗ್ಯಾರಂಟಿಗಳ ಮೂಲಕ ರಾಜ್ಯದಲ್ಲಿ 20ಕ್ಕೂ ಹೆಚ್ಚು ಸ್ಥಾನ ಗೆಲ್ಲುವ ಕಾಂಗ್ರೆಸ್ಸಿಗರ ಕನಸು ಇವತ್ತು ಭಗ್ನವಾಗಿದೆ ಎಂದ ಅವರು, ರಾಜ್ಯದಲ್ಲಿ ಬಿಜೆಪಿ- ಜೆಡಿಎಸ್ ಪಕ್ಷದ ಅಭೂತಪೂರ್ವ ಗೆಲುವಿಗೆ ಕಾರಣಕರ್ತರಾದ ಎರಡೂ ಪಕ್ಷಗಳ ಮುಖಂಡರು, ವಿಶೇಷವಾಗಿ ಎರಡೂ ಪಕ್ಷಗಳ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸುವುದಾಗಿ ಹೇಳಿದರು.

ರಾಜ್ಯದ ಮತದಾರರಿಗೆ ಕೃತಜ್ಞತೆಗಳನ್ನು ಸಲ್ಲಿಸಿದರು. ಗ್ಯಾರಂಟಿಗಳ ಬಗ್ಗೆ ಸಾಕಷ್ಟು ಚರ್ಚೆಗಳಾಗಿತ್ತು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಮಗೆ ಹಿನ್ನಡೆ ಆಗಿತ್ತು. ಇದೆಲ್ಲವನ್ನೂ ಮೀರಿ ನಮ್ಮ ರಾಜ್ಯದ ಪ್ರಜ್ಞಾವಂತ ಮತದಾರರು ದೇಶದ ಭವಿಷ್ಯ ರೂಪಿಸುವ ಚುನಾವಣೆ, ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿ ಆಗಬೇಕೆಂಬ ದೃಷ್ಟಿಯಿಂದ ಸಂಪೂರ್ಣ ಬೆಂಬಲ ನೀಡಿದ್ದಾರೆ. ಆದ್ದರಿಂದ ನಮ್ಮ ರಾಜ್ಯದ ಮತದಾರರಿಗೆ ಕೃತಜ್ಞತೆ ಸಲ್ಲಿಸುವುದಾಗಿ ಹೇಳಿದರು.
 
 
 
 

Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿ ತೆಕ್ಕೆಯಿಂದ ಬೀದರ್‌ನ್ನು ʼಕೈ ʼ ವಶಮಾಡಿಕೊಂಡ ಕಿರಿಯ ಸಂಸದ ಸಾಗರ್‌ ಖಂಡ್ರೆ