Select Your Language

Notifications

webdunia
webdunia
webdunia
webdunia

ಕೊಪ್ಪಳ ಜಿಲ್ಲೆಯಲ್ಲಿ ಶಾಂತಿ, ಸುವ್ಯವಸ್ಥೆ ಕದಡಿದರೆ ರಾಜ್ಯ ಸರಕಾರವೇ ಹೊಣೆ: ವಿಜಯೇಂದ್ರ ಎಚ್ಚರಿಕೆ

BY Vijayendra

Krishnaveni K

ಬೆಂಗಳೂರು , ಸೋಮವಾರ, 18 ಆಗಸ್ಟ್ 2025 (20:10 IST)
ಬೆಂಗಳೂರು: ಕೊಪ್ಪಳ ಮತ್ತು ಕೊಪ್ಪಳ ಜಿಲ್ಲೆಯಲ್ಲಿ ಶಾಂತಿ- ಸುವ್ಯವಸ್ಥೆ ಕದಡಿದರೆ ಅದಕ್ಕೆ ರಾಜ್ಯ ಸರಕಾರವೇ ಹೊಣೆ ಹೊರಬೇಕಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಎಚ್ಚರಿಸಿದ್ದಾರೆ.

ಮಾಧ್ಯಮಗಳ ಜೊತೆ ಇಂದು ಮಾತನಾಡಿದ ವಿಜಯೇಂದ್ರ ಅವರು, ಕೆಲವು ದಿನಗಳ ಹಿಂದೆ ಹಿಂದೂ ಕಾರ್ಯಕರ್ತ ಕೊಪ್ಪಳದ ಗವಿಸಿದ್ದಪ್ಪ ನಾಯಕರ ಆಗಿತ್ತು. ಆ ಹತ್ಯೆಯ ನಂತರದಲ್ಲಿ ಅನೇಕ ಘಟನಾವಳಿಗಳು ನಡೆದಿದ್ದವು ಎಂದು ವಿವರಿಸಿದರು. ರಾಜ್ಯ ಸರಕಾರ ಮತ್ತು ಕೆಲವು ಮುಖಂಡರು ಎಂಥ ಕೀಳು ಮಟ್ಟಕ್ಕೆ ಇಳಿದಿದ್ದಾರೆ ಎಂದರೆ, ಗವಿಸಿದ್ದಪ್ಪ ನಾಯಕರ ಕುಟುಂಬಕ್ಕೆ ನ್ಯಾಯ ಕೊಡುವ ಬದಲಾಗಿ ಗವಿಸಿದ್ದಪ್ಪ ನಾಯಕರ ತಂದೆ, ತಾಯಿ, ಅಕ್ಕ, ತಂಗಿ ವಿರುದ್ಧ ಎಫ್‍ಐಆರ್ ದಾಖಲಿಸಿದ್ದು ದುರ್ದೈವ ಎಂದು ಟೀಕಿಸಿದರು.

ಇಂಥ ನೀಚಮಟ್ಟಕ್ಕೆ ಈ ವ್ಯವಸ್ಥೆ- ರಾಜಕಾರಣಿಗಳು ಇಳಿಯುತ್ತಾರೆ ಎಂದು ಆಕ್ಷೇಪಿಸಿದರು. ಇಂಥ ಬರ್ಬರ ಹತ್ಯೆ ಆದರೂ ಕೊಪ್ಪಳ ಜಿಲ್ಲೆ- ಅಲ್ಲಿನ ಜನರು ಇವತ್ತು ಶಾಂತಿಯುತವಾಗಿ ಇದ್ದಾರೆ. ಬಡ ಕುಟುಂಬದ ವಿರುದ್ಧ ಎಫ್‍ಐಆರ್ ದಾಖಲಿಸುವ ಷಡ್ಯಂತ್ರ ಏನಿದೆಯೋ ಜನರು ಬೀದಿಗಿಳಿದು ಹೋರಾಡುವ ಪರಿಸ್ಥಿತಿಯನ್ನು ರಾಜ್ಯ ಸರಕಾರವೇ ತಂದಿಡುತ್ತಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ರಾಜ್ಯ ಸರಕಾರದಿಂದ ನ್ಯಾಯಕ್ಕಾಗಿ ಈ ಬಡ ಕುಟುಂಬ, ತಂದೆ, ತಾಯಿ ಕಳೆದ ವಾರ ಗೌರವಾನ್ವಿತ ರಾಜ್ಯಪಾಲರನ್ನು ಭೇಟಿ ಮಾಡಿದ್ದವು. ಆ ಕುಟುಂಬಕ್ಕೆ ಸರಕಾರಿ ನೌಕರಿ ಕೊಡಬೇಕು, 50 ಲಕ್ಷ ರೂ. ಪರಿಹಾರ ನೀಡಬೇಕು ಎನ್ನುವ ಅಪೇಕ್ಷೆಯನ್ನು ಅವರು ವ್ಯಕ್ತಪಡಿಸಿದ್ದರು. ನಾವು ಕೂಡ ಸರಕಾರಕ್ಕೆ ಆಗ್ರಹಿಸಿದ್ದೆವು. ಆದರೆ, ಪರಿಶಿಷ್ಟ ಪಂಗಡಕ್ಕೆ ಸೇರಿದ ಬಡ ಕುಟುಂಬದ ವಿರುದ್ಧ ಎಫ್‍ಐಆರ್ ದಾಖಲಿಸಿದ್ದು, ಇಂಥ ದುರ್ಬುದ್ಧಿ ಇವರಿಗೆ ಬರುತ್ತದೆ ಎಂದು ನಾವ್ಯಾರೂ ನಿರೀಕ್ಷೆ ಮಾಡಿರಲಿಲ್ಲ ಎಂದು ತಿಳಿಸಿದರು.

ರಾಜ್ಯ ಸರಕಾರ ಹುಡುಗಾಟಿಕೆ ಮಾಡುವುದನ್ನು ಬಿಟ್ಟು, ಬಡ ಕುಟುಂಬಕ್ಕೆ ನ್ಯಾಯ ಕೊಡಬೇಕು. ಕಾನೂನು - ಸುವ್ಯವಸ್ಥೆ ಏನೇ ಹೆಚ್ಚು ಕಮ್ಮಿ ಆದರೂ ರಾಜ್ಯ ಸರಕಾರ ಜವಾಬ್ದಾರಿ ಹೊರಬೇಕೆಂದು ಆಗ್ರಹಿಸಿದರು. ವಿಧಾನಸಭೆ ವಿಪಕ್ಷದ ಮುಖ್ಯ ಸಚೇತಕ ದೊಡ್ಡನಗೌಡ ಎಚ್.ಪಾಟೀಲ್, ಮಾಜಿ ಸಚಿವ ಹಾಗೂ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರು ಉಪಸ್ಥಿತರಿದ್ದರು.
 
 
 

Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿಯಲ್ಲಿ ಅಧಿಕಾರ ಪಡೆಯಬೇಕಾದ್ರೆ ರೌಡಿ, ಇಲ್ಲದಿದ್ರೆ ರೇಪಿಸ್ಟ್‌ ಆಗಿರಬೇಕು: ಹರಿಪ್ರಸಾದ್ ವ್ಯಂಗ್ಯ