Webdunia - Bharat's app for daily news and videos

Install App

ನನ್ನ ಮೇಲಿನ ಆರೋಪ ಮಾತ್ರ ಯಾಕೆ, ಮುಡಾವನ್ನು ಸಿಬಿಐಗೆ ವಹಿಸಿ: ವಿಜಯೇಂದ್ರ

Krishnaveni K
ಸೋಮವಾರ, 16 ಡಿಸೆಂಬರ್ 2024 (12:50 IST)
ಬೆಳಗಾವಿ: ಮೈಸೂರಿನ ಮುಡಾ ಹಗರಣ, ವಕ್ಫ್ ಅವ್ಯವಹಾರ ಸಂಬಂಧಿಸಿದ ಅನ್ವರ್ ಮಾಣಿಪ್ಪಾಡಿ ಅವರ ವರದಿ, ನನ್ನ ಮೇಲಿನ 150 ಕೋಟಿಯ ಆರೋಪ- ಇವೆಲ್ಲವುಗಳ ಸಮಗ್ರ ಸಿಬಿಐ ತನಿಖೆಗೆ ನೀವೇ ಆದೇಶ ಮಾಡಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಒತ್ತಾಯಿಸಿದರು. 

ಬೆಳಗಾವಿ ಸುವರ್ಣ ಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಇಂದು ಮಾತನಾಡಿದ ಅವರು, ನನ್ನ ಮೇಲಿನ 150 ಕೋಟಿಯ ಆರೋಪವನ್ನೂ ಸಿಬಿಐ ತನಿಖೆಗೆ ಕೊಡಿ, ಅನ್ವರ್ ಮಾಣಿಪ್ಪಾಡಿಯವರ ವರದಿ ಸ್ವೀಕರಿಸಿ ಅದರ ಬಗ್ಗೆಯೂ ಸಿಬಿಐ ತನಿಖೆ ಮಾಡಿಸಿ ಎಂದು ಸಿದ್ದರಾಮಯ್ಯರನ್ನು ಆಗ್ರಹಿಸಿದರು. ವಕ್ಫ್ ಜಾಗದ ವಿಚಾರದಲ್ಲಿ ಲಕ್ಷ ಲಕ್ಷ ಕೋಟಿಯ ಅವ್ಯವಹಾರ ಆಗಿದೆ ಎಂಬ ವರದಿ ಇದ್ದು ಅದರ ಸಮಗ್ರ ತನಿಖೆಯೂ ಆಗಲಿ ಎಂದು ಒತ್ತಾಯಿಸಿದರು.
 
ಆಡಳಿತ ಪಕ್ಷದವರು ಕೆಲಸಕ್ಕೆ ಬಾರದ ಸಂಗತಿಗಳನ್ನು ಇವತ್ತು ಸದನದಲ್ಲಿ ಪ್ರಸ್ತಾಪ ಮಾಡುತ್ತಿದ್ದಾರೆ ಎಂದು ಆಕ್ಷೇಪಿಸಿದರು. ಬಾಣಂತಿಯರ ಸಾವು, ಹಸುಗೂಸುಗಳ ಮರಣ, ಉತ್ತರ ಕರ್ನಾಟಕದ ವಿಚಾರಗಳು ಸದನದಲ್ಲಿ ಚರ್ಚೆ ಆಗಬಾರದೆಂಬ ಉದ್ದೇಶ ಇದರ ಹಿಂದಿದೆ ಎಂದು ಆಕ್ಷೇಪಿಸಿದರು.
ಯಡಿಯೂರಪ್ಪ ಅವರು ಕೋವಿಡ್ ಸಂದರ್ಭವನ್ನು ಸಮರ್ಥವಾಗಿ ನಿಭಾಯಿಸಿದ್ದರು. ಆದರೆ, ಅವರನ್ನೇ ಗುರಿಯಾಗಿ ಇಟ್ಟುಕೊಂಡು ರಾಜಕೀಯವಾಗಿ ಮುಗಿಸುವ ದುರುದ್ದೇಶದಿಂದ ಅರೆಬರೆ ಬೆಂದ ಜಸ್ಟಿಸ್ ಕುನ್ಹ ಮಧ್ಯಂತರ ವರದಿಯನ್ನು ಇಟ್ಟುಕೊಂಡು ಎಫ್‍ಐಆರ್ ದಾಖಲಿಸಿದ್ದಾರೆ. ಇದರ ಜೊತೆಗೆ ಮುನಿರತ್ನ ವಿಚಾರವನ್ನೂ ಚರ್ಚಿಸಲು ಮುಂದಾಗಿದ್ದಾರೆ ಎಂದು ಟೀಕಿಸಿದರು. 
 
