ಕಾಂಗ್ರೆಸ್ ಪಕ್ಷದಿಂದ ಡಾ. ಅಂಬೇಡ್ಕರರ ಬಗ್ಗೆ ಮೊಸಳೆಕಣ್ಣೀರು: ವಿಜಯೇಂದ್ರ

Krishnaveni K
ಶನಿವಾರ, 6 ಡಿಸೆಂಬರ್ 2025 (13:02 IST)
ಬೆಂಗಳೂರು: ಬಾಬಾ ಸಾಹೇಬ್ ಡಾ.ಭೀಮರಾವ್ ಅಂಬೇಡ್ಕರ್ ಅವರ ನೇತೃತ್ವದಲ್ಲಿ ಜಗತ್ತೇ ಮೆಚ್ಚುವಂಥ ಶ್ರೇಷ್ಠ ಸಂವಿಧಾನವನ್ನು ಭಾರತಕ್ಕೆ ನೀಡುವ ಪುಣ್ಯ ಕಾರ್ಯ ನಡೆದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ.

ಡಾ. ಬಿ.ಆರ್. ಅಂಬೇಡ್ಕರ್ ಅವರ ಪರಿನಿರ್ವಾಣ ದಿನದ ಅಂಗವಾಗಿ ಇಂದು ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಪುಷ್ಪಾರ್ಚನೆ ನೆರವೇರಿಸಿ ಅವರು ಮಾತನಾಡಿದರು. ಡಾ. ಬಿ.ಆರ್. ಅಂಬೇಡ್ಕರ್ ಅವರ ಸಮಸಮಾಜದ ನಿರ್ಮಾಣದ ಕನಸು, ಅವರ ಆದರ್ಶಗಳನ್ನು ದೇಶಾದ್ಯಂತ ಪಾಲಿಸುವ ಅನಿವಾರ್ಯತೆ ಇದೆ ಎಂದು ನುಡಿದರು.

ಸಂವಿಧಾನದ ಮೂಲಕ ಹಕ್ಕುಗಳ ರಕ್ಷಣೆಯ ಪುಣ್ಯದ ಕೆಲಸ ಅವರ ನೇತೃತ್ವದಲ್ಲಿ ಆಗಿದೆ. ನವೆಂಬರ್ 26 ಅನ್ನು ನಮ್ಮ ಪ್ರಧಾನಿಯವರು ಸಂವಿಧಾನ ದಿನವಾಗಿ ಘೋಷಿಸಿದ್ದು ಮಾತ್ರವಲ್ಲದೇ, ಬಾಬಾ ಸಾಹೇಬರಿಗೆ ಗೌರವ ಕೊಡುವ ಕೆಲಸವು ನರೇಂದ್ರ ಮೋದಿಯವರ ನೇತೃತ್ವದ ಬಿಜೆಪಿ ಸರಕಾರದಿಂದ ಆಗಿದೆ ಎಂದು ವಿವರಿಸಿದರು.

ಬಾಬಾಸಾಹೇಬ ಅಂಬೇಡ್ಕರರಿಗೆ ಭಾರತರತ್ನ ನೀಡುವ ವಿಚಾರದಲ್ಲಿ ಕಾಂಗ್ರೆಸ್ ಪಕ್ಷ ಅನ್ಯಾಯ ಮಾಡಿತ್ತು. ಚುನಾವಣೆಗೆ ನಿಂತಾಗ ಅವರನ್ನು ಸೋಲಿಸುವ ಷಡ್ಯಂತ್ರ ಕಾಂಗ್ರೆಸ್ ಪಕ್ಷದಿಂದ ಆಗಿತ್ತೆಂದು ವಿವರಿಸಿದರು. ಇಷ್ಟಾದರೂ ಕಾಂಗ್ರೆಸ್ ಪಕ್ಷ, ಬಿಜೆಪಿಯನ್ನು ಒಂದು ರೀತಿ ಸಂವಿಧಾನವಿರೋಧಿ ಎಂದು ಟೀಕಿಸುತ್ತಿದೆ. ಅವರ ಹುಳುಕು ಮುಚ್ಚಿ ಹಾಕುವ ಕೆಲಸವನ್ನು ನಿರಂತರವಾಗಿ ಮಾಡುತ್ತ ಬಂದಿದೆ ಎಂದು ಆಕ್ಷೇಪಿಸಿದರು.

ಅಂಬೇಡ್ಕರರಿಗೆ ಸೇರಿದ ಕ್ಷೇತ್ರಗಳನ್ನು ಪಂಚತೀರ್ಥವಾಗಿ ಅಭಿವೃದ್ಧಿ
ಕೇಂದ್ರದಲ್ಲಿ ಎನ್‍ಡಿಎ ಸರಕಾರ ಬಂದ ಬಳಿಕ ಮೋದಿಯವರು ಪ್ರಧಾನಿಗಳಾದ ನಂತರ ಅಂಬೇಡ್ಕರರಿಗೆ ಸೇರಿದ ಕ್ಷೇತ್ರಗಳನ್ನು ಪಂಚ ತೀರ್ಥವಾಗಿ ಮಾಡಿ ಅಭಿವೃದ್ಧಿ ಮಾಡಿದೆ ಎಂದು ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು.

