Webdunia - Bharat's app for daily news and videos

Install App

ದನದ ಕೆಚ್ಚಲು ಕೊಯ್ದವನು ಯಾರೋ ಆರೋಪಿ ಅಂತಿರೋನು ಯಾವನೋ ಬಡಪಾಯಿ: ಬಿವೈ ವಿಜಯೇಂದ್ರ

Krishnaveni K
ಮಂಗಳವಾರ, 14 ಜನವರಿ 2025 (12:46 IST)
ಬೆಂಗಳೂರು: ದನದ ಕೆಚ್ಚಲು ಕೊಯ್ದ ಪ್ರಕರಣಕ್ಕೆ ರಾಜ್ಯದ ಕಾಂಗ್ರೆಸ್ ಸರಕಾರದ ಧೋರಣೆಯೇ ಕಾರಣ ಎಂದು ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಆಕ್ಷೇಪಿಸಿದ್ದಾರೆ.

ಕೆಚ್ಚಲು ಕೊಯ್ದ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯ ತಂಡವು ಇಂದು ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ಕಾಟನ್ ಪೇಟೆಯ ದುಂಡು ಮಾರಿಯಮ್ಮ ದೇವಸ್ಥಾನದ ಬಳಿ ಇರುವ ಮಾಲೀಕನ ಮನೆಗೆ ಭೇಟಿ ನೀಡಿತು. ಅಲ್ಲದೇ ಗೋಪೂಜೆಯನ್ನೂ ನೆರವೇರಿಸಿ ದನದ ಮಾಲೀಕನಿಗೆ ಧೈರ್ಯ ತುಂಬಿತು.

ಗೋಪೂಜೆ ಮಾಡುವ ಈ ನಾಡಿನಲ್ಲಿ, ದೇಶದಲ್ಲಿ ಈ ದುರ್ಘಟನೆ ನಡೆದಿರುವುದು ಅಕ್ಷಮ್ಯ ಅಪರಾಧ ಎಂದು ವಿಜಯೇಂದ್ರ ಅವರು ಖಂಡಿಸಿದರು. ಈ ದುರ್ಘಟನೆ ಸಿದ್ದರಾಮಯ್ಯನವರಿಗೆ ಮತ್ತು ಕಾಂಗ್ರೆಸ್ ಸರಕಾರಕ್ಕೆ ಒಳ್ಳೆಯದು ಮಾಡುವುದಿಲ್ಲ ಎಂದು ಅವರು ಎಚ್ಚರಿಸಿದರು. ಇವರ ಪಾಪದ ಕೊಡ ತುಂಬಿದೆ. ಆದ್ದರಿಂದ ಇಂಥ ದುರ್ಘಟನೆ ಆಗುತ್ತಿದೆ ಎಂದು ಅವರು ತಿಳಿಸಿದರು.

ಯಾರೋ ಬಡಪಾಯಿಯನ್ನು ತಂದು ಅವನೇ ಮಾಡಿದ್ದಾಗಿ ಬಿಂಬಿಸುವ ಪ್ರಯತ್ನ ಆಗುತ್ತಿದೆ ಎಂದು ಚರ್ಚೆ ನಡೆದಿದೆ. ಬಡ ಕುಟುಂಬದಿಂದ ಬಂದ ಹಸುವಿನ ಮಾಲೀಕರು ಎಲ್ಲವನ್ನೂ ಧೈರ್ಯದಿಂದ ಎದುರಿಸುತ್ತಿದ್ದಾರೆ. ಆದ್ದರಿಂದ ಅವರನ್ನು ಭೇಟಿ ಮಾಡಿ, ಗೋಪೂಜೆ ಮಾಡಿದ್ದೇವೆ ಎಂದು ತಿಳಿಸಿದರು.
ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಮಾತನಾಡಿ, ಕಾಂಗ್ರೆಸ್ ಸರಕಾರವು ಹಿಂದೂಗಳ ವಿಚಾರದಲ್ಲಿ ತಾರತಮ್ಯ ನೀತಿ ಅನುಸರಿಸುತ್ತಿದೆ ಎಂದು ಟೀಕಿಸಿದರು. ಹಿಂದೂ- ಮುಸ್ಲಿಂ ಸಮುದಾಯಕ್ಕೆ ಬೇರೆ ಬೇರೆ ನೀತಿ ಅನುಸರಿಸಿ ಒಡೆಯುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಇದು ಗೂಂಡಾಗಿರಿ ಸರಕಾರ; ತಾಲಿಬಾನ್ ಸರಕಾರ ಇಲ್ಲಿದೆ. ಮುಸಲ್ಮಾನರಿಗೆ ಏನಾದರೂ ಆಗಿದ್ದರೆ ಸಿದ್ದರಾಮಯ್ಯನವರು ಪಂಚೆ ಎತ್ತಿಕೊಂಡು ಬರುತ್ತಿದ್ದರು ಎಂದು ತಿಳಿಸಿದರು.
ಆರೋಪಿ ಮತಿಭ್ರಮಣೆಗೆ ಒಳಗಾದವ ಎಂದು ಕಾಂಗ್ರೆಸ್ಸಿಗರು ಕಥೆ ಹೆಣೆದಿದ್ದಾರೆ. ಆತ 10 ವರ್ಷಗಳಿಂದ ಅವರ ಅಣ್ಣನ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಮಾಹಿತಿ ಇದೆ. ಆತ ಮದ್ಯಪಾನ ಮಾಡಿದ್ದರೆ ಅಷ್ಟು ಹೊತ್ತು ಬಾರ್ ತೆರೆದಿರಲು ಹೇಗೆ ಸಾಧ್ಯ? ಮುಂಜಾನೆ 3 ಅಥವಾ 4ರ ಹೊತ್ತಿಗೆ ಇಂಥ ದುಷ್ಕøತ್ಯ ಮಾಡಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು.
 
