Daily Horoscope
✕

ಕಾಂಗ್ರೆಸ್ ಹೈಕಮಾಂಡಿಗೆ ಕರ್ನಾಟಕ ರಾಜ್ಯ ಎಟಿಎಂ: ವಿಜಯೇಂದ್ರ

Krishnaveni K
ಬುಧವಾರ, 4 ಫೆಬ್ರವರಿ 2026 (12:29 IST)
ಬೆಂಗಳೂರು: ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿರುವ ಕಾಂಗ್ರೆಸ್ ಸರಕಾರದ ಮುಖ್ಯಮಂತ್ರಿಗಳು ಅಬಕಾರಿ ವಿಚಾರದಲ್ಲಿ ಗಟ್ಟಿಯಾದ ನಿರ್ಧಾರವನ್ನು ತೆಗೆದುಕೊಳ್ಳಬೇಕೆಂಬುದು ಬಿಜೆಪಿ ಮತ್ತು ಜೆಡಿಎಸ್ ನಿಲುವು. ಅಬಕಾರಿ ಸಚಿವರ ರಾಜೀನಾಮೆ ಪಡೆದು ಆಮೇಲೆ ಭ್ರಷ್ಟಾಚಾರದ ಬಗ್ಗೆ ತನಿಖೆ ನಡೆಸಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಒತ್ತಾಯಿಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸರಕಾರದ ಬ್ರಹ್ಮಾಂಡ ಭ್ರಷ್ಟಾಚಾರವು ಇವತ್ತು ಅಬಕಾರಿ ಇಲಾಖೆಗೂ ಬಂದು ತಲುಪಿದೆ. ರಾಜ್ಯ ಸರಕಾರವು ಒಂದು ಕಡೆ ತನ್ನ ಗ್ಯಾರಂಟಿಗಳಿಗೆ ಹಣ ಕ್ರೋಡೀಕರಿಸಲು ಸಾಧ್ಯವಾಗದೇ ಅಬಕಾರಿ ಇಲಾಖೆಯಲ್ಲಿ ಟಾರ್ಗೆಟ್ ಹೆಚ್ಚಿಸಿ ಕರ್ನಾಟಕವನ್ನು ಕುಡುಕರ ರಾಜ್ಯವಾಗಿ ಮಾಡುತ್ತಿದೆ. ಮನಸೋಇಚ್ಛೆ ಲಿಕ್ಕರ್ ಲೈಸನ್ಸ್‍ಗಳನ್ನು ನೀಡಲಾಗುತ್ತಿದೆ ಎಂದು ಆಕ್ಷೇಪಿಸಿದರು.

ರಾಜ್ಯ ಸರಕಾರದ ನೀತಿಯ ಪರಿಣಾಮವಾಗಿ 500 ಮೀಟರ್‍ಗೆ ಒಂದರಂತೆ ಲಿಕ್ಕರ್ ಅಂಗಡಿ ಸಿಗುವಂತಾಗಿದೆ. ಯಾವುದೇ ಇಲಾಖೆಯನ್ನು ತೆಗೆದುಕೊಂಡರೂ ಇಷ್ಟೊಂದು ಭ್ರಷ್ಟಾಚಾರ ನಡೆಯುತ್ತಿದೆ. ಅಬಕಾರಿ ಇಲಾಖೆಯಲ್ಲಿ 6 ಸಾವಿರ ಕೋಟಿ ಹಗರಣ ಎಂದು ಅದರ ಅಧ್ಯಕ್ಷರೂ ಬಹಿರಂಗವಾಗಿ ಹೇಳಿದ್ದಾರೆ ಎಂದು ಗಮನ ಸೆಳೆದರು.

ಆಡಿಯೋ ಟೇಪ್ ಬಹಿರಂಗವಾಗಿದ್ದು ಅದರಲ್ಲಿ ಅಬಕಾರಿ ಸಚಿವ ತಿಮ್ಮಾಪುರ, ಅವರ ಮಗ, ಮುಖ್ಯಮಂತ್ರಿಗಳ ಬಗ್ಗೆ ಉಲ್ಲೇಖವಾಗಿದೆ ಎಂದು ಆರೋಪಿಸಿದರು. ಅಬಕಾರಿ ಸಚಿವರು ಹಿಂದೆ ಯಾರ್ಯಾರು ರಾಜೀನಾಮೆ ನೀಡಿದ್ದಾರೆಂದು ಉದ್ದುದ್ದ ಭಾಷಣ ಮಾಡಿದ್ದಾರೆ. ಮಡಿಕೇರಿಯ ಗಣಪತಿಯವರ ಆತ್ಮಹತ್ಯೆ ಪ್ರಕರಣದಲ್ಲೂ ಜಾರ್ಜ್ ಅವರು ರಾಜೀನಾಮೆ ಕೊಡಬೇಕಿತ್ತು ಎಂದು ಮುಖ್ಯಮಂತ್ರಿಗಳ ಗಮನಕ್ಕೆ ತಂದರು.

ಈ ಸರಕಾರ ಆಡಳಿತಕ್ಕೆ ಬಂದ ಬಳಿಕ ಇತ್ತೀಚೆಗೆ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ನಡೆದಿತ್ತು. ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಅನಿವಾರ್ಯವಾಗಿ ಸಚಿವ ನಾಗೇಂದ್ರ ಅವರು ರಾಜೀನಾಮೆ ಕೊಡುವ ಪರಿಸ್ಥಿತಿ ನಿರ್ಮಾಣವಾಗಿತ್ತು ಎಂದು ಗಮನ ಸೆಳೆದರು. ನಿನ್ನೆ ಮುಖ್ಯಮಂತ್ರಿಯಾದಿಯಾಗಿ ಸಚಿವರ ಭಂಡತನವನ್ನು ಸದನದಲ್ಲಿ ನೋಡಿದ್ದು, ಎಲ್ಲೋ ಒಂದು ಕಡೆ ಈ ಭ್ರಷ್ಟಾಚಾರವು ಸಚಿವರಿಗೇ ಸೀಮಿತವಾಗಿಲ್ಲ ಎಂಬುದು ಸ್ಪಷ್ಟ ಎಂದರು.

ಕರ್ನಾಟಕವು ಕಾಂಗ್ರೆಸ್ ಹೈಕಮಾಂಡಿಗೆ ಎಟಿಎಂ ಆಗಿ ಪರಿವರ್ತನೆಯಾಗಿದೆ. ರಾಜೀನಾಮೆ ಕೊಡದಂತೆ ಅಬಕಾರಿ ಸಚಿವರ ಮೇಲೂ ಒತ್ತಡ ಇದೆ. ಅವರು ರಾಜೀನಾಮೆ ಕೊಟ್ಟರೆ ಅದು ಯಾರ್ಯಾರ ಬುಡಕ್ಕೆ ಬರುತ್ತದೋ ಗೊತ್ತಿಲ್ಲ. ಹಾಗಾಗಿ ಅವರನ್ನು ರಕ್ಷಿಸುವ ಕೆಲಸವನ್ನು ಕಾಂಗ್ರೆಸ್ ಸರಕಾರ ಮಾಡುತ್ತಿದೆ ಎಂದು ಆರೋಪಿಸಿದರು. ಬಿಜೆಪಿ- ಜೆಡಿಎಸ್ ನಿನ್ನೆ ಅಹೋರಾತ್ರಿ ಧರಣಿ ಮಾಡಿದ್ದೇವೆ. ಇವತ್ತು ಕೂಡ ಹೋರಾಟ ಮುಂದುವರೆಯಲಿದೆ ಎಂದು ಪ್ರಕಟಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೇಶದಲ್ಲಿ ಅರಾಜಕತೆ ಸೃಷ್ಟಿಸುವ ಚಟುವಟಿಕೆಗಳನ್ನು ರಾಹುಲ್ ಗಾಂಧಿಯವರು ಮಾಡುತ್ತಿದ್ದಾರೆ: ಛಲವಾದಿ

ನಾಗರಹೊಳೆ ಅಭಯಾರಣ್ಯದಲ್ಲಿ ಹುಚ್ಚಾಟ ಮಾಡಿದ ಬೈಕ್ ಸವಾರರಿಗೆ ತಕ್ಕ ಶಾಸ್ತಿ ಮಾಡಿದ ಸಚಿವ ರಾಮಲಿಂಗಾ ರೆಡ್ಡಿ Video

ತಂದೆ ತಾಯಿ ತೊಡೆ ಮೇಲೆ ಕೂತಿರುತ್ತಿದ್ದರು ಹೇಳಿಕೆ ಸಮರ್ಥಿಸಿಕೊಂಡ ರಾಹುಲ್ ಗಾಂಧಿ: ಹಳೇಬೀಡು ಶಿಲ್ಪದ ಇತಿಹಾಸ ಗೊತ್ತಾ ಎಂದ ಬಿಜೆಪಿ

Gold Price: ಬೆಂಗಳೂರು ಮತ್ತು ಕರ್ನಾಟಕದ ಪ್ರಮುಖ ನಗರಗಳಲ್ಲಿ ಇಂದು ಚಿನ್ನ, ಬೆಳ್ಳಿ ಬೆಲೆ ಎಷ್ಟಿದೆ ಬೆಲೆ

ಗಾಂಜಾ ಕೇಸ್ ಹಾಕಿ… ಹೋಟೆಲ್ ನಲ್ಲಿ ರೊಮ್ಯಾಂಟಿಕ್ ಮೂಡ್ ನಲ್ಲಿದ್ದ ಯುವ ಜೋಡಿಗೆ ಪೊಲೀಸರ ದರ್ಪ Video

ಮುಂದಿನ ಸುದ್ದಿ
Show comments