ಜನ್ಮಸ್ಥಳ, ಲಂಡನ್‍ನಲ್ಲಿ ವಿದ್ಯಾಭ್ಯಾಸದ ವೇಳೆ ತಂಗಿದ್ದ ಮನೆಯನ್ನು ಸ್ಮಾರಕವನ್ನಾಗಿ ಮಾಡಿದ್ದಾರೆ. ನಾಗಪುರದ ದೀಕ್ಷಾ ಸ್ಥಳ, ದೆಹಲಿಯ ಸ್ಮಾರಕ ಮಾಡಿದ್ದಾರೆ. ಚೈತನ್ಯಭೂಮಿ ಅಭಿವೃದ್ಧಿ ಪಡಿಸಿದ್ದಾರೆ. ಇದನ್ನು ಕಾಂಗ್ರೆಸ್ ಮಾಡಿಲ್ಲ. ಬಿಜೆಪಿ-ಎನ್‍ಡಿಎ ಸರಕಾರದಿಂದ ಇದೆಲ್ಲವೂ ಆಗಿದೆ ಎಂದರು.

ಕಾಂಗ್ರೆಸ್ ಪಕ್ಷವು ಡಾ. ಅಂಬೇಡ್ಕರರ ಬಗ್ಗೆ ಮೊಸಳೆಕಣ್ಣೀರು ಸುರಿಸುತ್ತಿದೆ. ಇದನ್ನು ದೇಶ ಮತ್ತು ರಾಜ್ಯದಲ್ಲಿ ಸಾರಿ ಸಾರಿ ಹೇಳಬೇಕೆಂದು ತಿಳಿಸಿದರು. ಕಾಂಗ್ರೆಸ್ ಪಕ್ಷ ಬಡವರ ವಿರೋಧಿ ನೀತಿ ಅನುಸರಿಸುತ್ತ ಬಂದಿದೆ. ಅವರು ಯಾವತ್ತೂ ಅಂಬೇಡ್ಕರರ ಚಿಂತನೆಗಳನ್ನು ವಿರೋಧಿಸುತ್ತ ಬಂದಿದ್ದಾರೆ. ಅವರ ಅಂತ್ಯಸಂಸ್ಕಾರಕ್ಕೂ ಗೌರವ ನೀಡದ ಪಕ್ಷ ಕಾಂಗ್ರೆಸ್ ಎಂದು ಟೀಕಿಸಿದರು.

ವಾಸ್ತವಿಕ ಸತ್ಯವನ್ನು ರಾಜ್ಯ- ದೇಶದ ಜನರ ಮುಂದೆ ತರುವುದು ನಮ್ಮೆಲ್ಲರ ಆದ್ಯ ಕರ್ತವ್ಯ. ಅಂಬೇಡ್ಕರರ ಆದರ್ಶಗಳನ್ನು ನಾವು ರೂಢಿಸಿಕೊಳ್ಳಬೇಕಿದೆ. ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಅವರು ಕೊಟ್ಟ ಪವಿತ್ರ ಸಂವಿಧಾನಕ್ಕೆ ಅಗೌರವ ಆಗದಂತೆ ಸಂವಿಧಾನದ ರಕ್ಷಣೆ ಮಾಡುವ ಕೆಲಸವೂ ನಾವು- ನೀವು ಮಾಡುವ ಮೂಲಕ ಬಾಬಾಸಾಹೇಬರಿಗೆ ಗೌರವ ಕೊಡಬೇಕೆಂದು ಮನವಿ ಮಾಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂ ಧರ್ಮದಲ್ಲಿರುವ ಜಾತಿ ವ್ಯವಸ್ಥೆಯಿಂದ ರೋಸಿ ಅಂಬೇಡ್ಕರ್ ಬೌದ್ಧ ಧರ್ಮ ಸೇರಿದ್ದರು: ಸಿದ್ದರಾಮಯ್ಯ

ಶುಗರ್ ಲೆವೆಲ್ ಲೋ ಆದರೆ ತಕ್ಷಣವೇ ಏನು ಮಾಡಬೇಕು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಸಿಎಂ ಆಗುವ ಆಸೆ ನನಗೂ ಇದೆ: ಕಾಂಗ್ರೆಸ್ ನ ಮತ್ತೊಬ್ಬ ಪ್ರಮುಖ ಸಚಿವರಿಂದ ಬಾಂಬ್

ಮುಂದಿನ ಸುದ್ದಿ
Show comments