ಸುಮಾರು 500 ಕೋಟಿಗೂ ಹೆಚ್ಚು ಮೌಲ್ಯದ ಜಾಗದ ದನದ ಆಸ್ಪತ್ರೆ ಇಲ್ಲಿದೆ. ಈ ಜಾಗವನ್ನು ಸರಕಾರವು ವಕ್ಫ್ ಬೋರ್ಡಿಗೆ ನೀಡಿದೆ. ಅದರ ವಿರುದ್ಧ ಹೋರಾಟ ಮಾಡಿದವರಲ್ಲಿ ಮುಂಚೂಣಿಯಲ್ಲಿ ಕರ್ಣ ಇದ್ದು, ಕರ್ಣನ ಹಸುಗಳ ಕೆಚ್ಚಲು ಕತ್ತರಿಸುವ ಮೂಲಕ ಕರ್ಣನಿಗೂ ಎಚ್ಚರಿಕೆ ನೀಡಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದರು.
 
ಒಬ್ಬರೇ ಮಾಡಿದ ಕೃತ್ಯ ಇದಲ್ಲ; ಇದರ ಹಿಂದಿರುವ ಎಲ್ಲರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಅವರು ಆಗ್ರಹಿಸಿದರು. ಇದೊಂದು ಧರ್ಮಯುದ್ಧ; ಹಿಂದೂಪರ ಸಂಘಟನೆಗಳ ಹೋರಾಟಕ್ಕೆ ಬಿಜೆಪಿ ಬೆಂಬಲ ಕೊಡಲಿದೆ ಎಂದು ಅವರು ಪ್ರಕಟಿಸಿದರು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಲಿಬಾಬ ಮತ್ತು 40 ಕಳ್ಳರ ಕಥೆಯ ತದ್ರೂಪವೇ ಸಿದ್ದರಾಮಯ್ಯರ ತಂಡ: ಡಿ.ವಿ. ಸದಾನಂದಗೌಡ

ಕಾಂಗ್ರೆಸ್ ಸರಕಾರವು ಜನರ ಪಾಲಿಗೆ ಬದುಕಿದ್ದೂ ಸತ್ತಂತಿದೆ: ಬಿ.ವೈ.ವಿಜಯೇಂದ್ರ

DGP Om Prakash murder: ಮೀನು ಊಟ ಮಾಡುತ್ತಿರುವಾಗಲೇ ಓಂ ಪ್ರಕಾಶ್ ಮೇಲೆ ನಡೆದಿತ್ತು ಡೆಡ್ಲೀ ಅಟ್ಯಾಕ್

Pope Francis Passes away: ಕ್ಯಾಥೋಲಿಕ್ ಪರಮೋಚ್ಛ ಗುರು ಪೋಪ್ ಫ್ರಾನ್ಸಿಸ್ ಇನ್ನಿಲ್ಲ

Rahul Gandhi: ಚುನಾವಣೆ ಆಯೋಗವೇ ಅಕ್ರಮ ಮಾಡ್ತಿದೆ: ಅಮೆರಿಕಾದಲ್ಲಿ ಕಿಡಿ ಕಾರಿದ ರಾಹುಲ್ ಗಾಂಧಿ, ದೇಶದ್ರೋಹಿ ಎಂದ ಬಿಜೆಪಿ

ಮುಂದಿನ ಸುದ್ದಿ
Show comments