ಸಿದ್ದರಾಮಯ್ಯನವರೇ ಈ ರೀತಿ ಗೊಡ್ಡು ಬೆದರಿಕೆಗಳಿಗೆ ಹೆದರುವ ಪ್ರಶ್ನೆ ಇಲ್ಲ; ಇದ್ಯಾವುದೂ ಹೊಸದಲ್ಲ ಎಂದು ತಿಳಿಸಿದರು. ಹಿಂದೆ ಯಡಿಯೂರಪ್ಪ ಅವರ ವಿರುದ್ಧ ಸಿಎಜಿ ವರದಿ ಸಂಬಂಧ 25 ಪ್ರಕರಣಗಳನ್ನು ಸಿದ್ದರಾಮಯ್ಯರ ಸರಕಾರವು ದಾಖಲಿಸಿ ಯಡಿಯೂರಪ್ಪ, ಬಿಜೆಪಿಯನ್ನು ಮುಗಿಸಲು ಪಿತೂರಿ ಮಾಡಲಾಗಿತ್ತು. ಯಡಿಯೂರಪ್ಪನವರು ಬಿಜೆಪಿ ರಾಜ್ಯಾಧ್ಯಕ್ಷರಾದರೆ ತಾವು ಮತ್ತೆ ಅಧಿಕಾರಕ್ಕೆ ಬರಲು ಸಾಧ್ಯವಾಗದೆಂದು ಯೋಚಿಸಿ ಈ ಕೆಲಸ ಮಾಡಿದ್ದರು ಎಂದು ಆರೋಪಿಸಿದರು.
 
ಸಿದ್ದರಾಮಯ್ಯನವರು ಮುಡಾ, ವಾಲ್ಮೀಕಿ ನಿಗಮದ ಹಗರಣಗಳು, ಅಬಕಾರಿ ಇಲಾಖೆ ಹಗರಣದಲ್ಲಿ ಸಿಲುಕಿ ಹಾಕಿಕೊಂಡಿದ್ದು, ವಿಲವಿಲ ಒದ್ದಾಡುತ್ತಿದ್ದಾರೆ. ಪ್ರಿಯಾಂಕ್ ಖರ್ಗೆಯವರು ನನ್ನ ಮೇಲೆ ಆರೋಪ ಮಾಡಿದ್ದು, ಇತ್ತೀಚೆಗೆ ಅವರ ಬಂಡವಾಳವೂ ಬಯಲಾಗಿದೆ. ಬೆಂಗಳೂರಿನ ಅಂತರರಾಷ್ಟ್ರೀಯ ವಿಮಾನನಿಲ್ದಾಣದ ಬಳಿ ನೂರಾರು ಕೋಟಿÉ ಬೆಲೆಬಾಳುವ 5 ಎಕರೆ ನಿವೇಶನವನ್ನು ರಾಹುಲ್ ಖರ್ಗೆಯವರಿಗೆ ಅಕ್ರಮವಾಗಿ ಮಂಜೂರು ಮಾಡಿದ್ದರು. ಪ್ರಿಯಾಂಕ್ ಖರ್ಗೆಯವರೇ ನೀವು ಅದನ್ನು ಹಿಂತಿರುಗಿಸಿಲ್ಲವೇ ಎಂದು ಪ್ರಶ್ನಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments